ಯುಪಿಐ ಬಳಕೆಯಲ್ಲಿ ಕರ್ನಾಟಕ ನಂ. 2

Picture of Savistara

Savistara

Bureau Report

ಮುಂಬೈ: ಪ್ರಸಕ್ತ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ(ಏಪ್ರಿಲ್‌ನಿಂದ ಜೂನ್‌ವರೆಗಿನ ಅವಧಿ) ಯುನಿಫೈಡ್ ಪೇಮೆಂಟ್ಸ್ ಇಂಟರ್‌ಫೇಸ್ (ಯುಪಿಐ) ವಹಿವಾಟುಗಳಲ್ಲಿ ಮಹಾರಾಷ್ಟ್ರ ಮೊದಲ ಸ್ಥಾನದಲ್ಲಿದ್ದು, ಕರ್ನಾಟಕ ಎರಡನೇ ಸ್ಥಾನ ಅಲಂಕರಿಸಿದೆ. ನಂತರದ ಸ್ಥಾನಗಳಲ್ಲಿ ಉತ್ತರ ಪ್ರದೇಶ, ತೆಲಂಗಾಣ ಮತ್ತು ತಮಿಳುನಾಡು ಇವೆ. ಮೇ ತಿಂಗಳಲ್ಲಿ ಮೊದಲ 4 ರಾಜ್ಯಗಳು ಒಟ್ಟು 10 ಲಕ್ಷಕ್ಕೂ ಹೆಚ್ಚು ವಹಿವಾಟುಗಳನ್ನು ಮಾಡಿದ್ದರೆ, ಜೂನ್‌ನಲ್ಲಿ ಈ ಸಂಖ್ಯೆ ಕಡಿಮೆಯಾಗಿದೆ. ದೇಶಾದ್ಯಂತ ಒಂದು ತಿಂಗಳಲ್ಲಿ 24 ಲಕ್ಷ ಕೋಟಿ ರೂ.ಗಿಂತ ಹೆಚ್ಚು ಮೌಲ್ಯದ ಯುಪಿಐ ವಹಿವಾಟು ನಡೆಯುತ್ತದೆ. ಮೇ ತಿಂಗಳಲ್ಲಿ ಮಹಾರಾಷ್ಟ್ರ 3 ಲಕ್ಷ ಕೋಟಿ ರೂ. ಮೌಲ್ಯದ ಯುಪಿಐ ವಹಿವಾಟು ನಡೆಸಿದ್ದರೆ, ಕರ್ನಾಟಕ ಸುಮಾರು 2 ಲಕ್ಷ ಕೋಟಿ ರೂ. ವಹಿವಾಟು ದಾಖಲಿಸಿದೆ. ಉತ್ತರ ಪ್ರದೇಶದಲ್ಲಿ 1.8 ಲಕ್ಷ ಕೋಟಿ ರೂ., ತೆಲಂಗಾಣದಲ್ಲಿ 1.75 ಲಕ್ಷ ಕೋಟಿ ರೂ. ಮೌಲ್ಯದ ಯುಪಿಐ ವಹಿವಾಟುಗಳು ನಡೆದಿವೆ.

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

[t4b-ticker]
error: Content is protected !!