ಬೈಂದೂರು: ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರು ವಿಧಾನಸಭಾಸಮಿತಿ ಮೂಲಕ ಅಮೆರಿಕದ ಬೋಸ್ಟನ್‌ಗೆ ಅಧ್ಯಯನ ಪ್ರವಾಸದ ಅವಕಾಶ ಪಡೆದಿದ್ದಾರೆ. ರಾಜ್ಯ ಶಾಸಕರ ರಾಷ್ಟ್ರೀಯ ಸಮಾವೇಶ ಹಾಗೂ ರಾಷ್ಟ್ರೀಯ ಶಾಸಕರ ಸಮಾವೇಶ ಸಂಸ್ಥೆಗಳ ಆಶ್ರಯದಲ್ಲಿ ಅಮೆರಿಕದ ಬೋಸ್ಟನ್ ನಗರದಲ್ಲಿ ಶಾಸಕಾಂಗ ಶೃಂಗಸಭೆ ನಡೆಯಲಿದೆ. ಈ ಶೃಂಗಸಭೆಯಲ್ಲಿ ಭಾರತದ ಸಂಸದರು, ವಿವಿಧ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನ ಪರಿಷತ್ತಿನ ಸದಸ್ಯರು, ಸಚಿವರು, ರಾಜಕೀಯ ತಜ್ಞರು, ನೀತಿ ನಿರೂಪಕರು, ರಾಜಕೀಯ ಮುತ್ಸದ್ಧಿಗಳು ಸೇರಿದಂತೆ ವಿವಿಧ ಗಣ್ಯರು ಪಾಲ್ಗೊಳ್ಳಲಿದ್ದಾರೆ. ಈ ಶೃಂಗಸಭೆಯಲ್ಲಿ ಪ್ರಜಾತಂತ್ರ ಗಟ್ಟಿಗೊಳಿಸುವಿಕೆಯಲ್ಲಿ ಶಾಸನಸಭೆಗಳ ಪಾತ್ರ, ಶಾಸನ ಸಭೆಗಳ ಪಕ್ಷಾತೀತ ನಿರ್ವಹಣೆ, ಶಾಸನ ಸಭೆಗಳಿಗೆ ಅರ್ಥಿಕ ಸ್ವಾಯತ್ತತೆ ಸೇರಿದಂತೆ ಹತ್ತು ಹಲವು ವಿಷಯಗಳ ಕುರಿತು ಗೋಷ್ಠಿಗಳು, ವಿಚಾರ ಸಂಕಿರಣ, ಸಂವಾದ ಜರುಗಲಿದೆ ಎಂದು ಶಾಸಕರ ಕಚೇರಿ ಪ್ರಕಟಣೆ ತಿಳಿಸಿದೆ.
ಅಮೆರಿಕ ಶೃಂಗಸಭೆಗೆ ಶಾಸಕ ಗಂಟಿಹೊಳೆ
Savistara
Bureau Report
[t4b-ticker]











































