ಮೈಸೂರಿಗೆ ನಾಲ್ವಡಿಗಿಂತಲೂ ಸಿದ್ದರಾಮಯ್ಯ ಕೊಡುಗೆ ಜಾಸ್ತಿ: ಯತೀಂದ್ರ ಸಿದ್ದರಾಮಯ್ಯ

Picture of Savistara

Savistara

Bureau Report

ಮೈಸೂರು: ‘ಮೈಸೂರು ನಗರದ ಅಭಿವೃದ್ಧಿಗೆ ನಾಲ್ವಡಿ ಕೃಷ್ಣರಾಜ ಒಡೆಯ‌ರ್ ಅವರಿಗಿಂತಲೂ ಹೆಚ್ಚು ಅಥವಾ ಅಷ್ಟೇ ಪ್ರಮಾಣದಲ್ಲಿ ಅನುದಾನ ನೀಡಿರುವುದು ಸಿದ್ದರಾಮಯ್ಯ ಮಾತ್ರ’ ಎಂದು ವಿಧಾನಪರಿಷತ್‌ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದರು.

ಇಲ್ಲಿ ಶುಕ್ರವಾರ ಪತ್ರಕರ್ತರೊಂದಿಗೆ ಮಾತನಾಡಿ, ‘ನಗರದಲ್ಲಿ ಸಾಕಷ್ಟು ಅಭಿವೃದ್ಧಿಯನ್ನು ಅವರು ಮಾಡಿದ್ದಾರೆ. ಆದ್ದರಿಂದಲೇ ಇಲ್ಲಿ ಸಾಧನಾ ಸಮಾವೇಶ ಮಾಡಿದೆವು. ವಿರೋಧ ಪಕ್ಷದವರು ಸುಮ್ಮನೆ ಟೀಕಿಸುತ್ತಾರೆ’ ಎಂದು ತಿರುಗೇಟು ನೀಡಿದರು.

ಯದುವೀ‌ರ್ ತಿರುಗೇಟು

ಇದಕ್ಕೆ ಖಾರವಾಗಿ ಪ್ರತಿಕ್ರಿಯಿಸಿರುವ ಸಂಸದ ಯದುವೀ‌ರ್ ಕೃಷ್ಣದತ್ತ ಚಾಮರಾಜ ಒಡೆಯರ್, ‘ಇಡಿ ವಿಶ್ವವೇ ಮೈಸೂರು ಸಂಸ್ಥಾನವನ್ನು ತಿರುಗಿ ನೋಡುವಂತೆ ಅಭಿವೃದ್ಧಿಗೊಳಿಸಿ, ಜನಪರ ಆಡಳಿತವನ್ನು ನಡೆಸಿ, ಕನ್ನಡಿಗರ ಹೃದಯ ಸಿಂಹಾಸನದಲ್ಲಿ ಅಜರಾಮರರಾಗಿರುವ ನಾಲ್ವಡಿ ಕೃಷ್ಣರಾಜ ಒಡೆಯರ್ ಕೊಡುಗೆಗಳು ಏನೆಂಬುದು ನಮ್ಮ ಕಣ್ಣ ಮುಂದೆಯೇ ಇವೆ’ ಎಂದು ತಿಳಿಸಿದ್ದಾರೆ.

[t4b-ticker]
error: Content is protected !!