ಭಾರತದ ಮೇಲೆ ಹೆಚ್ಚಿನ ಸುಂಕ ವಿಧಿಸುವುದಾಗಿ ಟ್ರಂಪ್‌ ಬೆದರಿಕೆ:ರಷ್ಯಾ ಖಂಡನೆ

Picture of Savistara

Savistara

Bureau Report

ಮಾಸ್ಕೊ: ರಷ್ಯಾದಿಂದ ತೈಲವನ್ನು ಖರೀದಿಸುತ್ತಿರುವುದಕ್ಕೆ ಭಾರತದ ಮೇಲೆ ಹೆಚ್ಚಿನ ಸುಂಕ ವಿಧಿಸುವ ಅಮೆರಿಕದ ಬೆದರಿಕೆಯನ್ನು ಕ್ರೆಮ್ಲನ್ ಮಂಗಳವಾರ ಟೀಕಿಸಿದೆ.

ರಷ್ಯಾದಿಂದ ತೈಲ ಖರೀದಿ ಮುಂದುವರಿಸಿದರೆ ಭಾರತದ ಮೇಲಿನ ಸುಂಕ ಹೆಚ್ಚಿಸಲಾಗುವುದು ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಸೋಮವಾರ ಎಚ್ಚರಿಸಿದ್ದರು. ಅಮೆರಿಕದ ಈ ನಿಲುವು ‘ನ್ಯಾಯಸಮ್ಮತವಲ್ಲದ್ದು’ ಎನ್ನುವ ಮೂಲಕ ಭಾರತ ತಿರುಗೇಟು ನೀಡಿತ್ತು.ರಷ್ಯಾ ಕೂಡಾ ಅದೇ ಧಾಟಿಯಲ್ಲಿ ಪ್ರತಿಕ್ರಿಯಿಸಿ ಭಾರತದ ಬೆಂಬಲಕ್ಕೆ ನಿಂತಿದೆ. ‘ಸಾರ್ವಭೌಮ ರಾಷ್ಟ್ರಗಳು ತಮ್ಮದೇ ಆದ ವ್ಯಾಪಾರ ಪಾಲುದಾರರನ್ನು ಆಯ್ಕೆ ಮಾಡುವ ಹಕ್ಕನ್ನು ಹೊಂದಿವೆ’ ಎಂದು ಕ್ರೆಮ್ಲನ್ ವಕ್ತಾರ ಡಿಮಿಟ್ರಿ ಪೆಸ್ಕೋವ್ ವರದಿಗಾರರಿಗೆ ತಿಳಿಸಿದ್ದಾರೆ.ರಷ್ಯಾದೊಂದಿಗೆ ವ್ಯಾಪಾರ ಸಂಬಂಧ ಕಡಿತಗೊಳಿಸುವಂತೆ ಒತ್ತಾಯಿಸುವುದು ‘ನ್ಯಾಯಸಮ್ಮತವಲ್ಲ’ ಎಂದು ಅಮೆರಿಕದ ಹೆಸರು ಹೇಳದೆಯೇ ಅವರು ಟೀಕಿಸಿದ್ದಾರೆ.

2022ರ ಫೆಬ್ರುವರಿಯಲ್ಲಿ ಉಕ್ರೇನ್ ಜತೆಗಿನ ಯುದ್ಧ ಆರಂಭವಾದಾಗಿನಿಂದ ಯೂರೋಪಿನ ದೇಶಗಳು ರಷ್ಯಾದ ರಫ್ತು ಗಳಿಕೆಗೆ ತಡೆಯೊಡ್ಡಲು ಪ್ರಯತ್ನಿಸುತ್ತಿವೆ. ಆದರೆ, ಭಾರತ ಮತ್ತು ಚೀನಾ ಸೇರಿದಂತೆ ಯೂರೋಪಿನ ಹೊರಗಿನ ದೇಶಗಳಿಗೆ ತೈಲ ರಫ್ತು ಮಾಡುವ ಮೂಲಕ ರಷ್ಯಾ, ಬಹುಕೋಟಿ ಡಾಲರ್ ಹಣದ ಹರಿವು ಮುಂದುವರಿಯುವುದನ್ನು ಖಚಿತಪಡಿಸಿಕೊಂಡಿದೆ.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!