KMF ಅಧ್ಯಕ್ಷ ಹುದ್ದೆ ಮೇಲೆ ಕಣ್ಣಿಟ್ಟಿದ್ದ ಕಾಂಗ್ರೆಸ್ ಶಾಸಕ ಕೆ ವೈ ನಂಜೇಗೌಡ ಮನೆ ಮೇಲೆ ಇಡಿ ದಾಳಿ! ಆಸ್ತಿ ಮುಟ್ಟುಗೋಲು

Picture of Savistara

Savistara

Bureau Report

ಕೋಲಾರದಲ್ಲಿ ಮಾಲೂರು ಕಾಂಗ್ರೆಸ್ ಶಾಸಕ ಕೆ.ವೈ. ನಂಜೇಗೌಡ ಅವರ ಮನೆ ಮತ್ತು ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿದೆ. ಅಧಿಕಾರಿಗಳು ಆಸ್ತಿಯನ್ನು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದ್ದಾರೆ. ಕೋಮುಲ್ ನೇಮಕಾತಿ ಹಗರಣಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣದಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಶಾಸಕ ನಂಜೇಗೌಡ ಮತ್ತು ಇತರರ 1.32 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಇಡಿ ಮುಟ್ಟುಗೋಲು ಹಾಕಿಕೊಂಡಿದೆ ಎಂದು ತಿಳಿದು ಬಂದಿದೆ.

ಕೋಲಾರ: ಮಾಲೂರು ಕಾಂಗ್ರೆಸ್ ಶಾಸಕ ಕೆ ವೈ ನಂಜೇಗೌಡ ಅವರ ಮನೆ, ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ಮಾಡಿದ್ದು, ಆಸ್ತಿಯನ್ನು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದೆ.

2023ರ ಕೋಲಾರ – ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಒಕ್ಕೂಟ ನಿಯಮಿತ (KOMUL) ನೇಮಕಾತಿ ಹಗರಣಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣದಲ್ಲಿ ಬೆಂಗಳೂರು ವಲಯ ಕಚೇರಿಯ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ..

ಶಾಸಕ ಕೆ ವೈ ನಂಜೇಗೌಡ ಮತ್ತು ಇತರರ 1.32 ಕೋಟಿ ರೂ. (ಅಂದಾಜು) ಮೌಲ್ಯದ ಸ್ಥಿರ ಮತ್ತು ಚರ ಆಸ್ತಿಗಳನ್ನು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದು ಇಡಿ ಮಾಹಿತಿ ನೀಡಿದೆ

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

[t4b-ticker]
error: Content is protected !!