ಧರ್ಮಸ್ಥಳ ಪ್ರಕರಣ : ಮಾಧ್ಯಮಗಳ ಮೇಲಿನ ನಿರ್ಬಂಧ ತೆರವುಗೊಳಿಸಿದ ಹೈಕೋರ್ಟ್

Picture of Savistara

Savistara

Bureau Report

ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂಳಲಾಗಿದೆ ಎಂಬ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿ.ಹರ್ಷೇಂದ್ರ ಕುಮಾರ್ ಅವರ ಬಗ್ಗೆ ಯಾವುದೇ ಸುದ್ದಿ ಪ್ರಸಾರ/ಪ್ರಕಟ ಮಾಡದಂತೆ ಮಾಧ್ಯಮಗಳನ್ನು ನಿರ್ಬಂಧಿಸಿ ವಿಚಾರಣಾ ನ್ಯಾಯಾಲಯ ಹೊರಡಿಸಿದ್ದ ಏಕಪಕ್ಷೀಯ ಪ್ರತಿಬಂಧಕಾದೇಶವನ್ನು ಹೈಕೋರ್ಟ್‌ ವಜಾಗೊಳಿಸಿದೆ.ಮಾಧ್ಯಮಗಳನ್ನು ನಿರ್ಬಂಧಿಸಿ ವಿಚಾರಣಾ ನ್ಯಾಯಾಲಯ ಹೊರಡಿಸಿದ್ದ ಪ್ರತಿಬಂಧಕಾದೇಶ ಪ್ರಶ್ನಿಸಿ ದಕ್ಷಿಣ ಕನ್ನಡದ ‘ಕುಡ್ಲ ರ‍್ಯಾಂಪೇಜ್‌’ ಯೂಟ್ಯೂಬ್ ಚಾನಲ್‌ನ ಪ್ರಧಾನ ಸಂಪಾದಕ ಅಜಯ್‌ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ, ಅರ್ಜಿಯನ್ನು ಭಾಗಶಃ ಪುರಸ್ಕರಿಸಿದೆ.ಕುಡ್ಲ ರ‍್ಯಾಂಪೇಜ್‌ ಪ್ರಧಾನ ಸಂಪಾದಕ ಅಜಯ್‌ ಸಲ್ಲಿಸಿರುವ ಅರ್ಜಿಯನ್ನು ಭಾಗಶಃ ಪುರಸ್ಕರಿಸಲಾಗಿದೆ. 2025ರ ಜುಲೈ 8ರಂದು ವಿಚಾರಣಾ ನ್ಯಾಯಾಲಯ ಹೊರಡಿಸಿರುವ ಏಕಪಕ್ಷೀಯ ಪ್ರತಿಬಂಧಕಾದೇಶವನ್ನು ವಜಾಗೊಳಿಸಲಾಗಿದೆ. ಮಧ್ಯಂತರ ಅರ್ಜಿಯನ್ನು ಹೊಸದಾಗಿ ಪರಿಗಣಿಸಲು ಪ್ರಕರಣವನ್ನು ಸಕ್ಷಮ ನ್ಯಾಯಾಲಯಕ್ಕೆ ವಾಪಸ್‌ ಕಳುಹಿಸಲಾಗುತ್ತಿದೆ. ವಿಚಾರಣಾ ನ್ಯಾಯಾಲಯವು ಈ ಆದೇಶದಲ್ಲಿ ಮಾಡಿರುವ ಅಂಶಗಳನ್ನು ಗಮನದಲ್ಲಿಟ್ಟುಕೊಳ್ಳಬೇಕು. ಸಕ್ಷಮ ನ್ಯಾಯಾಲಯ ಮಧ್ಯಂತರ ಅರ್ಜಿಯನ್ನು ತುರ್ತಾಗಿ ನಿರ್ಧರಿಸಬೇಕು. ಸಿವಿಲ್‌ ದಾವೆ, ಕ್ರಿಮಿನಲ್‌ ಪ್ರಕ್ರಿಯೆ, ಆರೋಪ, ಪ್ರತ್ಯಾರೋಪದ ಮೇಲೆ ಈ ನ್ಯಾಯಾಲಯವು ಯಾವುದೇ ಅಭಿಪ್ರಾಯ ವ್ಯಕ್ತಪಡಿಸಿಲ್ಲ. ಆದೇಶದಲ್ಲಿ ಪರಿಗಣಿಸಿರುವ ಒಂದು ಅಂಶವನ್ನು ಹೊರತುಪಡಿಸಿ ಪಕ್ಷಕಾರರ ನಡುವೆ ಎಲ್ಲ ವಾದಗಳನ್ನು ಮುಕ್ತವಾಗಿರಿಸಲಾಗಿದೆ ಎಂದು ನ್ಯಾಯಾಲಯ ಆದೇಶಿಸಿದೆ.ಈ ಆದೇಶದಲ್ಲಿ ಉಲ್ಲೇಖಿಸಿರುವ ಅಂಶಗಳ ಹಿನ್ನೆಲೆಯಲ್ಲಿ ಅರ್ಜಿದಾರರು ಮತ್ತು ಇತರ ಎಲ್ಲ ಪಕ್ಷಕಾರರು ಸಕ್ಷಮ ನ್ಯಾಯಾಲಯಕ್ಕೆ ಆದೇಶ ಮಾಡಲು ಎಲ್ಲ ರೀತಿಯ ಸಹಕಾರ ನೀಡಬೇಕು ಎಂದು ನ್ಯಾಯಾಲಯ ನಿರ್ದೇಶಿಸಿದೆ. ವಿಸ್ತೃತ ಆದೇಶ ಪ್ರತಿ ಇನ್ನಷ್ಟೇ ಲಭ್ಯವಾಗಬೇಕಿದೆ.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!