ಸದ್ಯದಲ್ಲಿ ಬರಲಿದೆ ಕಾಞಂಗಾಡ್ – ಸುಳ್ಯ ಅಂತಾರಾಜ್ಯ ರಸ್ತೆಯಲ್ಲಿ ನೂತನ ಕೇರಳ ಬಸ್

Picture of Savistara

Savistara

Bureau Report

ಸುಳ್ಯ: ಕೇರಳದ ಕಾಞಂಗಾಡ್‌ನಿಂದ ಗಡಿ ಪ್ರದೇಶವಾದ ಬಂದಡ್ಕ ಮೂಲಕ ಸುಳ್ಯಕ್ಕೆ ಕೇರಳ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಮಂಜೂರುಗೊಂಡಿದೆ. ಕಾಞಂಗಾಡ್ ಡಿಪೋದಿಂದ ಪೆರಿಯ, ಮೂನಾಂಕಡವ್- ಕುಂಡಕುಯಿ- ಬಂದಡ್ಕ- ಕನ್ನಡಿತೋಡ್-ಕೋಲ್ಟಾರ್ ಮೂಲಕ ಸುಳ್ಯಕ್ಕೆ ಬಸ್ ಸೇವೆಯನ್ನು ಪ್ರಾರಂಭಿಸಲು

ಕೆಎಸ್‌ಆರ್‌ಟಿಸಿ ಅನುಮತಿ ನೀಡಿದೆ ಎಂದು ತಿಳಿದು ಬಂದಿದೆ. ಕಾಞಂಗಾಡ್‌ನಿಂದ ಸುಳ್ಯಕ್ಕೆ ಬಸ್ ಬೆಳಿಗ್ಗೆ 6.40ಕ್ಕೆ ಹೊರಟು 9.20 ಕ್ಕೆ ಸುಳ್ಯ ತಲುಪುತ್ತದೆ, ಸುಳ್ಯದಿಂದ 9.30ಕ್ಕೆ ಹೊರಟು11.45ಕ್ಕೆ ಕಾಞಂಗಾಡ್ ತಲುಪುತ್ತದೆ, ಕಾಂಞಂಗಾಡ್ ಮಧ್ಯಾಹ್ನ 12.10 ಹೊರಟು, 2.25ಕ್ಕೆ ಸುಳ್ಯ ತಲುಪುತ್ತದೆ, ಸುಳ್ಯ ದಿಂದ 2.35 ಹೊರಟು 4.50ಕ್ಕೆ ಕಾಞಂಗಾಡ್ ತಲುಪಲಿದೆ.ಪ್ರಸ್ತುತ ವೇಳಾಪಟ್ಟಿಯ ಪ್ರಕಾರ ಸುಳ್ಯಕ್ಕೆ 3 ಸರ್ವೀಸ್ ಇದ್ದು, ಬಸ್ ಸಂಜೆ 5 ಗಂಟೆಗೆ ಬಸ್‌ ರಾಷ್ಟ್ರೀಯ ಹೆದ್ದಾರಿಯ ಮೂಲಕ ಕಾಸರಗೋಡು ತೆರಳಿ ರಾತ್ರಿ 8 ಗಂಟೆಗೆ ಕಾಞಂಗಾಡ್ ಡಿಪೋ ತಲುಪಲಿದೆ ಎಂದು ತಿಳಿದು ಬಂದಿದೆ.

ಈ ರಸ್ತೆಯಲ್ಲಿ ಬಸ್‌ ಸೇವೆ ಆರಂಭಿಸಬೇಕು ಎಂಬುದು ದಶಕಗಳ ಬೇಡಿಕೆ.

ಗಡಿ ರಸ್ತೆಯ ಮೂಲಕ ಬಸ್ ಸೇವೆ ಆರಂಭಿಸಬೇಕು ಎಂದು ಬಂದಡ್ಕದಲ್ಲಿ ನಡೆದ ಅರೆಭಾಷೆ ಗಡಿನಾಡ ಉತ್ಸವ ಸಂದರ್ಭದಲ್ಲಿ ಉದುಮ ಶಾಸಕ ಸಿ.ಎಚ್.ಕುಂಞಂಬು ಅವರಿಗೆ ಸಾರ್ವಜನಿಕರ ಪರವಾಗಿ ಮನವಿ ಸಲ್ಲಿಸಲಾಗಿತ್ತು. ಶಾಸಕ ಸಿ.ಎಚ್. ಕುಂಞಂಬು ಅವರು ಸಾರಿಗೆ ಸಚಿವರನ್ನು ಭೇಟಿ ಮಾಡಿ ಬಸ್‌ ಆರಂಭಿಸುವ ಬೇಡಿಕೆ ಸಲ್ಲಿಸಿ, ಪ್ರಯತ್ನ ನಡೆಸಿದ ಹಿನ್ನಲೆಯಲ್ಲಿ ಇದೀಗ ಬಸ್ ರೂಟ್ ಮಂಜೂರಾಗಿದೆ.ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಸದಾನಂದ ಮಾವಜಿ ಹಾಗೂ ಬಂದಡ್ಕದ ಗಡಿನಾಡ ಕನ್ನಡಿಗರ ಸಂಘದ ಅಧ್ಯಕ್ಷ ಪುರುಷೋತ್ತಮ ಬೊಡ್ಡನಕೊಚ್ಚಿ ಅವರ ನೇತೃತ್ವದಲ್ಲಿ ಅಂತಾರಾಜ್ಯ ರಸ್ತೆಯಲ್ಲಿ ಬಸ್ ಸೇವೆ ಆರಂಭಿಸುವಂತೆ ಉದುಮ ಶಾಸಕ ಸಿ.ಎಚ್.ಕುಂಞಂಬು ಹಾಗೂ ಕರ್ನಾಟಕ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರಿಗೆ ಮನವಿ ಸಲ್ಲಿಸಿದ್ದರು.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!