ಅಸ್ಥಿಪಂಜರ ಶೋಧದ ನಡುವೆ ಧರ್ಮಸ್ಥಳ ದಲ್ಲಿ ಯೂಟ್ಯೂಬರ್ ಗಳ ಮೇಲೆ ಹಲ್ಲೆ:ಲಘು ಲಾಠಿ ಪ್ರಹಾರ

Picture of Savistara

Savistara

Bureau Report

ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದಲ್ಲಿ ಉದ್ವಿಗ್ನ ಸ್ಥಿತಿ ಉಂಟಾಗಿದೆ. ಪ್ರತಿಷ್ಠಿತ ಕುಟುಂಬದ ವಿರುದ್ಧ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಯುಟ್ಯೂಬರ್ ಗಳ ಮೇಲೆ ಹಲ್ಲೆ ನಡೆಸಲಾಗಿದೆ. ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ ಎನ್ನಲಾಗಿದೆ.

ಮೂವರು ಯೂಟ್ಯೂಬರ್ ಗಳ ಮೇಲೆ ಹಲ್ಲೆ ನಡೆಸಲಾಗಿದೆ. ಅವರ ಕ್ಯಾಮರಾಗಳನ್ನು ಹಾಳು ಮಾಡಲಾಗಿದೆ. ನೇತ್ರಾವತಿಯ ಪಾಂಗಳ ಎಂಬಲ್ಲಿ ಹಲ್ಲೆ ನಡೆಸಲಾಗಿದ್ದು, ಉದ್ವಿಗ್ನ ಸ್ಥಿತಿ ಉಂಟಾಗಿದೆ. ಯುವಕರನ್ನು ಚದುರಿಸಲು ಪೊಲೀಸರು ಹರಸಾಹಸ ನಡೆಸಿದ್ದಾರೆಹಲ್ಲೆಯನ್ನು ಖಂಡಿಸಿ ಪಾಂಗಳ ಕ್ರಾಸ್ ಬಳಿ ಜನ ಗುಂಪುಗೂಡಿದ್ದು, ಸ್ಥಳದಲ್ಲಿ ಕೈಮೀರಿದ ಪರಿಸ್ಥಿತಿ ಉಂಟಾಗಿದ್ದರಿಂದ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ.ಹಲ್ಲೆಗೊಳಗಾದ ಯೂಟ್ಯೂಬ‌ರ್ ವೊಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರತಿಷ್ಠಿತ ಕುಟುಂಬದ ವಿರುದ್ಧ ಅಪಪ್ರಚಾರ ಮಾಡಲಾಗುತ್ತಿದೆ ಎಂದು ಯೂಟ್ಯೂಬರ್ ಗಳ ಮೇಲೆ ಹಲ್ಲೆ ಮಾಡಲಾಗಿದೆ. ಇದರಿಂದಾಗಿ ಹಲ್ಲೆ ನಡೆಸಿರುವುದನ್ನು ವಿರೋಧಿಸಿ ಯೂಟ್ಯೂಬರ್ ಗಳ ಪರ ಯುವಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎರಡೂ ಕಡೆಯ ಯುವಕರ ನಡುವೆ ಕೈ ಕೈ ಮಿಲಾವಣಿ ಹಂತ ತಲುಪಿದ್ದರಿಂದ ಪರಿಸ್ಥಿತಿ ತಿಳಿಗೊಳಿಸಲು ಪೊಲೀಸರು ಹರಸಾಹಸ ನಡೆಸಿ ಗುಂಪು ಚದುರಿಸಿದ್ದಾರೆ. ಸ್ಥಳಕ್ಕೆ ಭಾರೀ ಸಂಖ್ಯೆಯ ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!