ಅರೆಸೆಸ್ಸ್ ಹಿರಿಯ ಕಾರ್ಯಕರ್ತ ಧನಂಜಯ ವಾಗ್ಲೆ ನಿಧನ

Picture of Savistara

Savistara

Bureau Report

ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಸ್ವಯಂಸೇವಕ, ಪುತ್ತೂರು ಬೆದ್ರಾಳ ನಿವಾಸಿ ಧನಂಜಯ ವಾಗ್ಲೆ (75ವ) ಅವರು ಸ್ವಗೃಹದಲ್ಲಿ ನಿಧನರಾದರು.
ಮೂಲತಃ ಸುಳ್ಯದ ಕೋಡಿಯಾಲ ಬೈಲಿನ ಸ್ವಯಂಸೇವಕರಾಗಿದ್ದರು. ಸುಳ್ಯ ತಾಲೂಕಿನಲ್ಲಿ ಜನಸಂಘ ಹಾಗು ಬಿಜೆಪಿಯನ್ನು ಕಟ್ಟಿ ಬೆಳೆಸುವುದರಲ್ಲಿ ಪ್ರಮುಖ ಪಾತ್ರ ವಹಿಸಿದ್ದರು, ಸುಮಾರು 20 ವರ್ಷಗಳ ಕಾಲ ಬಿಜೆಪಿಯ ಪೂರ್ಣಾವಧಿ ಕಾರ್ಯಕರ್ತರಂತೆ ಕಾರ್ಯ ನಿರ್ವಹಿಸಿದ್ದರು.
ತುರ್ತು ಪರಿಸ್ಥಿತಿ, ಅಯೋಧ್ಯೆಯ ರಾಮ ಜನ್ಮಭೂಮಿ ಹೋರಾಟದಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದ ವಾಗ್ಲೆಯವರ ನಿಧನಕ್ಕೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಮುಖರು, ಬಿಜೆಪಿ ಹಾಗು ಹಿಂದೂ ಸಂಘಟನೆಗಳ ಪ್ರಮುಖರು ಸಂತಾಪ ಸೂಚಿಸಿದ್ದಾರೆ.
ಮೃತರು ಇಬ್ಬರು ಪುತ್ರರನ್ನು ಅಗಲಿದ್ದಾರೆ.

ಈ ಸಂದರ್ಭದಲ್ಲಿ ಮಾಜಿ ಎಂಎಲ್ ಸಿ ಅಣ್ಣಾ ವಿನಯ ಚಂದ್ರ,ಅರೆಸೆಸ್ಸ್ ದಕ್ಷಿಣ ಪ್ರಾಂತ ಸಹ ಸೇವಾ ಪ್ರಮುಖ್ ನಸೀತಾರಾಮ್,ಬಿಜೆಪಿ ನಗರ ಮಹಾಶಕ್ತಿ ಕೇಂದ್ರ ಅಧ್ಯಕ್ಷ ಕುಸುಮಾಧರ ಎ. ಟಿ, ಸಿಎ ಬ್ಯಾಂಕ್ ಸಿಇಒ ಸುದರ್ಶನ ಸೂರ್ತಿಲ, ಜಿಲ್ಲಾ ಬೌದ್ಧಿಕ ಪ್ರಮುಖ್ ಸುಬ್ರಾಯ,ರಾಜೇಶ್ ಪುತ್ತೂರು, ಇನ್ನಿತರರು ಅಂತ್ಯ ಕ್ರಿಯೆಯಲ್ಲಿ ಭಾಗವಹಿಸಿದ್ದರು.

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

[t4b-ticker]
error: Content is protected !!