ಕಾಂಗ್ರೆಸ್ ; ಡಿಸಿಎಂ ಡಿಕೆಶಿ ಮೌನ ದೀಕ್ಷೆ!:ಪಕ್ಷದ ಹಿತ ನನ್ನ ಆದ್ಯತೆ: ಸ್ಪಷ್ಟನೆ

Picture of Savistara

Savistara

Bureau Report

ಬೆಂಗಳೂರು: “ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಅವರು ನನಗೆ ದೀಕ್ಷೆ ಕೊಟ್ಟಿದ್ದಾರೆ. ಅದನ್ನು ಸಂತೋಷದಿಂದ ಸ್ವೀಕರಿಸಿದ್ದು, ಪಕ್ಷ ಮತ್ತು ಸರಕಾರದ ಹಿತ ನನ್ನ ಆದ್ಯತೆ ಆಗಿದೆ’ ಎಂದು ಉಪಮುಖ್ಯ ಮಂತ್ರಿ ಡಿ.ಕೆ. ಶಿವಕುಮಾ‌ರ್ ಹೇಳಿದ್ದಾರೆ. ಜತೆಗೆ ನಾಯಕತ್ವ ಬದಲಾವಣೆಯ ವಿಷಯ ವಾಗಿ, “ನೀವು ನನಗೆ ಹೇಗೆ ತಿರುಗಿಸಿ ಕೇಳಿ ದರೂ ನಾನಂತೂ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ’ ಎನ್ನುವ ಮೂಲಕ ಅವರು “ಮೌನ ದೀಕ್ಷೆ’ಯನ್ನು ಪ್ರಕಟಿಸಿದ್ದಾರೆ.ಇನ್ನೊಂದೆಡೆ, ಕುರ್ಚಿ ಸಿಗುವುದೇ ಕಷ್ಟ. ಕುರ್ಚಿ ಸಿಕ್ಕಾಗ ತೆಪ್ಪಗೆ ಬಂದು ಕುಳಿತುಕೊಳ್ಳಬೇಕು ಎಂದು ಮಾರ್ಮಿಕವಾಗಿ ಹೇಳುವ ಮೂಲಕ ಆಡಳಿತಾರೂಢ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಮುಖ್ಯ ಮಂತ್ರಿ ಕುರ್ಚಿ ವಿಷಯಕ್ಕೆ ಮತ್ತೂಂದು ತಿರುವು ಕೊಟ್ಟಿದ್ದಾರೆ.

ಮತ್ತೂಂದೆಡೆ, “ನನಗೆ ಬೇರೆ ಪಕ್ಷದಲ್ಲಿ ಇಂತಹ ಕುರ್ಚಿ (ಅಧಿಕಾರ) ನೀಡಲು ಸಾಧ್ಯವಾಗುತ್ತಿರಲಿಲ್ಲ. ಕಾಂಗ್ರೆಸ್‌ನಿಂದ ಮಾತ್ರ ಇದು ಸಾಧ್ಯ. ಶ್ರಮಕ್ಕೆ ತಕ್ಕ ಪ್ರತಿಫಲ ಸಿಕ್ಕೇ ಸಿಗುತ್ತದೆ’ ಎಂದು ಹೊಸ ರಾಗ ಹಾಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ, “5 ವರ್ಷ ನಾನೇ ಸಿಎಂ’ ಎಂದಿದ್ದರೂ ಡಿ.ಕೆ. ಶಿವಕುಮಾರ್ ಸುತ್ತಲೇ ಕುರ್ಚಿ ಚರ್ಚೆಗಳು ಮಾತ್ರ ಗಿರಕಿ ಹೊಡೆಯುತ್ತಿವೆ.ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ಕೆಪಿಸಿಸಿ ಕಚೇರಿ ಬಳಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾ‌ರ್, “ಪಕ್ಷ ನನಗೆ ಕೊಟ್ಟಿರುವ ಜವಾಬ್ದಾರಿಯನ್ನು ಮುಂದುವರಿಸಿಕೊಂಡು ಹೋಗುತ್ತೇನೆ. ಅದನ್ನು ನಾನು ಖುಷಿಯಿಂದ ಸ್ವೀಕರಿಸಿ, ಮುಂದುವರಿಸಿಕೊಂಡು ಹೋಗುತ್ತೇನೆ. ಇದರ ಹೊರತಾಗಿ ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ, ಬಲಿಯೂ ಆಗುವುದಿಲ್ಲ’ ಎಂದು ಸೂಚ್ಯವಾಗಿ ಹೇಳಿದರು.

“ನಾಯಕತ್ವ ಬದಲಾವಣೆ ವಿಷಯವಾಗಿ ಹೈಕಮಾಂಡ್ ಹೇಳುವ ಮುನ್ನ ಸಿದ್ದರಾಮಯ್ಯ ಅವರು ಹೇಳಿಕೆ ಕೊಟ್ಟಿರುವುದು ಎಷ್ಟು ಸರಿ’ ಎಂದು ಕೇಳಿದಾಗ, “ನೀವು ನನಗೆ ಹೇಗೆ ತಿರುಗಿಸಿ ಕೇಳಿದರೂ ನಾನಂತೂ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ನಿಮ್ಮ ಪ್ರಶ್ನೆಗಳಲ್ಲೆ ಉತ್ತರವಿದೆ. ಖರ್ಗೆ ಅವರು ನಮಗೆ ದೀಕ್ಷೆ ಕೊಟ್ಟಿದ್ದಾರೆ. ಅದರಂತೆ ನಡೆದುಕೊಳ್ಳುತ್ತೇವೆ’ ಎಂದರು.”ನಾವು ಸುರ್ಜೇವಾಲ ಅವರ ವಿನಾ ಬೇರೆ ಯಾವುದೇ ಹೈಕಮಾಂಡ್ ನಾಯಕರನ್ನು ಭೇಟಿಯಾಗಿಲ್ಲ. ರಾಜ್ಯ ಉಸ್ತುವಾರಿಗಳ ಜತೆ ನಮ್ಮ ಕಾರ್ಯಕರ್ತರಿಗೆ ಕೆಲವು ಸ್ಥಾನಮಾನ ನೀಡುವ ಬಗ್ಗೆ ಚರ್ಚೆ ಮಾಡಲಾಗಿದೆ. ಎಲ್ಲ ಶಾಸಕರು ತಮ್ಮ ಅಭಿಪ್ರಾಯ ಸಲ್ಲಿಸಿದ್ದಾರೆ. ಸಚಿವರ ಅಭಿಪ್ರಾಯ ಸಂಗ್ರಹಿಸಬೇಕಿದೆ. ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಪಕ್ಷ ಸಂಘಟನೆ ವಿಷಯದಲ್ಲಿ ಶ್ರಮಿಸಿರುವವರಿಗೆ ಹಾಗೂ ಕೆಲವರಿಗೆ ನಾವು ಕೊಟ್ಟಿರುವ ಮಾತಿಗೆ ಬದ್ಧವಾಗಿ ಸ್ಥಾನಮಾನ ನೀಡಬೇಕಿದೆ. ಈ ಪ್ರಕ್ರಿಯೆ ಈಗಾಗಲೇ ತಡವಾಗಿದೆ. ಇದು ಅಂತಿಮ ಹಂತಕ್ಕೆ ಬಂದಿದೆ. ಅಧ್ಯಕ್ಷನಾಗಿ ನಾನು ಪಕ್ಷದ ಸಂಘಟನೆಗೆ ಶ್ರಮಿಸಿದವರ ಹೆಸರನ್ನು ಸೇರಿಸಿ ಇದರ ಪ್ರಸ್ತಾವನೆಯನ್ನು ಮತ್ತೂಮ್ಮೆ ದಿಲ್ಲಿಗೆ ಕಳುಹಿಸಿ ಅನುಮತಿ ಪಡೆಯಲಾಗುವುದು’ ಎಂದು ತಿಳಿಸಿದರು.

ತಮಗೆ ಕೆಲವು ಶಾಸಕರ ಬೆಂಬಲ ಮಾತ್ರವಿದೆ ಎಂಬ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಡಿ.ಕೆ. ಶಿವಕುಮಾರ್, “ನಾನು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ. ಪಕ್ಷವು ಏನು ಹೇಳುತ್ತದೆಯೋ ಅದನ್ನು ಮಾಡುತ್ತೇನೆ. ನಾನು ನಿನ್ನೆ (ಗುರುವಾರ) ಬ್ಯುಸಿ ಇದ್ದೆ. ಅದರ ಮಧ್ಯೆ ಮುಖ್ಯಮಂತ್ರಿಗಳ ಹೇಳಿಕೆ ನೋಡಿದೆ. ನಿಮ್ಮ ಪ್ರಶ್ನೆಗಳಿಗೆ ಅವರೇ ಉತ್ತರ ನೀಡಿದ್ದಾರೆ. ಅವರು ಉತ್ತರ ನೀಡಿದ ಮೇಲೆ ನಾವು ಮತ್ತೆ ಆ ವಿಷಯ ಚರ್ಚೆ ಮಾಡುವುದು ಸೂಕ್ತವಲ್ಲ. ನೀವು ಕೂಡ ಮತ್ತೆ ಆ ವಿಷಯವಾಗಿ ಪ್ರಶ್ನೆ ಮಾಡುವುದು ಸೂಕ್ತವಲ ಎಂದು ಹೇಳಿದರು. “ಈ ಹಿಂದೆ ತಮ್ಮ ಬಳಿ ಆಯ್ಕೆ ಇಲ್ಲ ಎಂದು ಹೇಳಿದ್ದೀರಿ,ಈಗಲೂ ನೀವು ಅದೇ ಸ್ಥಿತಿಯಲ್ಲಿದ್ದೀರಾ’ ಎಂದು ಕೇಳಿದಾಗ, “ನಿಮಗೆ ನಮ್ಮ ವಿಷಯದಲ್ಲಿ ಯಾಕೆ ಗಾಬರಿ? ಈ ವಿಷಯದಲ್ಲಿ ನಮಗೆ ಗಾಬರಿಯಿಲ್ಲ’ ಎಂದರು.”ಡಿ.ಕೆ. ಶಿವಕುಮಾರ್ ಸಿಎಂ ಆಗಬೇಕು ಎಂಬ ಆಸೆ ಅನೇಕರಿಗೆ ಇರುತ್ತದಲ್ಲವೇ’ ಎಂದು ಕೇಳಿದಾಗ, “ನಿಮ್ಮಲ್ಲೂ ಅನೇಕರಿಗೆ ಅನೇಕ ಆಸೆ ಇರುತ್ತವೆ. ನಾನು ಈ ವಿಷಯವಾಗಿ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಅದರ ಆವಶ್ಯಕತೆ ಇಲ್ಲ. ಯಾರು ಏನೇನು ಮಾತನಾಡಿದ್ದಾರೆ, ಅವರೇ ಪ್ರಶ್ನೆ ಉತ್ತರ ಎಲ್ಲವನ್ನೂ ನೀಡಿದ್ದಾರೆ. ಸದ್ಯಕ್ಕೆ ನಾನು ಯಾವುದೇ ಉತ್ತರ ನೀಡುವುದಿಲ್ಲ ಎಂದು ಪುನರುಚ್ಚರಿಸಿದರು.

“2028ರ ಚುನಾವಣೆಗೂ ನನ್ನದೇ ನಾಯಕತ್ವ’ ಎಂಬ ಸಿದ್ದರಾಮಯ್ಯ ಅವರ ಹೇಳಿಕೆ ಬಗೆಗಿನ ಪ್ರಶ್ನೆಗೆ, “ಅದು ಅವರ ವೈಯಕ್ತಿಕ ಹೇಳಿಕೆ. ಅದನ್ನು ಹೇಳುವ ಸಂಪೂರ್ಣ ಅಧಿಕಾರ ಅವರಿಗಿದೆ. ಪಕ್ಷದ ಅಧ್ಯಕ್ಷನಾಗಿ ಪಕ್ಷ ಸಂಘಟನೆ ಮಾಡುವುದು ನನ್ನ ಜವಾಬ್ದಾರಿ. ಪಕ್ಷ ಹಾಗೂ ಸರಕಾರದ ಹಿತಾಸಕ್ತಿ ಕಾಯುವುದು ನನ್ನ ಗುರಿ’ ಎಂದು ಸ್ಪಷ್ಟಪಡಿಸಿದರು.

ಕುರ್ಚಿ ಸಿಕ್ಕಾಗ ತೆಪ್ಪಗೆ ಕುಳಿತುಕೊಳ್ಳಬೇಕು: ಡಿಸಿಎಂ

“ಕುರ್ಚಿ ಸಿಗುವುದೇ ಕಷ್ಟ. ಹಾಗಾಗಿ, ಅದು ಸಿಕ್ಕಿದಾಗ ತೆಪ್ಪಗೆ ಕುಳಿತುಕೊಳ್ಳಬೇಕು’ ಎಂದು ಡಿ.ಕೆ. ಶಿವಕುಮಾ‌ರ್ ತೀಕ್ಷ್ಮವಾಗಿ ಹೇಳಿದರು. ಬೆಂಗಳೂರು ವಕೀಲರ ಸಂಘ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಖಾಲಿ ಇದ್ದ ಕುರ್ಚಿ ಖಾಲಿ ಇದ್ದರೂ ಇಕ್ಕೆಲಗಳಲ್ಲಿ ನಿಂತಿದ್ದ ವಕೀಲರನ್ನು ಉದ್ದೇಶಿಸಿ ತಮ್ಮದೇ ಧಾಟಿಯಲ್ಲಿ ಹೇಳಿದ ಡಿ.ಕೆ. ಶಿವಕುಮಾರ್, “ಇಷ್ಟೊಂದು ಕುರ್ಚಿಗಳಿವೆ ಬನ್ನಿ, ಕುಳಿತುಕೊಳ್ಳಿ. ಕುರ್ಚಿ ಸಿಗುವುದೇ ಕಷ್ಟ. ಕುರ್ಚಿ ಸಿಕ್ಕಾಗ ತೆಪ್ಪಗೆ ಬಂದು ಕುಳಿತುಕೊಳ್ಳಬೇಕು. ನಿಮ್ಮನ್ನು ನೋಡಿದರೆ ತ್ಯಾಗಿಗಳ ತರಹ ಕಾಣುತ್ತ ಇದ್ದೀರಿ’ ಎಂದು ಚಟಾಕಿ ಹಾರಿಸಿದರು. ಇನ್ನೊಂದೆಡೆ ಮಾಜಿ ಸಚಿವೆ ಬಿ.ಟಿ. ಲಲಿತಾ ನಾಯಕ್‌ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿ, “ಬೇರೆ ಯಾವುದೇ ಪಕ್ಷದಲ್ಲಿ ಇಂತಹ ಅವಕಾಶ ಸಿಗುವುದಿಲ್ಲ. ನನಗೆ ಬೇರೆ ಪಕ್ಷದಲ್ಲಿ ಇಂತಹ ಕುರ್ಚಿ

ಖಾಲಿ ಇದ್ದರೂ ಇಕ್ಕೆಲಗಳಲ್ಲಿ ನಿಂತಿದ್ದ ವಕೀಲರನ್ನು ಉದ್ದೇಶಿಸಿ ತಮ್ಮದೇ ಧಾಟಿಯಲ್ಲಿ ಹೇಳಿದ ಡಿ.ಕೆ. ಶಿವಕುಮಾರ್, “ಇಷ್ಟೊಂದು ಕುರ್ಚಿಗಳಿವೆ ಬನ್ನಿ, ಕುಳಿತುಕೊಳ್ಳಿ. ಕುರ್ಚಿ ಸಿಗುವುದೇ ಕಷ್ಟ. ಕುರ್ಚಿ ಸಿಕ್ಕಾಗ ತೆಪ್ಪಗೆ ಬಂದು ಕುಳಿತುಕೊಳ್ಳಬೇಕು. ನಿಮ್ಮನ್ನು ನೋಡಿದರೆ ತ್ಯಾಗಿಗಳ ತರಹ ಕಾಣುತ್ತ ಇದ್ದೀರಿ’ ಎಂದು ಚಟಾಕಿ ಹಾರಿಸಿದರು. ಇನ್ನೊಂದೆಡೆ ಮಾಜಿ ಸಚಿವೆ ಬಿ.ಟಿ. ಲಲಿತಾ ನಾಯಕ್‌ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿ, “ಬೇರೆ ಯಾವುದೇ ಪಕ್ಷದಲ್ಲಿ ಇಂತಹ ಅವಕಾಶ ಸಿಗುವುದಿಲ್ಲ. ನನಗೆ ಬೇರೆ ಪಕ್ಷದಲ್ಲಿ ಇಂತಹ ಕುರ್ಚಿ (ಅಧಿಕಾರ) ನೀಡಲು ಸಾಧ್ಯವಾಗುತ್ತಿರಲಿಲ್ಲ. ವೇದಿಕೆಯಲ್ಲಿರುವ ಪಕ್ಷದ ನಾಯಕರಿಗೆ ಇಂತಹ ಸ್ಥಾನ ನೀಡಲು ಯಾವುದೇ ಪಕ್ಷದಲ್ಲಿ ಆಗುತ್ತಿರಲಿಲ್ಲ. ಕಾಂಗ್ರೆಸ್‌ನಿಂದ ಮಾತ್ರ ಇದು ಸಾಧ್ಯ. ಶ್ರಮಕ್ಕೆ ತಕ್ಕ ಪ್ರತಿಫಲ ಸಿಕ್ಕೇ ಸಿಗುತ್ತದೆ’ ಎಂದು ಹೇಳಿದ್ದಾರೆ.

ಸಿದ್ದರಾಮಯ್ಯ ಅವರಿಗೆ ನಾನೇ ಮುಖ್ಯಮಂತ್ರಿ ಎಂದು ಹೇಳಿಕೊಳ್ಳುವಂಥ ದುಃಸ್ಥಿತಿ ಬಂದಿದೆ. ಡಿಸಿಎಂ ಡಿ.ಕೆ. ಶಿವಕುಮಾ‌ರ್ ಮತ್ತು ಸಿದ್ದರಾಮಯ್ಯ ಯಾರ್ಯಾರಿಗೆ ಎಷ್ಟು ಶಾಸಕರ ಬೆಂಬಲ ಇದೆ ಎಂಬುದನ್ನು ಪ್ರದರ್ಶಿಸಬೇಕು. ಕಾಂಗ್ರೆಸ್ ಪಕ್ಷದ ಆಂತರಿಕ ವಿಷಯವಾದರೂ ಅಧಿಕಾರ ಬದಲಾವಣೆ ಕುರಿತಾಗಿ ಒಪ್ಪಂದ ಆಗಿತ್ತೇ ಎನ್ನುವ ಕುರಿತು ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಉತ್ತರ ನೀಡಬೇಕು.

ಪ್ರಹ್ಲಾದ್ ಜೋಶಿ, ಕೇಂದ್ರ ಸಚಿವ

ಅಧಿಕಾರ ಹಂಚಿಕೆ ಒಪ್ಪಂದದ ವಿಷಯವನ್ನು ನಮ್ಮ ಗಮನಕ್ಕೆ ತಂದು ಮಾಡಿದ್ದರೆ, ಇಷ್ಟೆಲ್ಲ ಗೊಂದಲಗಳು ಆಗುತ್ತಿರಲಿಲ್ಲ. ಏನು ಒಪ್ಪಂದ ಆಗಿದೆ. ಏನು ಆಗಿಲ್ಲ ಎಂಬುದು ನಮಗೆ ಗೊತ್ತಿಲ್ಲ. ಅವರವರೇ ಚರ್ಚೆಗಳನ್ನು ನಡೆಸಿ ನಿರ್ಧಾರ ಮಾಡಿಕೊಂಡಿದ್ದರು. ಹೀಗಾಗಿ ಈ ಗೊಂದಲಗಳು ಸೃಷ್ಟಿಯಾದವು. ಈಗ ಗೊಂದಲಗಳು ಬಗೆಹರಿದಂತೆ ಕಾಣುತ್ತಿದೆ.- ಡಾ। ಪರಮೇಶ್ವ‌ರ್, ಗೃಹ ಸಚಿವ

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

[t4b-ticker]
error: Content is protected !!