ವಿಧಾನ ಪರಿಷತ್‌ ಸದಸ್ಯ ಕಿಶೋರ್ ಕುಮಾ‌ರ್ ಆಪ್ತ ಕಾರ್ಯದರ್ಶಿಗಳಾಗಿ ಜಯಪ್ರಕಾಶ್‌ ಎಣ್ಣೆಮಜಲು ಹಾಗೂ ಅವಿನಾಶ್ ಬಿ.ಆರ್. ನೇಮಕ

Picture of Savistara

Savistara

Bureau Report

ಪುತ್ತೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್‌ ಸದಸ್ಯರಾದ ಕಿಶೋರ್ ಕುಮಾ‌ರ್ ಪುತ್ತೂರು ಇಬ್ಬರು ಸರ್ಕಾರಿ ಆಪ್ತ ಕಾರ್ಯದರ್ಶಿಗಳನ್ನು ನೇಮಿಸಿದ್ದಾರೆ.

ಜಯಪ್ರಕಾಶ್‌ ಎಣ್ಣೆಮಜಲು ಹಾಗೂ ಅವಿನಾಶ್ ಬಿ.ಆರ್ ಅವರನ್ನು ಕಿಶೋ‌ರ್ ಕುಮಾರ್ ಅವರ ಆಪ್ತ ಕಾರ್ಯದರ್ಶಿಗಳಾಗಿ ನೇಮಕ ಮಾಡಲಾಗಿದೆ.

ಜಯಪ್ರಕಾಶ್‌ ಎಣ್ಣೆಮಜಲು ಅವರು ಸುಳ್ಯ ಮೂಲದವರು.ಇವರು ಮಾಜಿ ಕೇಂದ್ರ ಸಚಿವರಾದ ಡಿ.ವಿ. ಸದಾನಂದ ಗೌಡ ಅವರ ಆಪ್ತ ಸಹಾಯಕರಾಗಿ 15 ವರ್ಷಗಳ ಸೇವೆ ಸಲ್ಲಿಸಿದ ಅನುಭವ ಹೊಂದಿದ್ದಾರೆ. ಸರ್ಕಾರದ ಕಾರ್ಯವಿಧಾನ,ಇಲಾಖೆಗಳ ಮತ್ತು ಕಚೇರಿ ನಿರ್ವಹಣೆಗಳಲ್ಲಿ ಅನುಭವ ಹೊಂದಿರುವ ಇವರು ಬೆಂಗಳೂರಿನಲ್ಲಿ ಲಭ್ಯರಿರುತ್ತಾರೆ.ಅವಿನಾಶ್ ಬಿ.ಆರ್. ಅವರು ಗ್ರಾಮ ಪಂಚಾಯತ್‌ ಮಟ್ಟದಲ್ಲಿ ಪಂಚಾಯತ್‌ ಅಭಿವೃದ್ಧಿ ಅಧಿಕಾರಿಯಾಗಿ ಆಗಿ ಕೆಲಸ ಮಾಡಿದ ಅನುಭವವಿರುವವರು. ಜಾಗೃತಿ, ಅಭಿವೃದ್ಧಿ ಯೋಜನೆಗಳ ಅನುಷ್ಠಾನ ಹಾಗೂ ಸ್ಥಳೀಯ ಆಡಳಿತದ ಕೆಲಸಗಳಲ್ಲಿ ನಿಪುಣರಾಗಿರುವ ಇವರನ್ನು ಮಂಗಳೂರು ಮತ್ತು ಉಡುಪಿ ಪ್ರದೇಶದಲ್ಲಿ ಲಭ್ಯವಿರುವಂತೆ ನೇಮಕ ಮಾಡಲಾಗಿದೆ.ಕಚೇರಿಯಿಂದ ನಿರ್ವಹಿಸಲ್ಪಡುವ ಯಾವುದೇ ಕೆಲಸಗಳಿಗಾಗಿ, ಸಾರ್ವಜನಿಕರು ಹಾಗೂ ಅಧಿಕಾರಿಗಳು ಈ ಇಬ್ಬರನ್ನು ನೇರವಾಗಿ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಜಯಪ್ರಕಾಶ ಎಣ್ಣೆಮಜಲು – 99804 94660 ( ಬೆಂಗಳೂರು )

ಅವಿನಾಶ್ ಬಿ ಆರ್ 97417 60738 ( ದಕ್ಷಿಣ ಕನ್ನಡ ಮತ್ತು ಉಡುಪಿ )

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!