ಶಿವಮೊಗ್ಗ ಜಿಲ್ಲಾ ಜಂಗಮ ಮಹಿಳಾ ಸಮಾಜದ ವತಿಯಿಂದ 7 ನೇ ವರ್ಷದ ವಾರ್ಷಿಕೋತ್ಸವ ಸಮಾರಂಭ

Picture of Savistara

Savistara

Bureau Report

ಶಿವಮೊಗ್ಗ ಜಿಲ್ಲಾ ಜಂಗಮ ಮಹಿಳಾ ಸಮಾಜದ ವತಿಯಿಂದ ಇಂದು ವಿನೋಬನಗರದ ಶಿವಾಲಯ ದೇವಸ್ಥಾನದಲ್ಲಿ ಕೋಣಂದೂರು ಬೃಹನ್ಮಠದ ಪರಮಪೂಜ್ಯ ಶ್ರೀ ಷ. ಬ್ರ. ಶ್ರೀಪತಿ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳ ಸಮ್ಮುಖದಲ್ಲಿ ಜಿಲ್ಲಾ ಜಂಗಮ ಮಹಿಳಾ ಸಮಾಜದ 7 ನೇ ವರ್ಷದ ವಾರ್ಷಿಕೋತ್ಸವ ಸಮಾರಂಭ ನಡೆಯಿತು. ಈ ಸಂದರ್ಭದಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಅಭಿನಂದಿಸಿ ಡಾ. ಧನಂಜಯ ಸರ್ಜಿ ಮಾತನಾಡಿದರು.

ಈ ವೇಳೆ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಜನಪ್ರಿಯ ಸಂಸದರಾದ ಬಿ.ವೈ ರಾಘವೇಂದ್ರ ಅವರು, ಶಿವಮೊಗ್ಗ ಜಿಲ್ಲಾ ಜಂಗಮ ಮಹಿಳಾ ಸಮಾಜದ ಅಧ್ಯಕ್ಷರಾದ ಹೆಚ್.ಎಂ ಪ್ರೇಮ ವೀರಪ್ಪಯ್ಯ ಅವರು, ಶಿವಮೊಗ್ಗ ಡಿ.ಸಿ.ಸಿ ಬ್ಯಾಂಕ್ ನಿರ್ದೇಶಕರಾದ ಮಹಾಲಿಂಗಯ್ಯ ಶಾಸ್ತ್ರೀ ಅವರು,

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ರಾಜ್ಯಾಧ್ಯಕ್ಷರಾದ ಸಿ.ಎಸ್ ಷಡಾಕ್ಷರಿ ಅವರು, ಮಹಾನಗರ ಪಾಲಿಕೆ ಮಾಜಿ ಸದಸ್ಯರಾದ ಹೆಚ್.ಸಿ ಯೋಗೇಶ್ ಅವರು, ಕೆ.ಇ ಕಾಂತೇಶ್ ಅವರು, ಬಸವೇಶ್ವರ ವೀರಶೈವ ಸಮಾಜ ಸೇವಾ ಸಂಘ ಗೌರವ ಕಾರ್ಯದರ್ಶಿಗಳಾದ ಎಸ್.ಪಿ ದಿನೇಶ್ ಅವರು,

ಜಿಲ್ಲಾ ಜಂಗಮ ಸಮಾಜದ ಅಧ್ಯಕ್ಷರಾದ ಚಂದ್ರಯ್ಯ ಎ. ಎಂ ಅವರು, ಬೇಡ ಜಂಗಮ ಸಮಾಜದ ತಾಲೂಕು ಅಧ್ಯಕ್ಷರಾದ್ ಲೋಕೇಶ ಹೆಚ್. ಎಂ ಅವರು, ಬಳ್ಳೇಕೆರೆ ಸಂತೋಷ್ ಅವರು, ಮಹೇಶ್ ಮೂರ್ತಿ ಅವರು, ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

News Updates

ಸುಳ್ಯದ ಗುತ್ತಿಗಾರಿನಲ್ಲಿ ಅಡಿಕೆಯಲ್ಲಿ ಎಲೆಚುಕ್ಕೆ ರೋಗ ನಿರ್ವಹಣೆ ಕುರಿತು ಮಾಹಿತಿ ಮತ್ತು ಸಂವಾದ ಕಾರ್ಯಕ್ರಮ | ಕೇಂದ್ರ ಸರ್ಕಾರ ಅಡಿಕೆ ಬೆಳೆಗಾರರ ಹಿತಕ್ಕೆ ಸದಾ ಬದ್ದವಾಗಿದ್ದು ಎಲೆ ಚುಕ್ಕಿ ರೋಗ ದಿಂದ ಅಡಿಕೆ ಬೆಳೆಗಾರರ ಸಂಕಷ್ಟಕ್ಕಿಡಾಗಿದ್ದು ಕೇಂದ್ರ ಕೃಷಿ ಸಚಿವರ ಗಮನಕ್ಕೆ ತಂದಿದ್ದು ಶೀಘ್ರದಲ್ಲಿ ಈ ಬಗ್ಗೆ ಪರಿಹಾರ : ಸಂಸದ ಕ್ಯಾ. ಬ್ರಿಜೇಶ್ ಚೌಟ

[t4b-ticker]
error: Content is protected !!