ಹೆಗ್ಗಡೆ, ಧರ್ಮಸ್ಥಳದ ವಿರುದ್ಧ ಮಾನಹಾನಿಕರ ವರದಿ ಮಾಡದಂತೆ ಮಾಧ್ಯಮಗಳಿಗೆ ಕೋರ್ಟ್ ತಡೆಯಾಜ್ಞೆ

Picture of Savistara

Savistara

Bureau Report

ಧರ್ಮಸ್ಥಳದಲ್ಲಿ ಶವಗಳನ್ನು ಗುಪ್ತವಾಗಿ ಹೂತಿರುವ ಆರೋಪಿತ ಪ್ರಕರಣಕ್ಕೆ ಸಂಬಂಧಿಸಿದಂತೆ, ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ವಿರುದ್ಧ ಮಾನಹಾನಿಕರ ವರದಿಗಳನ್ನು ಪ್ರಕಟಿಸದಂತೆ ಬೆಂಗಳೂರಿನ 11ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್‌ ತಡೆಯಾಜ್ಞೆ ಹೊರಡಿಸಿದೆ. ಡಿ. ಹರ್ಷೇಂದ್ರ ಕುಮಾ‌ರ್ ಸಲ್ಲಿಸಿದ್ದ ದಾವೆಯನ್ನು ವಿಚಾರಣೆ ನಡೆಸಿದ ನ್ಯಾಯಾಧೀಶ ವಿಜಯ್ ಕುಮಾರ್ ನೇತೃತ್ವದ ಏಕಸದಸ್ಯ ಪೀಠವು ಈ ಆದೇಶ ನೀಡಿದೆ.

ಬೆಂಗಳೂರು, ಜುಲೈ 19, 2025: ಧರ್ಮಸ್ಥಳದಲ್ಲಿ ಶವಗಳನ್ನು ಗುಪ್ತವಾಗಿ ಹೂತಿರುವ ಆರೋಪಿತ ಪ್ರಕರಣಕ್ಕೆ ಸಂಬಂಧಿಸಿದಂತೆ. ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ವಿರುದ್ಧ ಮಾನಹಾನಿಕರ ವರದಿಗಳನ್ನು ಪ್ರಕಟಿಸದಂತೆ ಬೆಂಗಳೂರಿನ 11ನೇ ಹೆಚ್ಚುವರಿ ಸಿಟಿ ಸಿವಿಲ್‌ ಮತ್ತು ಸೆಷನ್ಸ್ ಕೋರ್ಟ್ ತಡೆಯಾಜ್ಞೆ ಹೊರಡಿಸಿದೆ. ಡಿ. ಹರ್ಷೇಂದ್ರ ಕುಮಾ‌ರ್ ಸಲ್ಲಿಸಿದ್ದ ದಾವೆಯನ್ನು ವಿಚಾರಣೆ ನಡೆಸಿದ ನ್ಯಾಯಾಧೀಶ ವಿಜಯ್ ಕುಮಾರ್ ನೇತೃತ್ವದ ಏಕಸದಸ್ಯ ಪೀಠವು ಈ ಆದೇಶ ನೀಡಿದೆ.

ಧರ್ಮಸ್ಥಳದ ಸುತ್ತಮುತ್ತಲಿನ ಪ್ರದೇಶದಲ್ಲಿ ಅಪರಿಚಿತ ಶವಗಳನ್ನು ರಹಸ್ಯವಾಗಿ ಸಮಾಧಿ ಮಾಡಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ. ಡಾ. ವೀರೇಂದ್ರ ಹೆಗ್ಗಡೆ ಮತ್ತು ಅವರ ಸಹೋದರ ಕುಟುಂಬದವರ ವಿರುದ್ಧ ಯಾವುದೇ ಅವಹೇಳನಕಾರಿ ಹೇಳಿಕೆಗಳನ್ನು ನೀಡದಂತೆ ನಗರದ ಸಿವಿಲ್‌ ಮತ್ತು ಸೆಷನ್ಸ್ ನ್ಯಾಯಾಲಯವು ನಿರ್ಬಂಧಕಾಜ್ಞೆ ಜಾರಿಗೊಳಿಸಿದೆ. ಈ ಆದೇಶವು ಮಾಧ್ಯಮಗಳು ಮತ್ತು ವ್ಯಕ್ತಿಗಳು ಈ ರೀತಿಯ ಆರೋಪಗಳನ್ನು ಪ್ರಕಟಿಸುವುದನ್ನು ತಡೆಯುವ ಗುರಿಯನ್ನು ಹೊಂದಿದೆ.

ಡಿ. ಹರ್ಷೇಂದ್ರ ಕುಮಾರ್‌ರವರು ತಮ್ಮ ಕುಟುಂಬದ ವಿರುದ್ಧ ಸುಳ್ಳು ಸುದ್ದಿಗಳನ್ನು ಪ್ರಸಾರ ಮಾಡದಂತೆ ಹಾಗೂ ಮಾನಹಾನಿಕರ ಹೇಳಿಕೆಗಳನ್ನು ನೀಡದಂತೆ ಮಹೇಶ್‌ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣವ‌ರ್. ಯೂಟ್ಯೂಬ‌ರ್ ಎಂ.ಡಿ. ಸಮೀರ್ ಹಾಗೂ ಒಟ್ಟಿಗೆ 339 ಮಾಧ್ಯಮ ಸಂಸ್ಥೆಗಳಿಗೆ ನಿರ್ದೇಶನ ನೀಡುವಂತೆ ಕೋರಿ ದಾವೆ ಸಲ್ಲಿಸಿದ್ದರು. ಈ ದಾವೆಯನ್ನು ವಿಚಾರಣೆ ನಡೆಸಿದ ನ್ಯಾಯಾಲಯವು ಮಧ್ಯಂತರ ತಡೆಯಾಜ್ಞೆಯನ್ನು ವಿಧಿಸಿದೆ.

ಪ್ರಕರಣದ ಹಿನ್ನೆಲೆ:ಜುಲೈ 4, 2025ರಂದು ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ದಾಖಲಾದ ದೂರಿನ ಆಧಾರದ ಮೇಲೆ ಈ ಪ್ರಕರಣ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಗಮನ ಸೆಳೆದಿದೆ. ಒಬ್ಬ ಅಜ್ಞಾತ ವ್ಯಕ್ತಿಯು ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ರಹಸ್ಯವಾಗಿ ಸಮಾಧಿ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ. ಈ ಆರೋಪದಿಂದ ತಾನು ಜೀವಭಯದಿಂದ ಶವಗಳನ್ನು ವಿಲೇವಾರಿ ಮಾಡಿದ್ದೇನೆ ಎಂದು ದೂರಿನಲ್ಲಿ ತಿಳಿಸಿದ್ದು, ಈ ಕಾರಣಕ್ಕಾಗಿ ತನಗೆ ಮತ್ತು ಕುಟುಂಬಕ್ಕೆ ಕಾನೂನು ರಕ್ಷಣೆ ಒದಗಿಸಿದರೆ, ಅಪರಾಧ ಕೃತ್ಯಗಳಿಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯನ್ನು ಮತ್ತು ಶವಗಳನ್ನು ವಿಲೇವಾರಿ ಮಾಡಿದ ಸ್ಥಳಗಳನ್ನು ಬಹಿರಂಗಪಡಿಸಲು ಸಿದ್ಧನಿರುವೆ ಎಂದು ಆತ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್‌ ಅಧೀಕ್ಷಕರ ಕಚೇರಿ ಮತ್ತು ಧರ್ಮಸ್ಥಳ ಪೊಲೀಸ್‌ ಠಾಣೆಗೆ ತಿಳಿಸಿದ್ದಾನೆ. ಈ ದೂರಿನ ಆಧಾರದ ಮೇಲೆ ಜುಲೈ 4ರಂದು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಕ್ರಮಾಂಕ 39/2025ರಡಿ, ಭಾರತೀಯ ನ್ಯಾಯ ಸಂಹಿತೆ (BNS) ಕಲಂ 211(ಎ) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

[t4b-ticker]
error: Content is protected !!