ಪ್ರಧಾನಿ, ವಿತ್ತಸಚಿವರನ್ನು ಹೊರತುಪಡಿಸಿ, ಉಳಿದೆಲ್ಲರಿಗೂ ಭಾರತ ಜೀವವಿಲ್ಲದ ಆರ್ಥಿಕತೆ ಎಂಬುದು ತಿಳಿದಿದೆ: ರಾಹುಲ್ ಗಾಂಧಿ ವ್ಯಂಗ್ಯ

Picture of Savistara

Savistara

Bureau Report

ಹೊಸದಿಲ್ಲಿ: ಗುರುವಾರ ಕೇಂದ್ರ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಾಯಕ ಹಾಗೂ ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ, ನರೇಂದ್ರ ಮೋದಿಯವರ ಆಡಳಿತದಲ್ಲಿ ಭಾರತದ ಆರ್ಥಿಕತೆಗೆ ಜೀವವಿಲ್ಲ ಎಂದು ವ್ಯಂಗ್ಯವಾಡಿದ್ದಾರೆ.ಸಂಸತ್ ಭವನ ಸಂಕೀರ್ಣದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಪ್ರಧಾನಿ ನರೇಂದ್ರ ಮೋದಿ ಹಾಗೂ ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಹೊರತುಪಡಿಸಿ, ಉಳಿದೆಲ್ಲರಿಗೂ ಭಾರತದ ಆರ್ಥಿಕತೆಗೆ ಜೀವವಿಲ್ಲ ಎಂಬುದು ತಿಳಿದಿದೆ” ಎಂದು ವಾಗ್ದಾಳಿ ನಡೆಸಿದರು.ಬಿಜೆಪಿ ನೇತೃತ್ವದ ಕೇಂದ್ರ ಸರಕಾರವು ಭಾರತದ ಆರ್ಥಿಕತೆ, ರಕ್ಷಣೆ ಹಾಗೂ ವಿದೇಶಾಂಗ ನೀತಿಗಳನ್ನು ನಾಶಗೊಳಿಸಿದೆ ಎಂದು ಅವರು ಆರೋಪಿಸಿದರು.

“ಭಾರತ ಮತ್ತು ರಶ್ಯ ಜೀವವಿಲ್ಲದ ಆರ್ಥಿಕತೆಗಳು” ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಮೂದಲಿಸಿರುವ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಮೇಲಿನಂತೆ ಹೇಳಿಕೆ ನೀಡಿದ್ದಾರೆ.”ಟ್ರಂಪ್ ಅವರು ವಾಸ್ತವವನ್ನು ಹೇಳುತ್ತಿದ್ದಾರೆ. ಸರಕಾರವು ಕೋಟ್ಯಧಿಪತಿ ಉದ್ಯಮಿ ಗೌತಮ್ ಅದಾನಿಗೆ ಲಾಭಮಾಡಿಕೊಡಲು ಭಾರತದ ಆರ್ಥಿಕತೆ ತೆವಳುವಂತೆ ಮಾಡಿದೆ” ಎಂದೂ ಅವರು ದೂರಿದರು.”ಅವರು ಒಬ್ಬರು ಅಥವಾ ಇಬ್ಬರು ಉದ್ಯಮಪತಿಗಳಿಗೆ ಲಾಭಮಾಡಿಕೊಡಲು ದೇಶದ ಆರ್ಥಿಕತೆಗೆ ಹಾನಿಯುಂಟು ಮಾಡಿದ್ದಾರೆ” ಎಂದೂ ಅವರು ಆಪಾದಿಸಿದರು.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!