ಉತ್ತರಕನ್ನಡ ಜಿಲ್ಲಾ ಬಿಜೆಪಿ ಕಾರ್ಯಕಾರಿಣಿ ಸಭೆ|ಕಾಂಗ್ರೆಸ್ ಸರ್ಕಾರ ಎಲ್ಲಾ ರಂಗಗಳಲ್ಲೂ ವಿಫಲವಾಗಿದೆ ಶಾಸಕ ದಿನಕರ ಶೆಟ್ಟಿ

Picture of Savistara

Savistara

Bureau Report

ಬಿಜೆಪಿ ಉತ್ತರಕನ್ನಡ ಜಿಲ್ಲಾ ಕಾರ್ಯಕಾರಿಣಿ ಸಭೆ ಕುಮಟಾದ ರೋಟರಿ ಕ್ಲಬ್ ನ ನಾದಶ್ರೀ ಸಭಾಂಗಣದಲ್ಲಿ ಗುರುವಾರ ನಡೆಯಿತು. ಕುಮಟಾ ಶಾಸಕ ಶ್ರೀ ದಿನಕರ ಶೆಟ್ಟಿ ಕಾರ್ಯಕಾರಿಣಿ ಉದ್ಘಾಟಿಸಿ ಮಾತನಾಡಿದರು. ರಾಜ್ಯ ಕಾಂಗ್ರೆಸ್ ಸರಕಾರದ ಆಡಳಿತ ವೈಫಲ್ಯವನ್ನು ಎಳೆ ಎಳೆಯಾಗಿ ಬಿಡಿಸಿ ಹೇಳಿದರು.ಜಿಲ್ಲಾಧ್ಯಕ್ಷ ಶ್ರೀ ಎನ್.ಎಸ್. ಹೆಗಡೆ ಅಧ್ಯಕ್ಷತೆ ವಹಿಸಿ ಪಕ್ಷ ಸಂಘಟನೆ ಅವಲೋಕನ ನಡೆಸಿ ಮಾರ್ಗದರ್ಶನ ಮಾಡಿದರು.

ಪಕ್ಷದ ಸಂಘಟನೆ ವಿಚಾರವಾಗಿ ಸಮಗ್ರ ಚರ್ಚೆ ನಡೆಸಿ ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಯಿತು. ರಾಜ್ಯ ಉಪಾಧ್ಯಕ್ಷೆ ಶ್ರೀಮತಿ ರೂಪಾಲಿ ನಾಯ್ಕ್ ಅವರು ಪಕ್ಷ ಸಂಘಟನೆ ಕುರಿತು ಕಾರ್ಯಕರ್ತರಿಗೆ ಮನಮುಟ್ಟುವಂತೆ ಮಾತನಾಡಿದರು.ನರೇಂದ್ರ ಮೋದಿ ಸರಕಾರದ ಹನ್ನೊಂದು ವರ್ಷಗಳ ಸಾಧನೆ ವಿವರಿಸಿ ಅಭಿನಂದನಾ ನಿರ್ಣಯ ಮಂಡಿಸಿದೆನು. ಹಿಂದುಳಿದ ಮೋರ್ಚಾ ರಾಜ್ಯ ಉಪಾಧ್ಯಕ್ಷ ಶ್ರೀ ಈಶ್ವರ ನಾಯ್ಕ್ ನಿರ್ಣಯವನ್ನು ಅನುಮೋದಿಸಿದರು.

ಹಿಂದುಳಿದ ಮೋರ್ಚಾ ಜಿಲ್ಲಾ ಅಧ್ಯಕ್ಷ ಶ್ರೀ ರಾಜೇಂದ್ರ ನಾಯ್ಕ್ ಕರ್ನಾಟಕದ ಕಾಂಗ್ರೆಸ್ ಸರಕಾರದ ವೈಫಲ್ಯ ವಿವರಿಸಿ ಖಂಡನಾ ನಿರ್ಣಯ ಮಂಡಿಸಿದರು.ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಶಿವಾನಂದ ನಾಯ್ಕ, ಪ್ರಧಾನ ಕಾರ್ಯದರ್ಶಿಗಳಾದ ಗುರುಪ್ರಸಾದ್ ಹೆಗಡೆ, ಪ್ರಶಾಂತ್ ನಾಯ್ಕ, ಶಿವಾಜಿ ನರಸಾನಿ, ಜಿಲ್ಲಾ ಪದಾಧಿಕಾರಿಗಳು, ಮಂಡಲಾಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಜಿಲ್ಲಾ ಮೊರ್ಚಾ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

[t4b-ticker]
error: Content is protected !!