ಸುಹಾಸ್ ಶೆಟ್ಟಿ ಹತ್ಯೆ ಕೇಸ್ : ಮಂಗಳೂರು ಸೇರಿ 14 ಕಡೆ ಎನ್ಐಟಿ ದಾಳಿ | ಸಂಸದರಿಂದ ಅಮಿತ್ ಶಾ ಭೇಟಿ ಬೆನ್ನಲ್ಲೇ ಮಹತ್ವದ ಬೆಳವಣಿಗೆ

Picture of Savistara

Savistara

Bureau Report

ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎಯ ಅಧಿಕಾರಿಗಳು ಶನಿವಾರ ದಕ್ಷಿಣ ಕನ್ನಡ, ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಗಳ ವ್ಯಾಪ್ತಿಯಲ್ಲಿ 18 ಕಡೆ ದಾಳಿ ನಡೆಸಿದ್ದಾರೆ. ದಾಳಿ ವೇಳೆ, 11 ಮೊಬೈಲ್ ಫೋನ್‌ ಗಳು, 13 ಸಿಮ್ ಕಾರ್ಡ್‌ಗಳು, 8 ಮೆಮೊರಿ ಕಾರ್ಡ್‌ಗಳು ಹಾಗೂ ಇನ್ನಿತರ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.ಮಂಗಳೂರು ನಗರ ಪೊಲೀಸರು ಆರಂಭದಲ್ಲಿ ನಡೆಸಿದ ತನಿಖಾ ವರದಿಯನ್ನು ಸುಪರ್ದಿಗೆ ಪಡೆದುಕೊಂಡಿದ್ದಾರೆ. ಬಂಧಿತರಾಗಿರುವ 12 ಆರೋಪಿಗಳ ಮನೆ ಸೇರಿದಂತೆ ಒಟ್ಟು 18 ಕಡೆಗಳಲ್ಲಿ ದಾಳಿ ನಡೆದಿದೆ.ದಕ್ಷಿಣ ಕನ್ನಡ ಜಿಲ್ಲೆಯ ಬಜಪೆ ಠಾಣಾ ವ್ಯಾಪ್ತಿಯಲ್ಲಿ 10 ಕಡೆ ಹಾಗೂ ಸುರತ್ಕಲ್ ನ 4 ಕಡೆ ದಾಳಿ ನಡೆಸಲಾಗಿದೆ. ಘಟನೆ ನಡೆದ ಸಂದರ್ಭ ಮೊಬೈಲ್‌ನಲ್ಲಿ ಚಿತ್ರೀಕರಣ ನಡೆಸಿದ ಕಿನ್ನಿಪದವುನಲ್ಲಿರುವ ವಸತಿ ಸಮುಚ್ಛಯಕ್ಕೆ ಭೇಟಿ ನೀಡಿದ ಅಧಿಕಾರಿಗಳು, ಅಲ್ಲಿ ಪ್ರತ್ಯಕ್ಷದರ್ಶಿಗಳಿಂದ ಮಾಹಿತಿ ಸಂಗ್ರಹಿಸಿದ್ದಾರೆ.ಇದೇ ವೇಳೆ, ಮಂಗಳೂರು ನಗರ ಪೊಲೀಸರು ಆರಂಭದಲ್ಲಿ ನಡೆಸಿದ ತನಿಖಾ ವರದಿಯನ್ನು ತಮ್ಮ ಸುಪರ್ದಿಗೆ ಪಡೆದು ಕೊಂಡಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಕಳಸದಲ್ಲಿ 2 ಕಡೆ ದಾಳಿ ನಡೆದಿದೆ. ಕೋಟೆಹೊಳೆ ಹಾಗೂ ರುದ್ರಪಾದಕ್ಕೆ ಭೇಟಿ ನೀಡಿದ್ದ ಅಧಿಕಾರಿಗಳು 2 ಆರೋಪಿಗಳ ಮನೆಗಳಿಗೆ ಭೇಟಿ ನೀಡಿದ್ದಾರೆ. ಇದೇ ವೇಳೆ, ಹಾಸನದಲ್ಲಿಯೂ 2 ಕಡೆ ದಾಳಿ ನಡೆದಿದ್ದಾಗಿ ವರದಿಯಾಗಿದೆ.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!