ಶಾಸಕರಾದ ಹರೀಶ್ ಪೂಂಜರಿಂದ ಬಂದಾರಿನ ಪೆರ್ಲ -ಬೈಪಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿವೇಕ ಕೊಠಡಿ ಉದ್ಘಾಟನೆ

Picture of Savistara

Savistara

Bureau Report

ಬಂದಾರು: ಬಂದಾರು ಗ್ರಾಮ ಪೆರ್ಲ -ಬೈಪಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಇದರ ವಿವೇಕ ಕೊಠಡಿ ಉದ್ಘಾಟನಾ ಕಾರ್ಯಕ್ರಮ ಜು. 21 ರಂದು ನಡೆಯಿತು.ಕೊಠಡಿಯ ಉದ್ಘಾಟನೆಯನ್ನು ಮಾನ್ಯ ಶಾಸಕರಾದ ಹರೀಶ್ ಪೂಂಜ ರವರು ನೆರವೇರಿಸಿದರು. ಸರಕಾರಿ ಶಾಲೆಗಳ ಉಳಿವಿನ ಬಗ್ಗೆ ಮಾತನಾಡುತ್ತಾ ಅವರು ಪೋಷಕರು ತಮ್ಮ ಮಕ್ಕಳನ್ನು ಸರಕಾರಿ ಶಾಲೆಗೆ ಸೇರಿಸುವುದರ ಮೂಲಕ ಶಾಲೆಯನ್ನು ಉಳಿಸಿ ಬೆಳೆಸುವ ಕಾರ್ಯ ಆಗಬೇಕಿದೆ.

ಉತ್ತಮ ಗುಣಮಟ್ಟದ ಶಿಕ್ಷಣ ಸರಕಾರಿ ಶಾಲೆಗಳಲ್ಲಿ ದೊರೆಯುತ್ತಿದ್ದು, ಶಾಲೆಗಳನ್ನು ಉಳಿಸಿಕೊಳ್ಳುವತ್ತ ಊರಿನವರು ಗಮನ ಹರಿಸಬೇಕಾಗಿದೆ ಎಂದರು. ಈ ಸಂದರ್ಭದಲ್ಲಿ ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ,ಪಂಚಾಯತ್ ಸದಸ್ಯರಾದ ಅನಿತ. ಕೆ, ಕುರುಡಂಗೆ,ಭಾರತಿ ಕೋಡಿಯೆಲ್ , ತಾಲೂಕು ಪಂಚಾಯತ್ ಮಾಜಿ ಸದಸ್ಯರಾದ ಮಹಾಬಲ ಗೌಡ,ಕೃಷ್ಣಯ್ಯ ಆಚಾರ್ಯ, ಪದ್ಮುಂಜ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ರಕ್ಷಿತ್ ಪಣೆಕ್ಕರ, ಹೊನ್ನಪ್ಪ ಗೌಡ, ಡೀಕಯ್ಯ ಗೌಡ,

ಪೆರ್ಲ- ಬೈಪಾಡಿ ಹಾಲು ಉತ್ಪಾದಕರ ಸಂಘದ ಅಧ್ಯಕ್ಷರಾದ ಉಮೇಶ್ ಗೌಡ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷರಾದ ದಾಮೋದರ ಗೌಡ ಕಾಡoಡ,ಪದಾಧಿಕಾರಿಗಳು- ಸದಸ್ಯರು,ಶಾಲಾ ಶಿಕ್ಷಕರು, ಪೋಷಕರು ಹಾಗೂ ಊರಿನ ನಾಗರಿಕರು ಪಾಲ್ಗೊಂಡಿದ್ದರು.

News Updates

ಸುಳ್ಯದ ಗುತ್ತಿಗಾರಿನಲ್ಲಿ ಅಡಿಕೆಯಲ್ಲಿ ಎಲೆಚುಕ್ಕೆ ರೋಗ ನಿರ್ವಹಣೆ ಕುರಿತು ಮಾಹಿತಿ ಮತ್ತು ಸಂವಾದ ಕಾರ್ಯಕ್ರಮ | ಕೇಂದ್ರ ಸರ್ಕಾರ ಅಡಿಕೆ ಬೆಳೆಗಾರರ ಹಿತಕ್ಕೆ ಸದಾ ಬದ್ದವಾಗಿದ್ದು ಎಲೆ ಚುಕ್ಕಿ ರೋಗ ದಿಂದ ಅಡಿಕೆ ಬೆಳೆಗಾರರ ಸಂಕಷ್ಟಕ್ಕಿಡಾಗಿದ್ದು ಕೇಂದ್ರ ಕೃಷಿ ಸಚಿವರ ಗಮನಕ್ಕೆ ತಂದಿದ್ದು ಶೀಘ್ರದಲ್ಲಿ ಈ ಬಗ್ಗೆ ಪರಿಹಾರ : ಸಂಸದ ಕ್ಯಾ. ಬ್ರಿಜೇಶ್ ಚೌಟ

[t4b-ticker]
error: Content is protected !!