ನಟಿ ರಮ್ಯಾಗೆ ಅಶ್ಲೀಲ ಸಂದೇಶ ರವಾನೆ: ಮೂವರು ಆರೋಪಿಗಳ ಬಂಧನ

Picture of Savistara

Savistara

Bureau Report

ನಟಿ ರಮ್ಯಾಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಸಂದೇಶ ಕಳುಹಿಸಿದ ಪ್ರಕರಣದಲ್ಲಿ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಬೆಂಗಳೂರು: ನಟಿ ರಮ್ಯಾಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಸಂದೇಶ ಕಳುಹಿಸಿದ ಪ್ರಕರಣದಲ್ಲಿ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಕೋಲಾರ ಮತ್ತು ಚಿತ್ರದುರ್ಗ ಮೂಲದ ಮೂವರನ್ನು ಬಂಧಿಸಲಾಗಿದ್ದು, ಇವರು ಅಶ್ಲೀಲ ಕಾಮೆಂಟ್‌ಗಳನ್ನು ಪೋಸ್ಟ್ ಮಾಡಿ ಸವಾಲು ಹಾಕಿದ್ದರು. ಐಪಿ ವಿಳಾಸಗಳ ಆಧಾರದ ಮೇಲೆ ಈ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

ರಮ್ಯಾ ತಮ್ಮ ದೂರಿನಲ್ಲಿ ಒಟ್ಟು 43 ಖಾತೆಗಳನ್ನು ಉಲ್ಲೇಖಿಸಿದ್ದರು. ನಂತರ ಪೊಲೀಸರಿಗೆ ಹೇಳಿಕೆ ನೀಡುವಾಗ ಇನ್ನೂ ಐದು ಖಾತೆಗಳನ್ನು ಸೇರಿಸಿ, ಒಟ್ಟು 48 ಖಾತೆಗಳ ವಿರುದ್ಧ ದೂರು ದಾಖಲಿಸಿದರು.

ಎಫ್‌ಐಆ‌ರ್ ದಾಖಲಾದ ಕೂಡಲೇ ಹೆಚ್ಚಿನ ಖಾತೆಗಳನ್ನು ಡಿಲೀಟ್ ಮಾಡಲಾಗಿತ್ತು. ಆದರೆ, ಪೊಲೀಸರು ಸಂಬಂಧಿತ ಸಾಮಾಜಿಕ ಜಾಲತಾಣ ಸಂಸ್ಥೆಗಳಿಗೆ ಪತ್ರ ಬರೆದು ಐಪಿ ವಿಳಾಸಗಳು ಮತ್ತು ಖಾತೆ ವಿವರಗಳನ್ನು ಒದಗಿಸುವಂತೆ ಕೋರಿದ್ದರು.

ಸಂಸ್ಥೆಗಳು ಡಿಲೀಟ್ ಆದ ಖಾತೆಗಳ ಸಂಪೂರ್ಣ ಮಾಹಿತಿಯನ್ನು ಸಿಸಿಬಿ ಪೊಲೀಸರಿಗೆ ನೀಡಿವೆ. ಅಶ್ಲೀಲ ಕಾಮೆಂಟ್‌ಗಳನ್ನು ಪೋಸ್ಟ್ ಮಾಡಿ ಖಾತೆಗಳನ್ನು ಡಿಲೀಟ್ ಮಾಡಿಕೊಂಡು ನಿರಾತಂಕವಾಗಿದ್ದ ಆರೋಪಿಗಳಿಗೆ ಪೊಲೀಸರು ಕಾನೂನು ಕ್ರಮಕ್ಕೆ ಮುಂದಾಗಿದ್ದಾರೆ.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!