

ಸುಳ್ಯ ವಿಧಾನಸಭಾ ಕ್ಷೇತ್ರದ ಕೊಡಿಯಾಲ ಗ್ರಾಮಕ್ಕೆ ಸಂಸದ ಕ್ಯಾ.ಬ್ರಿಜೇಶ್ ಚೌಟ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಕುಂಡೀಲಿ ದೈವಸ್ಥಾನ ಕ್ಕೆ ಸಂಸದರ ನಿಧಿಯಿಂದ ಎರಡು ಲಕ್ಷ ರೂಪಾಯಿ ವೆಚ್ಚದಲ್ಲಿ ನೀಡಿದ ಇಂಟರ್ ಲಾಕ್ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ, ಬೆಳ್ಳಾರೆ ಕೃಷಿ ಪತ್ತಿನ ಸಹಕಾರ ಸಂಘ ಅಧ್ಯಕ್ಷ ಆರ್ ಕೆ ಭಟ್,ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯತೀಶ್ ಅರ್ವರ್, ರಾಕೇಶ್ ರೈ ಕೆಡೆಂಜಿ,ಚಂದ್ರಶೇಖರ ಪನ್ನೆ,ಅನೂಪ್ ಬಿಳಿಮಲೆ ಬಿಜೆಪಿ ಪ್ರಮುಖರು,ಕಾಲೋನಿ ನಿವಾಸಿಗಳು ಉಪಸ್ಥಿತರಿದ್ದರು, ಈ ವೇಳೆ ಸಾರ್ವಜನಿಕರ ಅಹವಾಲು ಸ್ವೀಕರಿಸಲಾಯಿತು.














































