ಸಾರಿಗೆ ನೌಕರರ ಮುಷ್ಕರ: ಸಾರಿಗೆ ಬಸ್‌ಗಳ ಸಂಚಾರ ಬಹುತೇಕ ಸ್ತಬ್ಧ

Picture of Savistara

Savistara

Bureau Report

ಬೆಂಗಳೂರು: ವೇತನ ಪರಿಷ್ಕರಣೆ ಸೇರಿದಂತೆ ಬೇರೆ ಬೇರೆಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಸಾರಿಗೆ ಒಕ್ಕೂಟಗಳ ಜಂಟಿ ಕ್ರಿಯಾ ಸಮಿತಿ ಕರೆ ನೀಡಿರುವ ಅನಿರ್ದಿಷ್ಟಾವಧಿ ಮುಷ್ಕರದಿಂದ ಸಾರಿಗೆ ಬಸ್‌ಗಳ ಸಂಚಾರ ಬಹುತೇಕ ಸ್ತಬ್ದ ಸ್ತಬ್ಧಗೊಂಡಿದೆ.

ಇದರಿಂದಗಿ ಸಾರ್ವಜನಿಕರ ಪ್ರಯಾಣಕ್ಕೆ ತೊಂದರೆ ಉಂಟಾಗಿದೆ.ಬಿಎಂಟಿಸಿ, ಕೆಎಸ್‌ಆರ್‌ಟಿಸಿ ಬಸ್‌ಗಳನ್ನೇ ಅವಲಂಬಿಸಿರುವ ಜನರು ಕೆಲಸಗಳಿಗೆ, ಶಾಲೆಗಳಿಗೆ ಕಾಲೇಜುಗಳಿಗೆ ಹೋಗಲು ಪರದಾಡುವಂತಾಗಿದೆ.

ಶಿವಮೊಗ್ಗ, ಬಾಗಲಕೋಟೆ, ಕಲಬುರಗಿ, ಸೇರಿ ರಾಜ್ಯ ಎಲ್ಲಕಡೆಗಳಲ್ಲಿ ಬಸ್ ಸಂಚಾರ ಸ್ಥಗಿತಗೊಂಡಿದ್ದು ಪ್ರಯಾಣಿಕರು ಪರದಾಡುವಂತಾಗಿದೆ.ಸಾರಿಗೆ ನಿಗಮಗಳು ತಮ್ಮದೇ ಆದ ವ್ಯವಸ್ಥೆ ಮಾಡಿಕೊಂಡಿದ್ದು ಸಾರ್ವಜನಿಕರಿಗೆ ತೊಂದರೆಯಾಗದು ಎಂದು ರಾಜ್ಯ ಸರ್ಕಾರ ಹೇಳಿದೆ.

ಶಿವಮೊಗ್ಗ ಜಿಲ್ಲೆಯಲ್ಲಿ ಸಾರಿಗೆ ನೌಕರರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಸಂಸ್ಥೆಯ ಕಾಯಂ ನೌಕರರು ಕರ್ತವ್ಯಕ್ಕೆ ಹಾಜರಾಗದ ಕಾರಣ ಶೇ 60 ರಷ್ಟು ಕೆಎಸ್ ಆರ್ ಟಿಸಿ ಬಸ್ ಗಳು ರಸ್ತೆಗೆ ಇಳಿಯಲಿಲ್ಲ.

ವಿಜಯನಗರ ಜಿಲ್ಲೆಯಲ್ಲಿ ಬಸ್ ಸಂಚಾರಕ್ಕೆ ಧಕ್ಕೆ ಇಲ್ಲ

ಹೊಸಪೇಟೆ ನಗರದಲ್ಲಿ ಹಾಗೂ ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಬೆಳಿಗ್ಗೆಯಿಂದಲೇ ಬಸ್‌ ಸಂಚಾರ ಸಹಜವಾಗಿದೆ. ನಗರದಲ್ಲಿ ಬೆಳಿಗ್ಗೆ 7 ಗಂಟೆ ಸುಮಾರಿಗೆ ಮಳೆ ಅರಂಭವಾಯಿತು, ಹೀಗಾಗಿ ಕೆಲವು ಬಸ್‌ಗಳು ಡಿಪೋದಿಂದ ಬಸ್ ನಿಲ್ದಾಣಕ್ಕೆ ಬರುವುದು ವಿಳಂಬವಾಯಿತು. ಅದು ಬಿಟ್ಟರೆ ಕೂಡ್ಲಿಗಿ, ಹಗರಿಬೊಮ್ಮನಹಳ್ಳಿ, ಹಂಪಿ, ಹುಲಿಗಿ ಮುಂತಾದ ಕಡೆಗಳಿಗೆ ವಿರಳವಾಗಿ ಬಸ್‌ಗಳು ಓಡಾಡಿದವು.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!