ಎನ್‌ಕೌಂಟ‌ರ್ ಸ್ಪೆಷಲಿಸ್ಟ್ ದಯಾನಾಯಕ್‌ ನಿವೃತ್ತಿ

Picture of Savistara

Savistara

Bureau Report

ಮುಂಬೈ: 87 ಶೂಟೌಟ್ ನಡೆಸಿದ್ದ ಕನ್ನಡಿಗ ನಿವೃತ್ತಿಗೂ 2 ದಿನ ಮೊದಲು ಎಸಿಪಿ ಹುದ್ದೆ!

ಮುಂಬೈ: ಪಾತಕಿಗಳಿಗೆ ಎನ್‌ಕೌಂಟರ್‌ಮೂಲಕಬಿಸಿಮುಟ್ಟಿಸಿ ‘ಎನ್‌ಕೌಂಟರ್ ಸ್ಪೆಷಲಿಸ್ಟ್’ ಎಂದೇ ಖ್ಯಾತಿ ಪಡೆದಿದ್ದ, ಕನ್ನಡಿಗ ಮುಂಬೈನ ಹಿರಿಯ ಪೊಲೀಸ್ ಇನ್‌ಸ್ಪೆಕ್ಟರ್ ದಯಾ ನಾಯಕ್ ಜು.31 ರಂದು ಸೇವೆಯಿಂದ ನಿವೃ ತ್ತರಾಗಲಿದ್ದಾರೆ. ಅದಕ್ಕೂ 2 ದಿನ ಮುಂಚೆ ಮಹಾ ರಾಷ್ಟ್ರ ಸರ್ಕಾರ ಅವರಿಗೆ ಎಸಿಪಿ ಹುದ್ದೆಗೆ ಬಡ್ತಿ ನೀಡಿದೆ. ಈಬಗ್ಗೆ ದಯಾನಾಯಕ್‌ ಜಾಲತಾಣದಲ್ಲಿ ಬರೆದುಕೊಂಡಿದ್ದು, ‘ಮೊದಲ ಬಾರಿಗೆ ಎಸಿಪಿ ಸಮ ವಸ್ತ್ರ ಧರಿಸುತ್ತಿದ್ದೇನೆ. ಶಾಶ್ವತವಾಗಿ ಅದನ್ನು ನೇತು ಹಾಕುವ ಒಂದು ದಿನದ ಮೊದಲು. ‎‫

ಇದು ಕೊನೆಯಲ್ಲಿ ಬಂದಿರಬಹುದು. ಇದು ಬಡ್ತಿ ಮಾತ್ರವಲ್ಲದೇ ಜೀವಿತಾವಧಿಯ ಕರ್ತವ್ಯ,ಶಿಸ್ತು ಮತ್ತು ಸಮರ್ಪಣೆಗುರುತಿಸುವ ಗೌರವ’ ಎಂದಿದ್ದಾರೆ. ದಯಾ ನಾಯಕ್ ಮೂಲತಃ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಎಣ್ಣೆಹೊಳೆ ಯವರು. ಮುಂಬೈಗೆ ಸ್ಥಳಾಂತರವಾಗಿದ್ದ ರವಾಗಿದೆ ಅವರು 199500 ಮಹಾರಾಷ್ಟ್ರದ ಜುಹು ಪೊಲೀಸ್ ಠಾಣೆಯಲ್ಲಿ ತಮ್ಮ ಜೀವನ ಆರಂಭಿಸಿದರು. ಅಲ್ಲಿಂದ ಸುದೀರ್ಘ ಮೂರು ದಶಕಗಳ ಕಾಲ ಸಬ್ ಇನ್‌ಸ್ಪೆಕ್ಟ‌ರ್ ಆಗಿ ಸೇವೆ ಸಲ್ಲಿಸಿದ್ದ ಅವರು ಗುರುವಾರ ನಿವೃತ್ತರಾಗಲಿ ದ್ದಾರೆ. ಖಡಕ್ ಅಧಿಕಾರಿಯಾಗಿದ್ದ ಇವರು ಗ್ಯಾಂಗ್‌ಸ್ಟರ್‌ಗಳ ಶೂಟೌಟ್ ಮೂಲಕ ಎನ್‌ಕೌಂಟರ್ ಸ್ಪೆಷಲಿಸ್ಟ್ ಎಂದೇ ಖ್ಯಾತಿ ಗಳಿಸಿದ್ದರು.

87 ಗ್ಯಾಂಗ್‌ಸ್ಟರ್‌ಗಳಿಗೆ ಗುಂಡು:

ದಯಾನಾಯಕ್ ತಮ್ಮ ವೃತ್ತಿ ಜೀವನದಲ್ಲಿ 87 ಗ್ಯಾಂಗ್ ಸ್ಟರ್‌ಗಳನ್ನು ಶೂಟೌಟ್ ಮಾಡಿದ್ದರು. ದಾವೂದ್ ಇಬ್ರಾಹಿಂ, ಅಮರ್ ನಾಯ್ ಛೋಟಾ ರಾಜನ್, ಅರುಣ್ ಗೌಳಿಯರಂತಹ ಪಾತಕಿಗಳ ನಂಟು ಹೊಂದಿದ್ದವರಿಗೆ ಗುಂಡು ಹಾರಿಸಿದ್ದರು.

ಹೈಪ್ರೊಫೈಲ್‌ ಕೇಸ್‌ಗಳ ತನಿಖೆ:

ಮುಂಬೈನಲ್ಲಿಅಪರಾಧ ವಿಭಾಗದ ಯೂನಿಟ್ ನಂ.9 ಮುಖ್ಯಸ್ಥರಾಗಿದ್ದ ಇವರು ಹೈ ಪ್ರೊಫೈಲ್ ಕೇಸ್ ಗಳನ್ನು ನಿಭಾಯಿಸಿದ್ದರು. ಕಳೆದ ವರ್ಷ ಸಲ್ಮಾನ್ ಖಾನ್ ಬಾಂದ್ರಾ ನಿವಾಸದ ಮೇಲೆ ನಡೆದ ಶೂಟೌಟ್, ಸಲ್ಲು ಆಪ್ತ ಎನ್‌ಸಿಪಿ ನಾಯಕ ಬಾಬಾ ಸಿದ್ದಿಕಿ ಹತ್ಯೆ ಪ್ರಕರಣದ ನಾಯಕ್ ವಿರುದ್ಧ ಭ್ರಷ್ಟಾಚಾರದ ಆರೋಪ ಹೊರಿಸಿದ್ದರು, ಈ ಹಿನ್ನೆಲೆ ಎಸಿಬಿಯಿಂದ ಬಂಧನಕ್ಕೊಳಗಾಗಿ ಅಮಾನತಾಗಿದ್ದರು. ಸುಪ್ರೀಂ ಎಲ್ಲಾ ಆರೋಪಗಳನ್ನು ರದ್ದುಗೊಳಿಸಿತ್ತು. 2012ರಲ್ಲಿ ಸೇವೆಗೆ ಮರುಸೇರ್ಪಡೆಗೊಂಡಿದ್ದರು.

ಸಿನಿಮಾವಾಗಿದ್ದ ವೃತ್ತಿ ಬದುಕು: ಎನ್ಟ ಕೌಂಟರ್ ಸ್ಪೆಷಲಿಸ್ಟ್ ಅವರ ಜೀವನಗಾಥೆ ಹಲವು ಸಿನಿಮಾ ಕಥೆಗಳಿಗೆ ಸ್ಫೂರ್ತಿಯಾಗಿತ್ತು. ಬಾಲಿವುಡ್‌ನಲ್ಲಿ ಅಬ್ ತಕ್ ಛಪ್ಪನ್ ಮತ್ತು ಡಿಪಾರ್ಟ್‌ಮೆಂಟ್‌ನಂತಹ ಸಿನಿಮಾ ಬಂದಿತ್ತು. ಕನ್ನಡದಲ್ಲಿ ಎನ್‌ಕೌಂಟರ್‌ದಯಾ ನಾಯಕ್ ಚಿತ್ರ ಬಿಡುಗಡೆಯಾಗಿತ್ತು.

ಆರ್ಥಿಕ ಸಂಕಷ್ಟದಿಂದ ಮುಂಬೈಗೆ:

ಕಾರ್ಕಳದಬಡಕುಟುಂಬದಲ್ಲಿ ಹುಟ್ಟಿದ ದಯಾನಾಯಕ್ 1979ರಲ್ಲಿ ದುಡಿಮೆಗೆಂದು ಮುಂಬೈಗೆ ಸ್ಥಳಾಂತರವಾಗಿದ್ದರು. ಪ್ಲಂಬರ್ ಮತ್ತು ಕ್ಯಾಂಟೀನ್‌ನಲ್ಲಿ ಸಣ್ಣಪುಟ್ಟ ಕೆಲಸ ಆರಂಭಿಸಿ ಓದು ಕೂಡ ಮುಂದುವರೆಸಿದರು. ಪದವಿ ಮುಗಿಸಿ 1995ರಲ್ಲಿ ಮಹಾರಾಷ್ಟ್ರ ಪೊಲೀಸ್‌ ವಿಭಾಗದಲ್ಲಿ ಪೊಲೀಸ್ ಸಬ್‌ಇನ್‌ಸ್ಪೆಕ್ಟರ್ ಹುದ್ದೆಗೆ ಸೇರಿ, ದಕ್ಷತೆಯಿಂದ ಜನಪ್ರಿಯರಾಗಿದ್ದರು.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!