ಗಿರೀಶ್ ಮಟ್ಟಣನವ‌ರ್, ಮಹೇಶ್‌ ಶೆಟ್ಟಿ ತಿಮರೋಡಿ, ಸಮೀ‌ರ್ ವಿರುದ್ಧ ಎಫ್‌ಐಆ‌ರ್

Picture of Savistara

Savistara

Bureau Report

ಮಂಗಳೂರು: ಖಾಸಗಿ ವಾಹಿನಿಯ ಪತ್ರಕರ್ತನ ಮೇಲೆ ಹಲ್ಲೆ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಗಿರೀಶ್ ಮಟ್ಟಣನವ‌ರ್, ಮಹೇಶ್ ಶೆಟ್ಟಿ ತಿಮರೋಡಿ, ಯೂಟ್ಯೂಬರ್ ಸಮೀ‌ರ್ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಎಫ್‌ಐಆ‌ರ್ ದಾಖಲಾಗಿದೆ.ವರದಿಗಾರ ಹರೀಶ್ ಅವರ ದೂರಿನಂತೆ ಎಫ್‌ಐಆರ್ ದಾಖಲಾಗಿದೆ. ಧರ್ಮಸ್ಥಳದಲ್ಲಿ ಯೂಟ್ಯೂಬರ್‌ಗಳ ಮೇಲೆ ಬುಧವಾರ ಹಲ್ಲೆ ನಡೆದ ವಿಚಾರ ತಿಳಿದ ಹಿನ್ನೆಲೆಯಲ್ಲಿ ನಾನು ಹಲ್ಲೆಗೆ ಒಳಗಾದವರನ್ನು ಮಾತನಾಡಿಸಲು ಉಜಿರೆಯ ಬೆನಕ ಆಸ್ಪತ್ರೆಗೆ ಬಂದಿದ್ದೆ. ಈ ಸಂದರ್ಭದಲ್ಲಿ ಗಿರೀಶ್ ಮಟ್ಟಣವರ್ ಬಳಿ ಬೈಟ್‌ ಕೊಡುವಂತೆ ಕೇಳಿದಾಗ ನನ್ನ ಮೇಲೆ ಬೈಯಲು ಆರಂಭಿಸಿದರು.

ಈ ವೇಳೆ ಅಲ್ಲೇ ಇದ್ದ ಮಹೇಶ್ ಶೆಟ್ಟಿ ತಿಮರೋಡಿ ಮತ್ತು ಅವರ ಗ್ಯಾಂಗ್‌ ಸದಸ್ಯರು ಹಲ್ಲೆ ಮಾಡಿದ್ದಾರೆ. ಈ ವೇಳೆ ಕೀಳು ಭಾಷೆಯಿಂದ ನಿಂದಿಸಿದ್ದಾರೆ. ಈ ಸಂದರ್ಭದಲ್ಲಿ ಸ್ಥಳಕ್ಕೆ ಬಂದ ಸಮೀರ್ ಬೆದರಿಕೆ ಹಾಕಿದ್ದಾರೆ. ವಿಷಯ ತಿಳಿದು ಆಸ್ಪತ್ರೆಗೆ ಆಗಮಿಸಿದ ಪೊಲೀಸರು ನನ್ನನ್ನು ರಕ್ಷಣೆ ಮಾಡಿ ಒಳಗೆ ಕೂರಿಸಿದ್ದರು. ಈ ವೇಳೆ ಸ್ಥಳಕ್ಕೆ ಬಂದ ಜಯಂತ್ ಟಿ ನನ್ನ ವಿಡಿಯೋ ಮಾಡಿ ಹಲ್ಲೆ ಮಾಡಿದ್ದಾರೆ.ನನ್ನ ಮೇಲೆ ಹಲ್ಲೆ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡುತ್ತೇನೆ ಎಂದು ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.ಎಫ್‌ಐಆರ್‌ನಲ್ಲಿ ಗಿರೀಶ್ ಮಟ್ಟಣನವರ್ (ಎ1), ಮಹೇಶ್ ಶೆಟ್ಟಿ ತಿಮರೋಡಿ(ಎ2) ಯೂಟ್ಯೂಬರ್ ಸಮೀರ್(ಎ3), ಜಯಂತ್(ಎ4) ಇತರರ ಹೆಸರನ್ನು ಉಲ್ಲೇಖಿಸಲಾಗಿದೆ.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!