ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಕಾರವಾರ ಜಿಲ್ಲೆಗಳನ್ನೋಳಗೊಂಡ “ವಿಕಸಿತ ಭಾರತ” ಸಮಾವೇಶ

Picture of Savistara

Savistara

Bureau Report

“ಭಾರತ ವಿಕಸಿತವಾಗುತ್ತಿದೆ – ಪ್ರಗತಿಯ ಸಂಕಲ್ಪ ಉದಯಿಸುತ್ತಿದೆ”ಶಿವಮೊಗ್ಗದ ಬಂಜಾರ ಸಮುದಾಯ ಭವನದಲ್ಲಿ ಇಂದು ಹಮ್ಮಿಕೊಂಡಿದ್ದ ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಕಾರವಾರ ಜಿಲ್ಲೆಗಳನ್ನೋಳಗೊಂಡ ಶಿವಮೊಗ್ಗ ವಿಭಾಗದ ವಿಶೇಷ ಕಾರ್ಯಕಾರಿಣಿ ಸಭೆಯ ಎರಡನೇ ಅವಧಿಯಲ್ಲಿ ಸನ್ಮಾನ್ಯ ಶ್ರೀ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ 11 ವರ್ಷಗಳ ಸಾಧನೆಯನ್ನು ಮತದಾರರ ನಡುವೆ ಇನ್ನಷ್ಟು ಸಾಕ್ಷಿಕರಿಸಲು ಆಯೋಜಿಸಲಾಗಿದ್ದ “ವಿಕಸಿತ ಭಾರತ” ಸಮಾವೇಶದಲ್ಲಿ ಭಾಗವಹಿಸಲಾಯಿತು.

ಕಳೆದ 11 ವರ್ಷಗಳಲ್ಲಿ ಮೋದಿ ಸರ್ಕಾರ ಅಂತ್ಯೋದ್ಯಯ ಪರಿಕಲ್ಪನೆಯಡಿ ಎಲ್ಲಾ ವರ್ಗದ ಜನ ಸಾಮಾನ್ಯರ ಹಿತ ಕಾಪಾಡಲು ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಅಭಿವೃದ್ಧಿಗಾಗಿ ಹಾಗೂ ಸ್ವಾವಲಂಬಿ ಜೀವನ ನಡೆಸಲು ರೂಪಿಸಿ ಜಾರಿಗೆ ತಂದು ಅರ್ಹ ಫಲಾನುಭವಿಗಳಿಗೆ ತಲುಪಿಸಿರುವ ನೂರಾರು ಐತಿಹಾಸಿಕ ಯೋಜನೆಗಳ ಬಗ್ಗೆ ಹಾಗೂ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಅಭಿವೃದ್ಧಿಯ ಸಂಕ್ಷಿಪ್ತವಾಗಿ ಮಾತನಾಡಲಾಯಿತು.

11 ವರ್ಷಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿ, ರಾಷ್ಟ್ರೀಯ ಹೆದ್ದಾರಿ ಯೋಜನೆಗಳು, ಕೃಷಿ ಕ್ಷೇತ್ರ ಪ್ರಗತಿ, ಕೈಗಾರಿಕಾ ವಲಯ ಆಧುನೀಕರಣ, ರಾಜತಾಂತ್ರಿಕ ವ್ಯವಸ್ಥೆ ಸುಧಾರಣೆ, ಪ್ರವಾಸೋದ್ಯಮಕ್ಕೆ ಬಲ, ರಕ್ಷಣಾ ವಿಭಾಗ ಉನ್ನತಿಕರಣ, ಯುವ ಮತ್ತು ಮಹಿಳಾ ಸಬಲೀಕರಣ, ದೇಶದ ಅಮೂಲಾಗ್ರ ಆರ್ಥಿಕ ಸುಧಾರಣೆ ಸೇರಿದಂತೆ ಇನ್ನೂ ಅನೇಕ ವಿಭಾಗಗಳಲ್ಲಿ ಕಂಡಿರುವ ಐತಿಹಾಸಿಕ ಬದಲಾವಣೆಯ ಚಿತ್ರಣವನ್ನು ಕಣ್ಣಿಗೆ ಕಟ್ಟಿ ಕೊಡುವ ಪ್ರಾಮಾಣಿಕ ಪ್ರಯತ್ನ ಮಾಡಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ ಬಿ.ವೈ. ವಿಜಯೇಂದ್ರ ಅವರು, ಬಿಜೆಪಿ ಜಿಲ್ಲಾಧ್ಯಕ್ಷರಾದ ಶ್ರೀ ಜಗದೀಶ್ ಅವರು, ಮೂರು ಜಿಲ್ಲೆಗಳ ಹಾಲಿ ಮತ್ತು ಮಾಜಿ ಶಾಸಕ ಮಿತ್ರರು, ಮುಖಂಡರು, ಹಿರಿಯರು, ಗಣ್ಯರು ಹಾಗೂ ಅಪಾರ ಸಂಖ್ಯೆಯ ಕಾರ್ಯಕರ್ತರು ಉಪಸ್ಥಿತರಿದ್ದರು.

[t4b-ticker]
error: Content is protected !!