ಕೃಷಿ ಇಲಾಖೆಯಿಂದ ರೈತರಿಗೆ ಬೆಳೆ ಸಮೀಕ್ಷೆ ಅಪ್ | 2025-26 ಸಾಲಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆಯ ಫುಲ್ ಡೀಟೈಲ್ಸ್

Picture of Savistara

Savistara

Bureau Report

2025-26ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಸರ್ಕಾರವು ನಿಮ್ಮ ಜಮೀನಿನಲ್ಲಿ ಬೆಳೆದ ಬೆಳೆಯ ಮಾಹಿತಿಯನ್ನು ಬೆಳೆ ಸಮೀಕ್ಷೆ ತಂತ್ರಾಂಶದ ಮೂಲಕ ಸಂಗ್ರಹಿಸುತ್ತಿದೆ. ಬೆಳೆ ಸಮೀಕ್ಷೆಯಲ್ಲಿ ರೈತರು ನೇರವಾಗಿ ಭಾಗಿಯಾಗಲು ಅವಕಾಶ ನೀಡಲಾಗಿದ್ದು ತಾವು ಬೆಳೆದ ಬೆಳೆಗಳ ಮಾಹಿತಿಯನ್ನು ಸ್ವತಃ ತಾವೇ ಪ್ಲೇ ಸ್ಟೋರ್‌ನಲ್ಲಿ “ಮುಂಗಾರು ರೈತರ ಬೆಳೆ ಸಮೀಕ್ಷೆ 2025” ಮೊಬೈಲ್ ಆ್ಯಪ್ ಡೌನೋಡ್ ಮಾಡಿಕೊಂಡು ಅದರ ಮೂಲಕ ತಾವು ಬೆಳೆದ ಬೆಳೆಗಳ ಛಾಯಾಚಿತ್ರ ಮತ್ತು ಬೆಳೆ ವಿವರಗಳನ್ನು ಅಪ್ ಲೋಡ್ ಮಾಡಬಹುದು.

* ರೈತರಿಗೆ ಅಪ್ ಲೋಡ್ ಮಾಡಲು ಸಾಧ್ಯವಾಗದಿದ್ದಲ್ಲಿ ತಾಲೂಕು ಆಡಳಿತ ನೇಮಿಸಿರುವ ಮೊಬೈಲ್ ತಂತ್ರಾರ ಜ್ಞಾನವುಳ್ಳಸ್ಥಳೀಯ ಖಾಸಗಿ ನಿವಾಸಿಗಳ ಸಹಾಯದಿಂದ ಬೆಳೆ ವಿವರ ದಾಖಲಿಸಬಹುದು.

* ರೈತರು ಅಥವಾ ಖಾಸಗಿ ನಿವಾಸಿಗಳು ಛಾಯಚಿತ್ರದೊಂದಿಗೆ ನಮೂದಿಸಿದ ಬೆಳೆ ಮಾಹಿತಿಯನ್ನು ತಾಲೂಕು ಆಡಳಿತ ಪರಿಶೀಲಿಸಿ ಅನುಮೋದಿಸುತ್ತದೆ.

ಬೆಳೆ ಸಮೀಕ್ಷೆಯ ಉದ್ದೇಶಗಳು :

* ಪ್ರಕೃತಿ ವಿಕೋಪದಡಿ ಪ್ರವಾಹ ಮತ್ತು ಬರಗಾಲ ಸಂದರ್ಭದಲ್ಲಿ ನೀಡುವ ಬೆಳೆ ನಷ್ಟ ಪರಿಹಾರ ವಿತರಿಸಲು.ಕನಿಷ್ಠ ಬೆಂಬಲ ಬೆಳೆ ಯೋಜನೆಯಡಿ ಅರ್ಹ ಫಲಾನುಭವಿಗಳನ್ನು ಗುರುತಿಸಲುಬೆಳೆ ವಿಮಾ ಯೋಜನೆಯಡಿ ಬೆಳೆ ವಿವರ ಪರಿಶೀಲಿಸಲುಸಾಂಖ್ಯಿಕ ಇಲಾಖೆ, ಕೃಷಿ, ತೋಟಗಾರಿಕಾ ಇಲಾಖೆ ಬೆಳೆ ವಿಸ್ತೀರ್ಣ ವರದಿ ಕಾರ್ಯದಲ್ಲಿಬೆಳೆ ಕಟಾವು ಪ್ರಯೋಗಗಳನ್ನು ಕೈಗೊಳ್ಳಲುಬೆಳೆ ಮಾನದಂಡಗಳಿಗೆ ಅನುಗುಣವಾಗಿ ಕೃಷಿ ತೋಟಗಾರಿಕೆ ಇಲಾಖೆಗಳ ಫಲಾನುಭವಿ ಆಧಾರಿತ ಯೋಜನೆಗಳನ್ನು ಅನಷ್ಠಾನಗೊಳಿಸಲು.ಪಹಣಿಯಲ್ಲಿ ಬೆಳೆ ವಿವರ ದಾಖಲಿಸಲು.

ಆಕ್ಷೇಪಣೆಗಳು :

ಮೇಲಿನ ಉಪಯೋಗಗಳನ್ನು ಪಡೆಯಲು ರೈತರು ತಮ್ಮ ಜಮೀನಿನಲ್ಲಿ ನಡೆಸಿದ ಬೆಳೆ ಸಮಿಕ್ಷೆಯ ಮಾಹಿತಿಯನ್ನು ತಾವುಗಳು ಪರಿಶೀಲಿಸಿಕೊಳ್ಳುವುದು ಅತೀ ಮಹತ್ವದ್ದಾಗಿರುತ್ತದೆ ಏನಾದರು ವ್ಯತ್ಯಾಸಗಳು ಕಂಡು ಬಂದಲ್ಲಿ ರೈತರು ನೇರವಾಗಿ ತಮ್ಮ ಆಕ್ಷೇಪಣೆಯನ್ನು “ಬೆಳೆ ದರ್ಶಕ” ಮೊಬೈಲ್ ಆ್ಯಪ್ ನಲ್ಲಿ ದಾಖಲಿಸುವ ಮೂಲಕ ಸಲ್ಲಿಸಬಹುದು.

ವಿ.ಸೂ : ಪ್ರಸಕ್ತ ಸಾಲಿನಲ್ಲಿ ಬೆಳೆ ವಿಮೆಯಲ್ಲಿ ನೋಂದಣಿಯಾದ ರೈತರು, ಸ್ವತಃ ಬೆಳೆ ಸಮೀಕ್ಷೆ ಕೈಗೊಳ್ಳುವುದರಿಂದ ಬೆಳೆ ವಿಮೆಯನ್ನು ಪಡೆಯುವಲ್ಲಿ ತೊಂದರೆಯಾಗುವುದನ್ನು ತಡೆಯಬಹುದು.

ಹೆಚ್ಚಿನ ಮಾಹಿತಿಗಾಗಿ : ಹತ್ತಿರದ ರೈತ ಸಂಪರ್ಕ ಕೇಂದ್ರ ಕೃಷಿ ಇಲಾಖೆ, ಗ್ರಾಮ ಆಡಳಿತಾಧಿಕಾರಿಗಳು ಕಂದಾಯ ಇಲಾಖೆ, ತೋಟಗಾರಿಕೆ ಅಧಿಕಾರಿಗಳನ್ನು ಸಂಪರ್ಕಿಸುವುದು.

ಪ್ರಕಟಣೆ : ಸಹಾಯಕ ಕೃಷಿ ನಿರ್ದೇಶಕರು, ಸುಳ್ಯ

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

[t4b-ticker]
error: Content is protected !!