ದೇಶದ ಎರಡನೇ ಅತಿ ಉದ್ದದ ಸಿಗಂದೂರು ಸೇತುವೆ ಜುಲೈ 14ರಂದು ರಾಷ್ಟ್ರಕ್ಕೆ ಅರ್ಪಣೆ

Picture of Savistara

Savistara

Bureau Report

ದೇಶದಲ್ಲಿಯೇ 2ನೇ ಅತೀ ಉದ್ದದ ಕೇಬಲ್ ಆಧಾರಿತ ಸೇತುವೆ ಎಂಬ ಹೆಗ್ಗಳಿಕೆಗೆ ಪಾತ್ರವಾದ ಮತ್ತು ಶರಾವತಿ ಹಿನ್ನೀರು ಭಾಗದ ನಾಗರೀಕರ ದಶಕಗಳ ಕನಸಾದ, 473 ಕೋಟಿ ರೂಪಾಯಿ ವೆಚ್ಚದಲ್ಲಿ ಸೇತುವೆ ನಿರ್ಮಿಸಲಾಗಿರುವ ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಸಿಗಂದೂರು ಸೇತುವೆ ಜುಲೈ 14 ರಂದು ಲೋಕಾರ್ಪಣೆಗೊಳ್ಳಲಿದೆ. ಈ ಸಮಾರಂಭದಲ್ಲಿ ಕೇಂದ್ರ ಭೂ ಸಾರಿಗೆ ಸಚಿವರಾದ ಸನ್ಮಾನ್ಯ ಶ್ರೀ ನಿತಿನ್ ಗಡ್ಕರಿ ಅವರು ಸೇತುವೆ ಉದ್ಘಾಟಿಸಲಿದ್ದಾರೆ. ಸಮಾರಂಭದಲ್ಲಿ ಕೇಂದ್ರ ಸಚಿವರಾದ ಸನ್ಮಾನ್ಯ ಶ್ರೀ ಪ್ರಹ್ಲಾದ್ ಜೋಷಿ ಅವರು ಉಪಸ್ಥಿತರಿರಲಿದ್ದಾರೆ. ಐತಿಹಾಸಿಕ ಸೇತುವೆಗೆ ಸಿಗಂದೂರು ಚೌಡೇಶ್ವರಿ ಹೆಸರು ಇಡುವಂತೆ ಪಕ್ಷದ ವತಿಯಿಂದ ರಾಜ್ಯ ಸರ್ಕಾರಕ್ಕೆ ಮನವಿ ಮಾಡಲಾಗುವುದು. ಸಿಂಗದೂರು ಧಾರ್ಮಿಕ ಪ್ರವಾಸಿ ಕೇಂದ್ರವಾಗಿಯೂ ಅಭಿವೃದ್ಧಿ ಕಂಡಿದೆ. ಸೇತುವೆಗೆ ಸಿಗಂದೂರು ಚೌಡೇಶ್ವರಿ ಹೆಸರಿಡಬೇಕೆಂಬುದು ಈ ಪ್ರದೇಶದ ಬಹುಜನರ ಅಪೇಕ್ಷೆ.

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

[t4b-ticker]
error: Content is protected !!