ಕುರ್ಚಿ ಅಲ್ಲಾಡುವಾಗ, ಅಸ್ಥಿರತೆ ಕಾಡಿದಾಗಲೆಲ್ಲ ಸಿದ್ದರಾಮಯ್ಯ ಈ ರೀತಿ ಸಮಾವೇಶ ಮಾಡ್ತಾರೆ: ವಿಜಯೇಂದ್ರ ಟೀಕೆ

Picture of Savistara

Savistara

Bureau Report

ಗ್ಯಾರಂಟಿ ಯೋಜನೆಗಳಿಗೆ ಹಣ ಕ್ರೂಢೀಕರಿಸಲು ಆಗದೇ. ಇದನ್ನೇ ನೆಪ ಮಾಡಿಕೊಂಡು ತೆರಿಗೆ ಇಲಾಖೆ ಮೂಲಕ ಸಣ್ಣ ಸಣ್ಣ ವ್ಯಾಪಾರಿಗಳಿಗೆ ನೋಟಿಸ್ ಕೊಡ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆರೋಪಿಸಿದ್ದಾರೆ.

ಕಲಬುರಗಿ: ಮೈಸೂರಿನಲ್ಲಿ ನಡೆದ ಕಾಂಗ್ರೆಸ್ ಸಾಧನಾ ಸಮಾವೇಶ ವಿಚಾರವಾಗಿ ಕಲಬುರಗಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿಕೆ ನೀಡಿದ್ದಾರೆ. ಸಿದ್ದರಾಮಯ್ಯ ಅವರ ಕುರ್ಚಿ ಅಲ್ಲಾಡುವಾಗ, ಅಸ್ಥಿರತೆ ಕಾಡಿದಾಗಲೆಲ್ಲ ಈ ರೀತಿ ಸಮಾವೇಶ ಮಾಡ್ತಾರೆ. ಸಿದ್ದರಾಮಯ್ಯ ಎಂದರೆ ಸಮಾವೇಶ, ಸಮಾವೇಶ ಎಂದರೆ ಸಿದ್ದರಾಮಯ್ಯ. ತಮ್ಮ ರಾಜಕೀಯ ಬೆಳೆ ಬೆಯಿಸಿಕೊಳ್ಳಲು, ತಮ್ಮ ಅಸ್ಥಿತ್ವಕ್ಕಾಗಿ ಸಿದ್ದರಾಮಯ್ಯ ಅಹಿಂತ ಸಮಾವೇಶ ಮಾಡ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಲೇವಡಿ ಮಾಡಿದ್ದಾರೆ.ಸುರ್ಜೆವಾಲಾ ಪದೇ ಪದೆ ಬೆಂಗಳೂರಿಗೆ ಬಂದು ಶಾಸಕರ ಅಸಮಾಧಾನ ಶಮನ ಮಾಡಲು ಪ್ರಯತ್ನ ಮಾಡ್ತಿದ್ದಾರೆ. ಇದನ್ನ ನೋಡಿದ್ರೆ ಎಷ್ಟರ ಮಟ್ಟಿಗೆ ಶಾಸಕರಲ್ಲಿ ಅಸಮಾಧಾನ ಇದೆ ಅನ್ನೋದು ಗೊತ್ತಾಗುತ್ತೆ‌. ಸಿಎಂ ಕುರ್ಚಿ ಅಲ್ಲಾಡುತ್ತಿರುವ ಕಾರಣಕ್ಕೆ ಅಹಿಂದ, ಹಿಂದುಳಿದ, ಸಾಧನಾ ಸಮಾವೇಶ ಮಾಡ್ತಿದ್ದಾರೆ. ಸಿದ್ದರಾಮಯ್ಯ ಕುರ್ಚಿಯಿಂದ ಇಳಿದರೆ ಸಿಎಂ ಯಾರಾಗಬೇಕು ಅಂತ ಒಳಗೊಳಗೆ ಲೆಕ್ಕಾಚಾರ ನಡೆಯುತ್ತಿದೆ. ಒಳಗೊಳಗೆ ಕುದುರೇ ವ್ಯಾಪಾರ ನಡೆಯುತ್ತಿದೆ ಇದರಲ್ಲಿ ಯಾವುದೇ ಅನುಮಾನ ಬೇಡ. ಕಾಂಗ್ರೆಸ್ ಪಕ್ಷದಲ್ಲಿ ಶಾಸಕರು ಒಳಗೊಳಗೆ ಕತ್ತಿ ಮಸಿಯುತ್ತಿದ್ದಾರೆ‌ ಎಂದರು.

ಅಬ್ದುಲ್ ಕಲಾಂ ಅವರನ್ನು ರಾಷ್ಟ್ರಪತಿ ಮಾಡಿದ್ದು ಬಿಜೆಪಿ- ವಿಜಯೇಂದ್ರ: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ದಲಿತರಿಗೆ ನೀಡಲಿ ಎನ್ನುವ ಸಿಎಂ ಹೇಳಿಕೆಗೆ ವಿಜಯೇಂದ್ರ ಖಾರವಾದ ಪ್ರತಿಕ್ರಿಯೆ ನೀಡಿದ್ದಾರೆ. ಬುಡಕಟ್ಟು ಜನಾಂಗದ ದ್ರೌಪದಿ ಮುರುಮ್ಮು ಅವರನ್ನು ರಾಷ್ಟ್ರಪತಿ ಮಾಡಿದ್ದು ಬಿಜೆಪಿ, ಅಬ್ದುಲ್ ಕಲಾಂ ಅವರನ್ನು ರಾಷ್ಟ್ರಪತಿ ಮಾಡಿದ್ದು ಬಿಜೆಪಿ, ಬಿಜೆಪಿ ಎಲ್ಲಾ ಜಾತಿ ಜನಾಂಗಕ್ಕೂ ಸಮಾನ ಪ್ರಾಧಾನ್ಯತೆ ನೀಡುತ್ತದೆ. ಕಾಂಗ್ರೆಸ್ ನಾಯಕರು ಈ ಹಿಂದೆ ಜಿ. ಪರಮೇಶ್ವರ ಅವರಿಗೆ ಅನ್ಯಾಯ ಮಾಡಿದ್ರು, ಜಿ. ಪರಮೇಶ್ವರ ಅವರಿಗೆ ಹೇಗೆ ಅನ್ಯಾಯ ಆಗಿದೆ ಅಂತ ರಾಜ್ಯದಲ್ಲಿ ಚರ್ಚೆ ಆಗ್ತಿದೆ. ದಲಿತರಿಗೆ ಕಾಂಗ್ರೆಸ್ ಪಕ್ಷದಲ್ಲಿ ನ್ಯಾಯ ಸಿಗಲಿ ಅಂತ ನಾನು ದಲಿತರಿಗೆ ಸಿಎಂ ಸ್ಥಾನ ಕೊಡಲಿ ಎಂದಿದ್ದೇನೆ.ದಲಿತರ ಬಗ್ಗೆ ಗೌರವ ಇದ್ದರೆ ಸಿಎಂ ಅವರು ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕುರ್ಚಿ ನೀಡಬೇಕು ಎಂದಿದ್ದೇನೆ. ಆದ್ರೆ ಮಲ್ಲಿಕಾರ್ಜುನ ಖರ್ಗೆ ಅವರ ಹೆಸರು ಹೇಳಿದ್ರೆ ಸಿದ್ದರಾಮಯ್ಯ ಅವರಿಗೆ ಕೋಪ ಬರುತ್ತದೆ. ಖರ್ಗೆ ಹೆಸರು ಹೇಳಿದ್ದಕ್ಕಾಗಿ ನನ್ನ ಮೇಲೆ ಸಿಎಂ ಕೋಪಗೊಂಡು ಹರಿಹಾಯ್ದಿದ್ದಾರೆ.

ಶಾಸಕ ಬೈರತಿ ಬಸವರಾಜ್​ ವಿಚಾರವಾಗಿ ಬಿವೈವಿ ಹೇಳಿದ್ದೇನು?: ಮಾಜಿ ಸಚಿವ, ಬಿಜೆಪಿ ಶಾಸಕ ಬೈರತಿ ಬಸವರಾಜ ಹೆಸರು FIR ನಲ್ಲಿ ದಾಖಲು, ಬಂಧನ ಭೀತಿ ವಿಚಾರವಾಗಿ ಮಾತನಾಡಿದ ಅವರು, ಕಳೆದ ಎರಡು ವರ್ಷದಲ್ಲಿ ಆಡಳಿತ ರೂಢ ಕಾಂಗ್ರೆಸ್ ನವರು ಬಿಜೆಪಿ ಅವರನ್ನ ಹೆದರಿಸುವ ಕೆಲಸ ಮಾಡುತ್ತಿದ್ದಾರೆ. ಹರೀಶ್ ಪುಂಜ ಅವರನ್ನು ಹೆದರಿಸುವ ಪ್ರಯತ್ನ ಮಾಡಿದ್ರು ಅದು ಸಾಧ್ಯವಾಗಲಿಲ್ಲ. ಇದೀಗ ಬೈರತಿ ಬಸವರಾಜ ಅವರನ್ನ ಹೆದರಿಸುವ ಕೆಲಸ ಮಾಡಲಾಗ್ತಿದೆ. ಆ ಮಹಿಳೆಯೆ ಹೇಳಿದ್ದಾರೆ ಬೈರತಿ ಬಸವರಾಜ ಅವರ ಹೆಸರು ಹೇಳಿಲ್ಲ ಅಂತ. ಆದರೂ FIR ನಲ್ಲಿ ಬೈರತಿ ಬಸವರಾಜ ಹೆಸರು ಸೇರಿಸಿದ್ದಾರೆ. ಬಿಜೆಪಿ ಶಾಸಕರನ್ನ ಹೆದರಿಸುವ ಕೆಲಸ ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ.

ಕಾಂಗ್ರೆಸ್​ ಶಾಸಕರ ಕಣ್ಣಿಗೆ ಬೆಣ್ಣೆ ; ಕಾಂಗ್ರೆಸ್ ಶಾಸಕರಿಗೆ ಸಿಎಂ 50 ಕೋಟಿ ರೂಪಾಯಿ ಅನುದಾನ ನೀಡಿರುವ ವಿಚಾರವಾಗಿ ಮಾತನಾಡಿ, ಸಿಎಂ ಈ ವಿಚಾರದಲ್ಲಿ ಬಹಳ ಕೃಪೆ ತೋರಿಸಿದ್ದಾರೆ. ಅನುದಾನ, ಅಭಿವೃದ್ದಿ ಇಲ್ಲದಕ್ಕಾಗಿ ಕಾಂಗ್ರೆಸ್ ಶಾಸಕರಿಗೂ ಜನ ಛೀಮಾರಿ ಹಾಕ್ತಿದಾರೆ. ಎರಡೂವರೇ ವರ್ಷ ಆಯ್ತು ನಮಗೆ ಬಿಡಿಗಾಸು ನೀಡುತ್ತಿಲ್ಲ ಅಂತ ಸಿಎಂ ಮೇಲೆ ಶಾಸಕರು ಅಸಮಾಧಾನ ಹೊರ ಹಾಕಿದ್ದಾರೆ. ಇದೀಗ ಸಿಎಂ ಅವರು ತಮ್ಮ ಕುರ್ಚಿ ಉಳಿಸಿಕೊಳ್ಳಲು ಅನುದಾನದ ಕಪಟ ನಾಟಕ ಮಾಡುತ್ತಿದ್ದಾರೆ. 50 ಕೋಟಿ ಬಿಡುಗಡೆ ಬಗ್ಗೆ ಸಿಎಂ ಏನೋ ಮಾತನಾಡಿದ್ದಾರೆ. ಆದರೆ ಯಾವಾಗ ಬಿಡುಗಡೆ ಆಗುತ್ತೆ ?, ಯಾವಾಗ ಶಾಸಕರ ಕೈ ಸೇರುತ್ತೆ ಎನ್ನುವುದು ಯಕ್ಷ ಪ್ರಶ್ನೆಯಾಗಿದೆ. ಆಡಳಿತ ಪಕ್ಷದ ಶಾಸಕರ ಕಣ್ಣಿಗೆ ಬೆಣ್ಣೆ, ನಮ್ಮ ಪಕ್ಷದ ಶಾಸಕರ ಕಣ್ಣಿಗೆ ಸುಣ್ಣ ಹಚ್ಚೋದು ನಿರಂತರವಾಗಿ ನಡೆಸಿಕೊಂಡು ಬಂದಿದ್ದಾರೆ. ಇದೀಗ ಅವರು ಇದನ್ನೇ ಮುಂದುವರೆಸಿದ್ದಾರೆ ಎಂದರು.

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ: ಗ್ಯಾರಂಟಿ ಯೋಜನೆಗಳಿಗೆ ಹಣ ಕ್ರೂಢೀಕರಿಸಲು ಆಗದೆ. ಇದನ್ನೇ ನೆಪ ಮಾಡಿಕೊಂಡು ತೆರಿಗೆ ಇಲಾಖೆ ಮೂಲಕ ಸಣ್ಣ ಸಣ್ಣ ವ್ಯಾಪಾರಿಗಳಿಗೆ ನೋಟಿಸ್ ಕೊಡ್ತಿದ್ದಾರೆ. ಬಿದಿ ವ್ಯಾಪಾರಿಗಳಿಗೆ ಹೆದರಿಸುವ ಕೆಲಸ ರಾಜ್ಯ ಸರ್ಕಾರ ಮಾಡ್ತಿದೆ. ಜಿಎಸ್ ಟಿ ಕೇಂದ್ರ ಸರ್ಕಾರಕ್ಕೆ ಹೋಗುತ್ತೆ ಅನ್ನೋದು ಎಷ್ಟು ಸತ್ಯವೋ. ದೇಶದ ಯಾವುದೇ ರಾಜ್ಯದಲ್ಲಿ ಈ ರೀತಿಯ ಬೆಳವಣಿಗೆ ಆಗಿಲ್ಲ. ಕರ್ನಾಟಕದಲ್ಲಿ ಮಾತ್ರ ಗ್ಯಾರಂಟಿ ಗಳಿಗೆ ಹಣ ಹೊಂದಿಸಲು ಆಗದೇ. ಇದನ್ನೇ ನೇಪ ಮಾಡಿಕೊಂಡು ಮುಖ್ಯಮಂತ್ರಿ ಆದೇಶದ ಮೇರೆಗೆ. ಸಣ್ಣ ಸಣ್ಣ ವ್ಯಾಪಾರಿಗಳು ಬಿದಿ ವ್ಯಾಪಾರಿಗಳನ್ನ ಬೆದರಿಸುವ ಕೆಲಸ ಆಗ್ತಿದೆ ಎಂದರು.

News Updates

ಸುಳ್ಯದ ಗುತ್ತಿಗಾರಿನಲ್ಲಿ ಅಡಿಕೆಯಲ್ಲಿ ಎಲೆಚುಕ್ಕೆ ರೋಗ ನಿರ್ವಹಣೆ ಕುರಿತು ಮಾಹಿತಿ ಮತ್ತು ಸಂವಾದ ಕಾರ್ಯಕ್ರಮ | ಕೇಂದ್ರ ಸರ್ಕಾರ ಅಡಿಕೆ ಬೆಳೆಗಾರರ ಹಿತಕ್ಕೆ ಸದಾ ಬದ್ದವಾಗಿದ್ದು ಎಲೆ ಚುಕ್ಕಿ ರೋಗ ದಿಂದ ಅಡಿಕೆ ಬೆಳೆಗಾರರ ಸಂಕಷ್ಟಕ್ಕಿಡಾಗಿದ್ದು ಕೇಂದ್ರ ಕೃಷಿ ಸಚಿವರ ಗಮನಕ್ಕೆ ತಂದಿದ್ದು ಶೀಘ್ರದಲ್ಲಿ ಈ ಬಗ್ಗೆ ಪರಿಹಾರ : ಸಂಸದ ಕ್ಯಾ. ಬ್ರಿಜೇಶ್ ಚೌಟ

[t4b-ticker]
error: Content is protected !!