
ಶರಾವತಿ ನದಿಯ ಹಿನ್ನೀರಿನಲ್ಲಿ ನೂತನವಾಗಿ ನಿರ್ಮಿಸಲಾಗಿರುವ ದೇಶದ 2 ನೇ ಅತಿದೊಡ್ಡ ಕೇಬಲ್ ಆಧಾರಿತ ಸೇತುವೆ ಅಂಬಾರಗೋಡ್ಲು-ಕಳಸವಳ್ಳಿ ಸಿಗಂದೂರು ಸೇತುವೆಯು ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ಅವರ ಅಮೃತ ಹಸ್ತದಿಂದ ಲೋಕಾರ್ಪಣೆಗೊಂಡಿದೆ. ಶರಾವತಿ ಹಿನ್ನೀರಿನ ಮಕ್ಕಳ ದಶಕಗಳ ಕನಸು ನನಸಾಗಿದೆ. ಈ ಶುಭ ಸಂದರ್ಭದಲ್ಲಿ ಈ ಐತಿಹಾಸಿಕ ಕ್ಷಣದಲ್ಲಿ ಪಾಲ್ಗೊಳ್ಳಲಾಯಿತು.

ಒಬ್ಬ ರಾಜಕಾರಣಿಗೆ ಇಚ್ಛಾಶಕ್ತಿ ಇದ್ದರೆ ಜನರ ಯಾವುದೇ ಕನಸುಗಳಿಗೆ ರೆಕ್ಕೆ ಕಟ್ಟಬಹುದು ಎಂಬುದಕ್ಕೆ ಶ್ರೇಷ್ಠ ನಿದರ್ಶನ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್ ಯಡಿಯೂರಪ್ಪ ಅವರ ಸಂಕಲ್ಪದ ಫಲ ಮತ್ತು ಜನಪ್ರಿಯ ಸಂಸದರಾದ ಬಿ.ವೈ ರಾಘವೇಂದ್ರ ಅವರ ನಿರಂತರ ಶ್ರಮ, ಮಲೆನಾಡಿಗರ ಮುಖದಲ್ಲಿನ ಮಂದಹಾಸ, ನಿರ್ಮಾಣವಾಗಿದ್ದ ಹಬ್ಬದ ವಾತಾವರಣ, ಯೋಜನೆ ಸಾಕಾರಗೊಂಡ ಕ್ಷಣ ನೆರೆದಿದ್ದ ಜನರಲ್ಲಿ ಧನ್ಯತೆಯ ಭಾವ ಮೂಡಿಸಿತ್ತು.

ಈ ವೇಳೆ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವರಾದ ಪ್ರಹ್ಲಾದ್ ಜೋಷಿ, ಕ್ರಿಯಾಶೀಲ ರಾಜ್ಯಾಧ್ಯಕ್ಷರಾದ ಬಿ.ವೈ ವಿಜಯೇಂದ್ರ , ಮುತ್ಸದ್ದಿ ರಾಜಕಾರಣಿ ಕಾಗೋಡು ತಿಮ್ಮಪ್ಪ , ಮಾಜಿ ಸಚಿವರಾದ ಹರತಾಳು ಹಾಲಪ್ಪ , ತೀರ್ಥಹಳ್ಳಿ ಶಾಸಕರಾದ ಆರಗ ಜ್ಞಾನೇಂದ್ರ , ಎಸ್.ಸಿ.ಮೋರ್ಚಾ ರಾಜ್ಯಾಧ್ಯಕ್ಷರು ಹಾಗೂ ಶಾಸಕರಾದ ಸಿಮೆಂಟ್ ಮಂಜು , ಬೈಂದೂರು ಶಾಸಕರಾದ ಗುರುರಾಜ್ ಗಂಟಿಹೊಳೆ , ಶಿವಮೊಗ್ಗ ನಗರ ಶಾಸಕರಾದ ಎಸ್.ಎನ್ ಚನ್ನಬಸಪ್ಪ , ವಿಧಾನ ಪರಿಷತ್ ಶಾಸಕರಾದ ಶ್ರೀಮತಿ ಭಾರತಿ ಶೆಟ್ಟಿ , ಶ್ರೀಮತಿ ಹೆಮಲತಾ ನಾಯಕ್ , ಡಿ.ಎಸ್ ಅರುಣ್ , ಮಾಜಿ ಶಾಸಕರಾದ ಅಶೋಕ್ ನಾಯಕ್ , ಮಲೆನಾಡು ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಗುರುಮೂರ್ತಿ , ಜಿಲ್ಲಾಧ್ಯಕ್ಷರಾದ ಜಗದೀಶ್ , ದಕ್ಷಿಣ ಕನ್ನಡ ಜಿಲ್ಲಾ ಸಂಸದರಾದ ಕ್ಯಾ. ಬ್ರಿಜೇಶ್ ಚೌಟ , ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ್ ಪೂಜಾರಿ , ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು, ರೈತ ಮುಖಂಡರು, ಕಾರ್ಯಕರ್ತರು, ಸಿಗಂದೂರು ಚೌಡೇಶ್ವರಿ ದೇವಿಯ ಭಕ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.















































