ಧರ್ಮಸ್ಥಳ ಎಸ್‌ಐಟಿ ತಂಡದಿಂದ ಮತ್ತೊಬ್ಬರು ಅಧಿಕಾರಿ ಹೊರಕ್ಕೆ; ವೈಯಕ್ತಿಕ ಕಾರಣ ನೀಡಿ ಎಸ್ ಐ ಟಿ ಮುಖ್ಯಸ್ಥರಿಗೆ ಎಸ್ಪಿ ಸಿ.ಎ.ಸೈಮನ್ ಪತ್ರ

Picture of Savistara

Savistara

Bureau Report

ಧರ್ಮಸ್ಥಳದಲ್ಲಿ ಹೆಣ ಹೂತ ಪ್ರಕರಣದ ತನಿಖೆಗೆ ರಾಜ್ಯ ಸರ್ಕಾರ ನೇಮಿಸಿರುವ ವಿಶೇಷ ತನಿಖಾ ತಂಡದಿಂದ ಎಸ್ಪಿ ಸಿ.ಎ.ಸೈಮನ್ ತಮ್ಮನ್ನು ಹೊರಗಿಡುವಂತೆ ಪತ್ರ ಬರೆದಿದ್ದಾರೆ.

ಮಂಗಳೂರು, ಜುಲೈ 26 : ಧರ್ಮಸ್ಥಳದಲ್ಲಿ ಹೆಣ ಹೂತಪ್ರಕರಣದ ತನಿಖೆಗೆ ರಾಜ್ಯ ಸರ್ಕಾರ ನೇಮಿಸಿರುವ ವಿಶೇಷ ಎಸ್ಪಿ ಸಿ.ಎ.ಸೈಮನ್ ತಮ್ಮನ್ನು ತನಿಖಾ ತಂಡದಿಂದ ಹೊರಗಿಡುವಂತೆ ಪತ್ರ ಬರೆದಿದ್ದಾರೆ.ಈಗಾಗಲೇ ಐಪಿಎಸ್ ಅಧಿಕಾರಿ ಸೌಮ್ಯಲತಾ ಎಸ್‌ಐಟಿ ತಂಡದಿಂದ ಹೊರಗುಳಿಯುವುದಾಗಿ ಪತ್ರ ಬರೆದು ಕೇಳಿಕೊಂಡಿದ್ದರು. ಇದೀಗ ಎಸ್ಪಿ ಸೈಮನ್ ಕೂಡ ತಮ್ಮನ್ನು ತನಿಖಾ ತಂಡದಿಂದ ಕೈಬಿಡುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ. ಸೈಮನ್ ಅವರು ಧರ್ಮಸ್ಥಳ ಶಿಕ್ಷಣ ಸಂಸ್ಥೆಗೆ ಸೇರಿದ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡಿದ್ದ ಹಿನ್ನಲೆ ನಿಷ್ಪಕ್ಷಪಾತ ತನಿಖೆಗೆ ಅಡ್ಡಿಯಾಗಬಹುದು ಎಂಬ ನೆಲೆಯಲ್ಲಿ ತನಿಖಾ ತಂಡದಿಂದ ಹಿಂದೆ ಸರಿಯುತ್ತಿರುವುದಾಗಿ ಮನವಿ ಸಲ್ಲಿಸಿದ್ದಾರೆ.ರಾಜ್ಯ ಸರ್ಕಾರವು ಕಳೆದ ಭಾನುವಾರ ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಮಹಾನಿರ್ದೇಶಕ ಪ್ರಣವ್ ಮೊಹಂತಿ ಅವರ ನೇತೃತ್ವದಲ್ಲಿ ವಿಶೇಷ ತನಿಖಾ ತಂಡವನ್ನು ರಚಿಸಿತ್ತು. ಹಿರಿಯ ಐಪಿಎಸ್ ಅಧಿಕಾರಿಗಳಾದ ಎಂ.ಎನ್ ಅನುಚೇತ್, ಸೌಮ್ಯಲತಾ ಮತ್ತು ಜಿತೇಂದ್ರ ಕುಮಾರ್ ದಯಾಮ ಅವರನ್ನು ತಂಡಕ್ಕೆ ಸೇರಿಸಲಾಗಿತ್ತು. ಸೌಮ್ಯಲತಾ ಅವರು ವೈಯಕ್ತಿಕ ಕಾರಣಕ್ಕೆ ತಮ್ಮನ್ನು ಕೈಬಿಡುವಂತೆ ಮನವಿ ಮಾಡಿದ್ದರು. ಆ ಜಾಗಕ್ಕೆ ಬೇರೊಬ್ಬ ಮಹಿಳಾ ಅಧಿಕಾರಿಯನ್ನು ನೇಮಕ ಮಾಡುವುದಾಗಿ ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದರು.ಇದೇ ವೇಳೆ, ಡಿಐಜಿ ಅನುಚೇತ್ ಮತ್ತು ದಯಾಮ ಅವರನ್ನು ಒಳಗೊಂಡ ತನಿಖಾ ತಂಡ ಪ್ರಕರಣದ ತನಿಖೆ ಆರಂಭಿಸಿದೆ. ಸೈಮನ್ ಅವರು ಡಿಸಿಆರ್ ಇ ಮಂಗಳೂರು ವಿಭಾಗದಲ್ಲಿ ಎಸ್ಪಿ ಆಗಿ ಕರ್ತವ್ಯದಲ್ಲಿದ್ದಾರೆ.

News Updates

ಸುಳ್ಯದ ಗುತ್ತಿಗಾರಿನಲ್ಲಿ ಅಡಿಕೆಯಲ್ಲಿ ಎಲೆಚುಕ್ಕೆ ರೋಗ ನಿರ್ವಹಣೆ ಕುರಿತು ಮಾಹಿತಿ ಮತ್ತು ಸಂವಾದ ಕಾರ್ಯಕ್ರಮ | ಕೇಂದ್ರ ಸರ್ಕಾರ ಅಡಿಕೆ ಬೆಳೆಗಾರರ ಹಿತಕ್ಕೆ ಸದಾ ಬದ್ದವಾಗಿದ್ದು ಎಲೆ ಚುಕ್ಕಿ ರೋಗ ದಿಂದ ಅಡಿಕೆ ಬೆಳೆಗಾರರ ಸಂಕಷ್ಟಕ್ಕಿಡಾಗಿದ್ದು ಕೇಂದ್ರ ಕೃಷಿ ಸಚಿವರ ಗಮನಕ್ಕೆ ತಂದಿದ್ದು ಶೀಘ್ರದಲ್ಲಿ ಈ ಬಗ್ಗೆ ಪರಿಹಾರ : ಸಂಸದ ಕ್ಯಾ. ಬ್ರಿಜೇಶ್ ಚೌಟ

[t4b-ticker]
error: Content is protected !!