ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್‌ಗೆ 40 ದಿನಗಳ ಪೆರೋಲ್

Picture of Savistara

Savistara

Bureau Report

ಚಂಡೀಗಡ: ಅತ್ಯಾಚಾರ ಪ್ರಕರಣದಲ್ಲಿ 20 ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರಿಗೆ 40 ದಿನಗಳ ಪೆರೋಲ್ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.

‘ಫರ್ಲೋ’ ( ದೀರ್ಘಾವಧಿ ಜೈಲು ಶಿಕ್ಷೆಗೆ ಒಳಗಾಗಿರುವವರಿಗೆ ತಾತ್ಕಾಲಿಕ ಬಿಡುಗಡೆ) ಮೇಲೆ ಹರಿಯಾಣದ ರೋಕ್ಟಕ್‌ನ ಸುನಾರಿಯಾ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ.40 ದಿನಗಳ ಪೆರೋಲ್ ಮೇಲೆ ಬಿಡುಗಡೆಯಾಗಲಿರುವ 57 ವರ್ಷದ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರು ಡೇರಾದಲ್ಲಿ ತಂಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.ಸಿರ್ಸಾ ಆಶ್ರಮದಲ್ಲಿ ಇಬ್ಬರು ಮಹಿಳಾ ಅನುಯಾಯಿಗಳ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಗುರ್ಮೀತ್ ಅವರು 20 ವರ್ಷಗಳ ಜೈಲುಶಿಕ್ಷೆಗೆ ಈಡಾಗಿದ್ದರು.

ಜನವರಿಯಲ್ಲಿ ದೆಹಲಿಯ ವಿಧಾನಸಭೆ ಚುನಾವಣೆಗೂ ಮುನ್ನ 30 ದಿನಗಳ ಪೆರೋಲ್ ಪಡೆದಿದ್ದ ಸಿಂಗ್ ಏಪ್ರಿಲ್‌ನಲ್ಲೂ 21 ದಿನಗಳ ಪೆರೋಲ್ ಗಿಟ್ಟಿಸಿಕೊಂಡಿದ್ದರು.ಕಳೆದ ವರ್ಷವೂ ಅಕ್ಟೋಬರ್‌ನಲ್ಲಿ ಹರಿಯಾಣ ಚುನಾವಣೆಗೂ ಮುನ್ನ 30 ದಿನಗಳ ಪೆರೋಲ್ ಮೇಲೆ ಬಿಡುಗಡೆಗೊಂಡಿದ್ದರು.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!