ತಿರುಪತಿ-ಹೈದರಾಬಾದ್ ಇಂಡಿಗೋ ವಿಮಾನದಲ್ಲಿ ತಾಂತ್ರಿಕ ದೋಷ: 40 ನಿಮಿಷ ಆಗಸದಲ್ಲೇ ಗಿರಕಿ ಹೊಡೆದ ನಂತರ ಸುರಕ್ಷಿತ ಲ್ಯಾಂಡಿಂಗ್, ನಿಟ್ಟುಸಿರು ಬಿಟ್ಟ ಪ್ರಯಾಣಿಕರು

Picture of Savistara

Savistara

Bureau Report

ಏರ್‌ಬಸ್ A321neo ವಿಮಾನ ಭಾನುವಾರ ಸಂಜೆ 7:42 ರ ಸುಮಾರಿಗೆ ತಿರುಪತಿ ವಿಮಾನ ನಿಲ್ದಾಣದಿಂದ ಹೊರಟಿತ್ತು. ಈ ವೇಳೆ, ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ.

ಹೈದರಾಬಾದ್:‌ ತಿರುಪತಿಯಿಂದ ಹೈದರಾಬಾದ್‌ಗೆ ಹೋಗುತ್ತಿದ್ದ ಇಂಡಿಗೋ ವಿಮಾನದಲ್ಲಿ ದಿಢೀರ್ ತಾಂತ್ರಿಕ ದೋಷ ಕಾರಣ ಸುಮಾರು 40 ನಿಮಿಷಗಳ ಕಾಲ ಆಕಾಶದಲ್ಲೇ ಗಿರಕಿ ಹೊಡೆದಿದ್ದು, ಈ ಬೆಳವಣಿಗೆ ಜನರಲ್ಲಿ ಆತಂಕ ಮೂಡಿಸಿತ್ತು.ಏರ್‌ಬಸ್ A321neo ವಿಮಾನ ಭಾನುವಾರ ಸಂಜೆ 7:42 ರ ಸುಮಾರಿಗೆ ತಿರುಪತಿ ವಿಮಾನ ನಿಲ್ದಾಣದಿಂದ ಹೊರಟಿತ್ತು. ಈ ವೇಳೆ, ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ.ಬಳಿಕ 40 ನಿಮಿಷಗಳ ಕಾಲ ವಿಮಾನ ಆಕಾಶದಲ್ಲೇ ಸುತ್ತಾಡಿ, ರಾತ್ರಿ 8:34ರ ಸುಮಾರಿಗೆ ತಿರುಪತಿ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಲ್ಯಾಂಡ್‌ ಆಗಿದೆ ಎಂದು ಏರ್ ಟ್ರಾಫಿಕ್ ಟ್ರ್ಯಾಕಿಂಗ್ ವೆಬ್‌ಸೈಟ್ Flightradar24 ತಿಳಿಸಿದೆ.ಇದರ ಪರಿಣಾಮ ಹೈದರಾಬಾದ್‌ಗೆ ನಿಗದಿಪಡಿಸಲಾದ ಕೊನೆಯ ವಿಮಾನವನ್ನು ರದ್ದುಗೊಳಿಸಲಾಗಿದೆ. ಇದರಿಂದ ಆಕ್ರೋಶಗೊಂಡ ಪ್ರಯಾಣಿಕರು ಸಿಬ್ಬಂದಿಗಳೊಂದಿಗೆ ವಾಗ್ವಾದ ನಡೆಸಿದ್ದಾರೆ. ಈ ಕುರಿತು ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಘಿದೆ. ಘಟನೆಯ ಕುರಿತು ವಿಮಾನಯಾನ ಸಂಸ್ಥೆ ಇದೂವರೆಗೆ ಯಾವುದೇ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿಲ್ಲ.

News Updates

ಸುಳ್ಯದ ಗುತ್ತಿಗಾರಿನಲ್ಲಿ ಅಡಿಕೆಯಲ್ಲಿ ಎಲೆಚುಕ್ಕೆ ರೋಗ ನಿರ್ವಹಣೆ ಕುರಿತು ಮಾಹಿತಿ ಮತ್ತು ಸಂವಾದ ಕಾರ್ಯಕ್ರಮ | ಕೇಂದ್ರ ಸರ್ಕಾರ ಅಡಿಕೆ ಬೆಳೆಗಾರರ ಹಿತಕ್ಕೆ ಸದಾ ಬದ್ದವಾಗಿದ್ದು ಎಲೆ ಚುಕ್ಕಿ ರೋಗ ದಿಂದ ಅಡಿಕೆ ಬೆಳೆಗಾರರ ಸಂಕಷ್ಟಕ್ಕಿಡಾಗಿದ್ದು ಕೇಂದ್ರ ಕೃಷಿ ಸಚಿವರ ಗಮನಕ್ಕೆ ತಂದಿದ್ದು ಶೀಘ್ರದಲ್ಲಿ ಈ ಬಗ್ಗೆ ಪರಿಹಾರ : ಸಂಸದ ಕ್ಯಾ. ಬ್ರಿಜೇಶ್ ಚೌಟ

[t4b-ticker]
error: Content is protected !!