ಕೇರಳದ ಕೆಲವು ಶಾಲೆಗಳಲ್ಲಿ ಬ್ಯಾಕ್ ಬೆಂಚ್‌ಗಳಿಗೆ ವಿದಾಯ

Picture of Savistara

Savistara

Bureau Report

ತಿರುವನಂತಪುರಂ: ವಿನೇಶ್ ವಿಶ್ವನಾಥ್ ನಿರ್ದೇಶನದ ‘ಸ್ಥಾನಾರ್ಥಿ ಶ್ರೀಕುಟ್ಟನ್’ ಸಿನಿಮಾ ಕೇರಳದ ಹಲವು ಶಾಲೆಗಳಲ್ಲಿ ಬದಲಾವಣೆಗೆ ಕಾರಣವಾಗಿದ್ದು, ವಿದ್ಯಾರ್ಥಿಗಳ ಆಸನ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ ತಂದಿದೆ. ಸಾಮಾನ್ಯವಾಗಿ ತರಗತಿಯಲ್ಲಿ ಸಾಂಪ್ರದಾಯಿಕವಾಗಿ 2 ಸಾಲುಗಳಲ್ಲಿ ಹಾಕಿದ ಬೆಂಚ್ ಗಳ ಮೇಲೆ ವಿದ್ಯಾರ್ಥಿಗಳನ್ನು ಕೂರಿಸಿ ಪಾಠ ಮಾಡಲಾಗುತ್ತದೆ. ಆದರೆ ಈ ಚಿತ್ರದಲ್ಲಿ ಅರ್ಧ ವೃತ್ತಾಕಾರದಲ್ಲಿ ಬೆಂಚ್‌ಗಳನ್ನು ಹಾಕಿ ಶಿಕ್ಷಕರು ಮಧ್ಯದಲ್ಲಿ ನಿಂತು ಪಾಠ ಮಾಡುವ ದೃಶ್ಯವಿತ್ತು. ಈ ವ್ಯವಸ್ಥೆಯಲ್ಲಿ ಬ್ಯಾಕ್ ಬೆಂಚ್‌ಗಳು ಇರುವುದಿಲ್ಲ, ಎಲ್ಲ ವಿದ್ಯಾರ್ಥಿಗಳ ಮೇಲೂ ಶಿಕ್ಷಕರು ಗಮನ ಹರಿಸಲು ಸಾಧ್ಯವಾಗುತ್ತದೆ. ಈ ಹಿನ್ನೆಲೆಯಲ್ಲಿ ಕೇರಳದ ಹಲವು ಶಾಲೆಗಳು ಈ ವಿಧದಲ್ಲಿ ಬೆಂಚ್‌ಗಳನ್ನು ಹಾಕುವ ವ್ಯವಸ್ಥೆ ಅಳವಡಿಸಿಕೊಂಡಿವೆ ಎಂದು ವಿಶ್ವನಾಥನ್ ತಿಳಿಸಿದ್ದಾರೆ. ಆದರೆ ಈ ಪರಿಕಲ್ಪನೆ 1994ರಲ್ಲೇ ಕೇರಳದಲ್ಲಿ ಪರಿಚಯವಾಗಿತ್ತು. ಕೇಂದ್ರ ಸರ್ಕಾರ ಕರ್ನಾಟಕ-ಕೇರಳ ಸೇರಿದಂತೆ ಹಲವು ರಾಜ್ಯಗಳಲ್ಲಿ ಜಿಲ್ಲಾ ಪ್ರಾಥಮಿಕ ಶಿಕ್ಷಣ ಕಾರ್ಯಕ್ರಮ ಪ್ರಾರಂಭಿಸಿತ್ತು. ಇದರಲ್ಲಿ ಕೆಲವು ಶಾಲೆಗಳು ಆಸನ ವ್ಯವಸ್ಥೆಯಲ್ಲಿ ಬದಲಾವಣೆಗಳನ್ನು ತಂದಿದ್ದವು. ಆದರೆ ಬಹುತೇಕ ಶಿಕ್ಷಣ ಸಂಸ್ಥೆಗಳು ಸಾಂಪ್ರದಾಯಿಕ ಸಾಲು ವ್ಯವಸ್ಥೆಯನ್ನೇ ಮುಂದುವರಿಸಲು ಒಲವು ತೋರಿದ್ದವು.

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

[t4b-ticker]
error: Content is protected !!