ಕಾರಾಗೃಹ ಎಡಿಜಿಪಿಯಾಗಿ ಬಿ ದಯಾನಂದ್ ನಿಯೋಜನೆ, ಕಾಲ್ತುಳಿತದಲ್ಲಿ ಅಮಾನತಾಗಿದ್ದ ಪೊಲೀಸ್ ಅಧಿಕಾರಿಗಳ ಅಮಾನತು ಆದೇಶ ವಾಪಸ್

Picture of Savistara

Savistara

Bureau Report

ಬೆಂಗಳೂರು: ಹುದ್ದೆಯ ನಿರೀಕ್ಷೆಯಲ್ಲಿದ್ದ ಹಿರಿಯ ಐಪಿಎಸ್ಅಧಿಕಾರಿ ಬಿ.ದಯಾನಂದ ಅವರನ್ನು ಕಾರಾಗೃಹ ಮತ್ತು ಸುಧಾರಣಾ ಸೇವೆಗಳ ಇಲಾಖೆಯ ಹೆಚ್ಚುವರಿ ಮಹಾನಿರ್ದೇಶಕ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.

ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತದಿಂದ 11 ಮಂದಿ ಸಾವಿಗೀಡಾದ ಘಟನೆಯ ಹಿನ್ನೆಲೆಯಲ್ಲಿ ಅಂದಿನ ಬೆಂಗಳೂರು ಪೊಲೀಸ್ ಕಮಿಷನರ್ ಆಗಿದ್ದ ದಯಾನಂದ ಅವರನ್ನು ಅಮಾನತುಗೊಳಿಸಲಾಗಿತ್ತು. ಇತ್ತೀಚೆಗಷ್ಟೇ ಸರ್ಕಾರ ಅವರ ಅಮಾನತು ಆದೇಶವನ್ನು ರದ್ದುಪಡಿಸಿತ್ತು. ಎಡಿಜಿಪಿ ಮಾಲಿನಿ ಕೃಷ್ಣಮೂರ್ತಿ ಅವರ ನಿವೃತ್ತಿಯಿಂದ ಕಾರಾಗೃಹ ಮತ್ತು ಸುಧಾರಣಾ ಸೇವೆಗಳ ಇಲಾಖೆ ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕ ಹುದ್ದೆ ತೆರವಾಗಿತ್ತು.ಕಾಲ್ತುಳಿತ ಪ್ರಕರಣದಲ್ಲಿ ಶೇಖರ್ ಟಿ ತೆಕ್ಕಣ್ಣವರ್ ಕೂಡ ಅಮಾನತು ಆಗಿದ್ದರು. ಈಚೆಗೆ ಅವರ ಅಮಾನತು ರದ್ದಾಗಿದ್ದು, ಅವರನ್ನು ಗುಪ್ತದಳದ ಎಸ್ಪಿ ಹುದ್ದೆ ನೀಡಲಾಗಿದೆ.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!