ಕನ್ಯಾಡಿ ಸೇವಾನಿಕೇತನಕ್ಕೆ ವಿಧಾನ ಪರಿಷತ್ ಸದಸ್ಯರಾದ ಕೆ. ಪ್ರತಾಪಸಿಂಹ ನಾಯಕ್ ಭೇಟಿ

Picture of Savistara

Savistara

Bureau Report

ವಿಧಾನ ಪರಿಷತ್ ಸದಸ್ಯರಾದ ಕೆ. ಪ್ರತಾಪಸಿಂಹ ನಾಯಕ್ ರವರು ಜು. 15 ರಂದು ಕನ್ಯಾಡಿ ಸೇವಾನಿಕೇತನಕ್ಕೆ ಭೇಟಿ ನೀಡಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗಾಗಿ ನಿರ್ಮಾಣವಾಗುತ್ತಿರುವ ಪುನಶ್ಚೇತನ ಕೇಂದ್ರದ ಕಟ್ಟಡವನ್ನು ವೀಕ್ಷಿಸಿದರು. ಕರ್ನಾಟಕದಲ್ಲಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಉತ್ತಮ ಪುನಶ್ಚೇತನವನ್ನು ನೀಡುವ ದೃಷ್ಟಿಯಿಂದ ಈ ಯೋಜನೆಗೆ ತಮ್ಮ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯ ಮೂಲಕ 2024-25 ಮತ್ತು 2025-26 ನೇ ಸಾಲಿನಲ್ಲಿ ಒಟ್ಟು 10 ಲಕ್ಷ ರೂಪಾಯಿಯನ್ನು ಮಂಜೂರು ಮಾಡಿರುತ್ತಾರೆ.

ಈ ಸಂದರ್ಭದಲ್ಲಿ ಸೇವಾಧಾಮದ ಸಂಸ್ಥಾಪಕರಾದ ಕೆ. ವಿನಾಯಕ ರಾವ್ ಸಂಸ್ಥೆಯ ಪರವಾಗಿ ಕೃತಜ್ಞತೆ ಸಲ್ಲಿಸಿ ಮುಂಬರುವ ದಿನಗಳಲ್ಲಿಯೂ ಸಹಕರಿಸುವಂತೆ ಮನವಿ ಮಾಡಿದರು.

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

[t4b-ticker]
error: Content is protected !!