ಧರ್ಮಸ್ಥಳದಲ್ಲಿ ನೂರಾರು ಶವಗಳ ಹೂತಿಟ್ಟ ಕೇಸ್: ಎಸ್ಐಟಿ ರಚನೆ ಬೆನ್ನಲ್ಲೆ ಸಿಎಂ ಸಿದ್ದರಾಮಯ್ಯ ಧರ್ಮಸ್ಥಳ ಕೇಸ್ ಕುರಿತು ಪೋಸ್ಟ್

Picture of Savistara

Savistara

Bureau Report

ಬೆಂಗಳೂರು: ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಬಹಳ ಸುದ್ದಿಮಾಡುತ್ತಿದ್ದ ಧರ್ಮಸ್ಥಳ ಭಾಗದಲ್ಲಿ ನೂರಾರು ಶವಗಳನ್ನು ಹೂತಿರುವ ಹಾಗೂ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಇದೀಗ ತನಿಖಾ ತಂಡವನ್ನ ರಚನೆ ಮಾಡಿದ್ದು, ಈ ಬಗ್ಗೆ ಸಿಎಂ ಮಾಹಿತಿ ನೀಡಿದ್ದಾರೆ.

ತನಿಖಾ ತಂಡ ರಚನೆಗೆ ಸರ್ಕಾರ ಆದೇಶ

ಧರ್ಮಸ್ಥಳ ಭಾಗದಲ್ಲಿ ನೂರಾರು ಶವಗಳನ್ನು ಹೂತಿರುವುದಾಗಿ ವ್ಯಕ್ತಿಯೊಬ್ಬ ನ್ಯಾಯಾಲಯದಲ್ಲಿ ಹೇಳಿಕೆಯನ್ನು ದಾಖಲಿಸಿದ್ದು, ಇದಕ್ಕೆ ಸಂಬಂಧಿಸಿದಂತೆ ಅನೇಕ ಸುದ್ದಿಗಳು ಹರಿದಾಡುತ್ತಿದೆ. ಈಗಾಗಲೇ, ಸ್ಥಳೀಯ ಹಾಗೂ ರಾಷ್ಟ್ರೀಯ ಮಾಧ್ಯಮಗಳು ತಲೆಬರುಡೆ ದೊರಕಿದ ಸ್ಥಳ ಹಾಗೂ ನಾಪತ್ತೆಯಾದ ವೈದ್ಯಕೀಯ ವಿದ್ಯಾರ್ಥಿನಿಯ ಕುಟುಂಬದವರ ಹೇಳಿಕೆಯನ್ನು ಪ್ರಸಾರ ಮಾಡಿವೆ. ಈ ಪ್ರದೇಶದಲ್ಲಿ ಅಸಹಜ ಸಾವುಗಳು, ಕೊಲೆ, ಅತ್ಯಾಚಾರ ಹೀಗೆ ಗಂಭೀರ ಸ್ವರೂಪದ ಅಪರಾಧ ಪ್ರಕರಣಗಳು ನಡೆದಿರಬಹುದಾಗಿದ್ದು, ಈ ಎಲ್ಲಾ ಸಾಧ್ಯತೆಗಳನ್ನು ಪರಿಗಣಿಸಿ ಪ್ರಕರಣದ ಸಮಗ್ರ ಮತ್ತು ನಿಷ್ಪಕ್ಷಪಾತ ತನಿಖೆ ನಡೆಸುವಂತೆ ರಾಜ್ಯ ಮಹಿಳಾ ಆಯೋಗವು ರಾಜ್ಯ ಸರ್ಕಾರಕ್ಕೆ ಕೋರಿತ್ತು, ಇದನ್ನ ಪರಿಗಣಿಸಿದ ಸರ್ಕಾರ ತನಿಖಾ ತಂಡ ರಚನೆ ಮಾಡುವಂತೆ ಆದೇಶ ನೀಡಿದೆ.

ಐಪಿಎಸ್ ಅಧಿಕಾರಿಗಳಿರುವ ತನಿಖಾ ತಂಡ

ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಸಹ ಮಾಹಿತಿ ನೀಡಿದ್ದು, ರಾಜ್ಯ ಸರ್ಕಾರ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಐಪಿಎಸ್ ಅಧಿಕಾರಿಗಳಿರುವ ವಿಶೇಷ ತನಿಖಾ ತಂಡವನ್ನು ರಚಿಸುವಂತೆ ಆದೇಶ ನೀಡಲಾಗಿದೆ. ಸದ್ಯದ ಮಾಹಿತಿ ಪ್ರಕಾರ ವಿಶೇಷ ತನಿಖಾ ತಂಡವು ಧರ್ಮಸ್ಥಳ ಠಾಣೆಯಲ್ಲಿ ದಾಖಲಾಗಿರುವ ದೂರು ಸೇರಿದಂತೆ ಇದಕ್ಕೆ ಸಂಬಂಧಪಟ್ಟಂತೆ ರಾಜ್ಯದ ಇತರೆ ಪೊಲೀಸ್‌ ಠಾಣೆಗಳಲ್ಲಿ ದಾಖಲಾಗಿರುವ ಹಾಗೂ ದಾಖಲಾಗುವ ಎಲ್ಲಾ ಕ್ರಿಮಿನಲ್ ಪ್ರಕರಣಗಳನ್ನು ಸಮಗ್ರ ತನಿಖೆ ನಡೆಸಿ, ವರದಿ ನೀಡಲಿದೆ ಎಂದಿದ್ದಾರೆ.

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

[t4b-ticker]
error: Content is protected !!