2025-26ನೇ ಶೈಕ್ಷಣಿಕ ಸಾಲಿಗೆ ಅತಿಥಿ ಉಪನ್ಯಾಸಕ ಅರ್ಜಿ ಆಹ್ವಾನ

Picture of Savistara

Savistara

Bureau Report

2025-26ನೇ ಶೈಕ್ಷಣಿಕ ಸಾಲಿನಲ್ಲಿ ಇಲಾಖಾ ವ್ಯಾಪ್ತಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ (ಸರ್ಕಾರಿ ಸಂಸ್ಕೃತ ಹಾಗೂ ಚಿತ್ರಕಲಾ ಕಾಲೇಜುಗಳೂ ಒಳಗೊಂಡಂತೆ) ಖಾಯಂ ಉಪನ್ಯಾಸಕರಿಗೆ ಕಾರ್ಯಭಾರ ಹಂಚಿಕೆ ಮಾಡಿದ ನಂತರ ಉಳಿಕೆಯಾಗುವ ಬೋಧನಾ ಕಾರ್ಯಭಾರಕ್ಕನುಗುಣವಾಗಿ ಅತಿಥಿ ಉಪನ್ಯಾಸಕರನ್ನು (ಗ್ರಂಥಪಾಲಕರು ಹಾಗೂ ದೈಹಿಕ ಶಿಕ್ಷಣ ಒಳಗೊಂಡಂತೆ) ಆನ್‌ಲೈನ್ ಕೌನ್ಸಿಲಿಂಗ್ ಪ್ರಕ್ರಿಯೆ ಮೂಲಕ ಆಯ್ಕೆ ಮಾಡಿಕೊಳ್ಳುವ ಸಂಬಂಧ ಉಲ್ಲೇಖದನ್ವಯ ಆಯ್ಕೆ ಪ್ರಕ್ರಿಯೆ ವೇಳಾಪಟ್ಟಿಯನ್ನು ಪ್ರಕಟಿಸಲಾಗಿತ್ತು,

ಅದರಂತೆ ಈಗಾಗಲೇ ಅತಿಥಿ ಉಪನ್ಯಾಸಕರ ಸೇವೆಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಅನ್-ಲೈನ್ ಅರ್ಜಿಯನ್ನು Edit ಮಾಡಲು ಹಾಗೂ ಹೊಸದಾಗಿ ಅರ್ಜಿ ಸಲ್ಲಿಸಲು ದಿನಾಂಕ:31.07.2025 ರಿಂದ ದಿನಾಂಕ:03.08.2025 ರವರೆಗೆ ಅವಕಾಶ ಕಲ್ಪಿಸಲಾಗಿದೆ.

ಮುಂದುವರೆದು, ಅತಿಥಿ ಉಪನ್ಯಾಸಕರಾಗಿ ಕರ್ತವ್ಯ ನಿರ್ವಹಿಸಿದ ಅಭ್ಯರ್ಥಿಗಳು ಪ್ರಾಂಶುಪಾಲರಿಂದ ಸೇವಾ ಪ್ರಮಾಣ ಪತ್ರವನ್ನು ಈ ಪ್ರಕಟಣೆ ಹೊರಡಿಸಿದ ದಿನಾಂಕ:31.07.2025 ಕ್ಕೆ ಅನ್ವಯಿಸುವಂತೆ ಪಡೆದು ಅರ್ಜಿಯನ್ನು Edit ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಆನ್-ಲೈನ್ ಮೂಲಕ ಅರ್ಜಿ ಸಲ್ಲಿಸಲು/Edit ಮಾಡಲು ಇಲಾಖೆಯ ಅಂತರ್ಜಾಲ ತಾಣ https://dce.karnataka.gov.in ನ್ನು ಸಂಪರ್ಕಿಸುವುದು. ಉಳಿದಂತೆ ಉಲ್ಲೇಖಿತ ಪ್ರಕಟಣೆಯಲ್ಲಿನ ಅಂಶಗಳು ಯಥಾವತ್ತಾಗಿ ಮುಂದುವರೆಯುತ್ತದೆ. ಎಂದು ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಆಯುಕ್ತರು ತಿಳಿಸಿದ್ದಾರೆ.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!