ಮಾಲೆಗಾಂವ್​ ಸ್ಫೋಟ ಪ್ರಕರಣ: ಎಲ್ಲಾ 7 ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

Picture of Savistara

Savistara

Bureau Report

ಮಾಲೆಗಾಂವ್​ ಸ್ಫೋಟ ಪ್ರಕರಣದಲ್ಲಿ ಮಾಜಿ ಸಂಸದೆ ಪ್ರಜ್ಞಾಸಿಂಗ್​ ಠಾಕೂರ್​ ಹಾಗೂ ಲೆಫ್ಟಿನೆಂಟ್​ ಕರ್ನಲ್​ ಪ್ರಸಾದ್ ಪುರೋಹಿತ್​ ಸೇರಿದಂತೆ ಎಲ್ಲಾ ಆರೋಪಿಗಳನ್ನು ಖುಲಾಸೆಗೊಳಿಸಲಾಗಿದೆ.

ಮುಂಬೈ: 2008ರ ಮಾಲೆಗಾಂವ್​ ಸ್ಫೋಟ ಪ್ರಕರಣದ ಎಲ್ಲಾ 7 ಆರೋಪಿಗಳನ್ನು ಖುಲಾಸೆಗೊಳಿಸಿ ವಿಶೇಷ ಎನ್​ಐಎ ಕೋರ್ಟ್​ ತೀರ್ಪು ನೀಡಿದೆ. ಪ್ರಕರಣದಲ್ಲಿ ಮಾಜಿ ಸಂಸದೆ ಪ್ರಜ್ಞಾಸಿಂಗ್​ ಠಾಕೂರ್​ ಹಾಗೂ ಲೆಫ್ಟಿನೆಂಟ್​ ಕರ್ನಲ್​ ಪ್ರಸಾದ್ ಪುರೋಹಿತ್​ ಸೇರಿದಂತೆ ಎಲ್ಲಾ ಆರೋಪಿಗಳು ಖುಲಾಸೆಗೊಂಡಿದ್ದಾರೆ.2008ರ ಸೆಪ್ಟೆಂಬರ್​ 29ರಂದು ಮಹಾರಾಷ್ಟ್ರದ ಸಮುದಾಯ ಸೂಕ್ಷ್ಮ ಪ್ರದೇಶವಾಗಿದ್ದ ಮಾಲೆಗಾಂವ್​ನಲ್ಲಿ ರಂಜಾನ್​ ಮಾಸದಲ್ಲಿ, ನವರಾತ್ರಿ ಮುನ್ನಾನ ಈ ಸ್ಫೋಟ ನಡೆದಿತ್ತು. ಈ ವೇಳೆ ಆರು ಜನರು ಸಾವನ್ನಪ್ಪಿದ್ದು, 100ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.ಈ ಪ್ರಕರಣದ ತೀರ್ಪನ್ನು ಪ್ರಕಟಿಸಿದ ನ್ಯಾಯಾಲಯ, ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ), ಶಸ್ತ್ರಾಸ್ತ್ರ ಕಾಯ್ದೆ ಮತ್ತು ಇತರ ಕಾಯ್ದೆಗಳ ಅಡಿಯಲ್ಲಿ ಆರೋಪಿಗಳನ್ನು ಎಲ್ಲಾ ಆರೋಪಗಳಿಂದ ಖುಲಾಸೆಗೊಳಿಸಿದೆ.ಸ್ಪೋಟದಲ್ಲಿ ಸಾವನ್ನಪ್ಪಿದ ಸಂತ್ರಸ್ತರ ಕುಟುಂಬಗಳಿಗೆ ತಲಾ 2 ಲಕ್ಷ ರೂ ಹಾಗೂ ಗಾಯಾಳುಗಳಿಗೆ 50 ಸಾವಿರ ಪರಿಹಾರ ನೀಡುವಂತೆ ಕೋರ್ಟ್​ ಸೂಚಿಸಿದೆ.

ಭಯೋತ್ಪಾದನೆಗೆ ಯಾವುದೇ ಧರ್ಮವಿಲ್ಲ. ಕಾರಣ, ಯಾವುದೇ ಧರ್ಮವೂ ಹಿಂಸೆಯನ್ನು ಪ್ರತಿಪಾದಿಸುವುದಿಲ್ಲ. ನ್ಯಾಯಾಲಯವು ಕೇವಲ ಗ್ರಹಿಕೆ ಮತ್ತು ನೈತಿಕ ಪುರಾವೆಗಳ ಮೇಲೆ ಯಾರನ್ನೂ ಶಿಕ್ಷೆಗೆ ಒಳಪಡಿಸಲು ಸಾಧ್ಯವಿಲ್ಲ. ಬಲವಾದ ಪುರಾವೆ ಬೇಕು ಎಂದು ಕೋರ್ಟ್​ ತಿಳಿಸಿದೆ.

ತನಿಖೆಯಲ್ಲಿ ಹಲವಾರು ತಾಂತ್ರಿಕ ದೋಷಗಳು ಕಂಡುಬಂದಿದೆ ಎಂದು ನ್ಯಾಯಾಲಯ ತಿಳಿಸಿದ್ದು, ಈ ಆರೋಪಗಳನ್ನು ಸಾಬೀತು ಮಾಡುವಲ್ಲಿ ತನಿಖಾ ಸಂಸ್ಥೆಗಳು ವಿಫಲವಾಗಿವೆ ಎಂದಿದೆ.ಏಪ್ರಿಲ್ 19 ರಂದು ಪ್ರಾಸಿಕ್ಯೂಷನ್ ಮತ್ತು ಪ್ರತಿವಾದಿಗಳ ವಿಚಾರಣೆ ಮತ್ತು ಅಂತಿಮ ವಾದಗಳನ್ನು ಪೂರ್ಣಗೊಳಿಸಿದ ನಂತರ ನ್ಯಾಯಾಲಯವು ತನ್ನ ತೀರ್ಪನ್ನು ಕಾಯ್ದಿರಿಸಿತ್ತು.

ದಶಕಗಳ ಕಾಲ ನಡೆದ ವಿಚಾರಣೆ:

2008ರಲ್ಲಿ ಸಂಭವಿಸಿದ ಈ ಪ್ರಕರಣ ಕುರಿತು ಆರಂಭದಲ್ಲಿ ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳ ತನಿಖೆ ನಡೆಸಿತು. ಮೂರು ವರ್ಷಗಳ ಬಳಿಕ 2011ರಲ್ಲಿ ಪ್ರಕರಣವನ್ನು ಎನ್​ಐಎಗೆ ಹಸ್ತಾಂತರಿಸಲಾಯಿತು. 2016ರಲ್ಲಿ ಎನ್​ಐಎ ಆರೋಪ ಪಟ್ಟಿಯನ್ನು ಸಲ್ಲಿಸಿ, ಸಾಕಷ್ಟು ಪುರಾವೆಗಳಿಲ್ಲ ಎಂದು ಉಲ್ಲೇಖಿಸಿತು.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!