ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ| ಎಸ್ಐಟಿ ತಂಡದ ರಚನೆಯ ಬೆನ್ನಲ್ಲೇ ವಿಘ್ನ | ಇಬ್ಬರು ಅಧಿಕಾರಿಗಳು ತಂಡದಿಂದ ಹೊರಕ್ಕೆ?

Picture of Savistara

Savistara

Bureau Report

ಧರ್ಮಸ್ಥಳ ಅರಣ್ಯ ಪ್ರದೇಶದಲ್ಲಿ ನೂರಾರು ಶವಗಳನ್ನ ಹೂಳಲಾಗಿದೆ ಎಂಬ ಪ್ರಕರಣಕ್ಕೆ ಇದೀಗ ಸ್ಫೋಟಕ ಟ್ವಿಸ್ಟ್ ಸಿಕ್ಕಿದೆ. ಸರ್ಕಾರ ಇದನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಲು ಸರ್ಕಾರ ನಿರ್ಧರಿಸಿದೆ. ಹಿರಿಯ ಐಪಿಎಸ್ ಅಧಿಕಾರಿ ಪ್ರಣವ್ ಮೊಹಾಂತಿ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸಿದೆ. SIT ತಂಡ ರಚಿಸಿ ಅರ್ಧ ದಿನ ಕಳೆಯುವಷ್ಟರಲ್ಲೇ ಆರಂಭಿಕ ವಿಘ್ನ ಎದುರಾಗಿದೆ.ವಿಶೇಷ ತನಿಖಾ ತಂಡದ ನಾಲ್ವರಲ್ಲಿ ಇಬ್ಬರು ಐಪಿಎಸ್‌ ಅಧಿಕಾರಿಗಳು ಹಿಂದಕ್ಕೆ ಸರಿದಿದ್ದಾರೆ ಅನ್ನೋ ಮಾಹಿತಿ‌ ಉನ್ನತ ಮೂಲಗಳಿಂದ ತಿಳಿದುಬಂದಿದೆ. ತನಿಖೆಯಿಂದ ಹಿಂದೆ ಸರಿಯೋಕೆ ಇಬ್ಬರು ಅಧಿಕಾರಿಗಳು ತಯಾರಿ ನಡೆಸಿದ್ದಾರೆ. ಈ ಸಂಬಂಧ ಐಪಿಎಸ್‌ ಅಧಿಕಾರಿಗಳಾದ ಎಂ.ಎನ್ ಅನುಚೇತ್ ಮತ್ತು ಸೌಮ್ಯಲತಾ ಸರ್ಕಾರಕ್ಕೆ ಪತ್ರ ಬರೆಯಲು ಮುಂದಾಗಿದ್ದಾರೆ. ವೈಯಕ್ತಿಕ ಕಾರಣಗಳನ್ನ ನೀಡಿ ಎಸ್‌ಐಟಿ ತಂಡದಿಂದ ತಮ್ಮನ್ನು ಕೈಬಿಡುವಂತೆ ಸೋಮವಾರ (ಜು.21) ಪತ್ರ ಬರೆಯಲು ಸಿದ್ಧತೆ ನಡೆಸಿದ್ದಾರೆ ಎಂದು ಉನ್ನತ ಪೊಲೀಸ್‌ ಮೂಲಗಳಿಂದ ತಿಳಿದುಬಂದಿದೆ.ಕಳೆದ ಜೂನ್ 22ರಂದು ವಕೀರಾದ ಓಜಸ್ವಿ ಗೌಡ ಹಾಗೂ ಸಚಿನ್ ದೇಶಪಾಂಡೆ ಸಾಮಾಜಿಕ ಜಾಲತಾಣದಲ್ಲಿ ಪತ್ರವೊಂದನ್ನು ಹಂಚಿಕೊಂಡಿದ್ದರು. ವ್ಯಕ್ತಿಯೊಬ್ಬ ಶವ ಹೂತಿಟ್ಟ ಪ್ರಕರಣದ ಮಾಹಿತಿಯನ್ನ ಬಹಿರಂಗಗೊಳಿಸಿದ್ದರು.ಅನಾಮಿಕ ವ್ಯಕ್ತಿಯೊಬ್ಬ ಯಾರದ್ದೊ ಒತ್ತಡಕ್ಕೆ ಹೆದರಿ ನೂರಾರು ಶವ ವಿಲೇವಾರಿ ಮಾಡಿದ್ದಾನೆ ಎನ್ನಲಾದ ಸುದ್ದಿಯು ತೀವ್ರ ಸಂಚಲನಕ್ಕೆ ಕಾರಣವಾಯ್ತು. ಅಲ್ಲದೇ ಆತ ಬೆಳ್ತಂಗಡಿ ಪೊಲೀಸರಿಗೆ ಹೂತಿಟ್ಟಿದ್ದ ತಲೆ ಬುರುಡೆ ತಂದುಕೊಟ್ಟಿದ್ದಾನೆಂಬ ಸುದ್ದಿಯೂ ಹೊರಬಿತ್ತು. ಇದಾದ ಮೇಲೆ ಪೊಲೀಸರು ದೂರು ದಾಖಲಿಸಿಕೊಂಡರು. ಇದನ್ನು ಇಷ್ಟಕ್ಕೆ ಬಿಡದ ಅನಾಮಿಕ, ಜುಲೈ ಮೂರರಂದು ವಕೀಲರ ಸಹಾಯದೊಂದಿಗೆ ದಕ್ಷಿಣ ಕನ್ನಡ ಎಸ್ಪಿಗೆ ದೂರು ನೀಡಿದ್ದ. ಅದರಲ್ಲಿ ಭಯಾನಕ ಅಂಶಗಳನ್ನು ಉಲ್ಲೇಖಿಸಿದ್ದ.

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

[t4b-ticker]
error: Content is protected !!