ಪುತ್ತೂರು ಸುಳ್ಯ ತಾಲ್ಲೂಕಿನಲ್ಲಿ ಭಾರಿ ಮಳೆ: ಶಾಲೆ, ಅಂಗನವಾಡಿಗಳಿಗೆ ನಾಳೆ (ಜುಲೈ 17) ರಜೆ ಘೋಷಣೆ

Picture of Savistara

Savistara

Bureau Report

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಸುಳ್ಯ ತಾಲ್ಲೂಕಿನಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಯ ಹಿನ್ನೆಲೆಯಲ್ಲಿ. ಮುನ್ನೆಚ್ಚರಿಕಾ ಕ್ರಮವಾಗಿ, ತಾಲ್ಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು. ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ದಿನಾಂಕ 17.07.2025 ರಂದು (ಗುರುವಾರ) ರಜೆ ಘೋಷಿಸಿ ತಹಶೀಲ್ದಾರರು ಆದೇಶ ಹೊರಡಿಸಿದ್ದಾರೆ.

ಈ ಆದೇಶವು ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಸೇರಿದಂತೆ ಎಲ್ಲಾ ವಿದ್ಯಾಸಂಸ್ಥೆಗಳಿಗೂ ಅನ್ವಯವಾಗಲಿದೆ ಎಂದು ಪುತ್ತೂರು, ಸುಳ್ಯ ತಹಶೀಲ್ದಾರರು ಹಾಗೂ ತಾಲ್ಲೂಕು ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಜಿಲ್ಲಾ ಶಿಕ್ಷಣಾಧಿಕಾರಿಗಳೊಂದಿಗೆ ನಡೆಸಿದ ಚರ್ಚೆಯ ಮೇರೆಗೆ ಈ ನಿರ್ಧಾರ ಕೈಗೊಳ್ಳಲಾಗಿದೆ.

ಪಾಲಕರು ಮತ್ತು ಸಾರ್ವಜನಿಕರಿಗೆ ಸೂಚನೆಗಳು:

• ಮಕ್ಕಳು ನೀರು ನಿಂತಿರುವ ತಗ್ಗು ಪ್ರದೇಶ, ಕೆರೆ, ನದಿ ದಂಡೆ, ಮತ್ತು ಕಾಲುವೆಗಳ ಬಳಿ ಹೋಗದಂತೆ ಪಾಲಕರು ಜಾಗೃತೆ ವಹಿಸಬೇಕು.

• ಪ್ರವಾಸಿಗರು ಮತ್ತು ಸಾರ್ವಜನಿಕರು ನದಿ, ಕೆರೆಗಳ ಸಮೀಪ ತೆರಳಬಾರದು.

ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ:

ತಾಲ್ಲೂಕು ಮತ್ತು ಗ್ರಾಮ ಮಟ್ಟದ ಎಲ್ಲಾ ಅಧಿಕಾರಿಗಳು ಕಡ್ಡಾಯವಾಗಿ ತಮ್ಮ ಕೇಂದ್ರ ಸ್ಥಾನದಲ್ಲಿದ್ದು. ವಿಪತ್ತು ನಿರ್ವಹಣಾ ಕಾರ್ಯದಲ್ಲಿ ಸನ್ನದ್ಧರಾಗಿರಬೇಕು. ಗ್ರಾಮ ಪಂಚಾಯಿತಿ ಮತ್ತು ವಾರ್ಡ್ ಮಟ್ಟದಲ್ಲಿ ನೇಮಿಸಲಾದ Incident Commander ಗಳು ಸಾರ್ವಜನಿಕರ ದೂರುಗಳಿಗೆ ತಕ್ಷಣ ಸ್ಪಂದಿಸಬೇಕು ಎಂದು ಆದೇಶಿಸಲಾಗಿದೆ.

ತುರ್ತು ಸಹಾಯಕ್ಕಾಗಿ ಸಂಪರ್ಕಿಸಿ:

ಪ್ರಾಕೃತಿಕ ವಿಕೋಪಕ್ಕೆ ಸಂಬಂಧಿಸಿದ ಯಾವುದೇ ತುರ್ತು ಸಮಸ್ಯೆಗಳಿದ್ದಲ್ಲಿ, ಸಾರ್ವಜನಿಕರು ತಕ್ಷಣವೇ ತಾಲ್ಲೂಕು ಕಚೇರಿಯ ನಿಯಂತ್ರಣ ಕೊಠಡಿಯನ್ನು ಸಂಪರ್ಕಿಸಬಹುದು.

[t4b-ticker]
error: Content is protected !!