ಉಕ್ರೇನ್ ರಷ್ಯಾ ಯುದ್ಧ: ಮುಂದಿನ ವಾರ ಟ್ರಂಪ್‌-ಪುಟಿನ್ ಭೇಟಿ ಸಾಧ್ಯತೆ

Picture of Savistara

Savistara

Bureau Report

ವಾಷಿಂಗ್ಟನ್: ರಷ್ಯಾ-ಉಕ್ರೇನ್ ಯುದ್ಧ ಕೊನೆಗೊಳಿಸುವ ನಿಟ್ಟಿನಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಮುಂದಿನ ವಾರ ರಷ್ಯಾ ಅಧ್ಯಕ್ಷ ಬ್ಲಾಡಿಮಿರ್ ಪುಟಿನ್‌ ಅವರನ್ನು ಖುದ್ದಾಗಿ ಭೇಟಿಯಾಗಬಹುದು ಎಂದು ಶ್ವೇತಭವನದ ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ.

ಆದರೆ, ಸಭೆಯ ದಿನಾಂಕ ಮತ್ತು ಸ್ಥಳವನ್ನು ಇನ್ನು ನಿಗದಿಪಡಿಸಿಲ್ಲ ಎಂದು ಅವರು ಹೇಳಿದ್ದಾರೆ.ಟ್ರಂಪ್‌ ಅವರ ವಿಶೇಷ ರಾಯಭಾರಿ ಸ್ಟೀವ್ ವಿಟ್ಕಾಫ್ ಬುಧವಾರ ಮಾಸ್ಕೋದಲ್ಲಿ ಪುಟಿನ್ ಅವರನ್ನು ಭೇಟಿಯಾದ ಕೆಲವೇ ಗಂಟೆಗಳ ನಂತರ ಉಭಯ ನಾಯಕರ ಸಂಭಾವ್ಯ ಭೇಟಿಯ ವಿಷಯ ಹೊರಬಿದ್ದಿದೆ.ವಿಟ್ಕಾಫ್-ಪುಟಿನ್ ಭೇಟಿಯ ಕುರಿತು ಟ್ರುತ್ ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ನೀಡಿದ್ದ ಟ್ರಂಪ್, ರಷ್ಯಾ ಅಧ್ಯಕ್ಷರ ಜೊತೆ ಸಕಾರಾತ್ಮಕ ಮಾತುಕತೆ ನಡೆದಿದೆ ಎಂದು ತಿಳಿಸಿದ್ದರು.

‘ಈ ಸಭೆಯ ಬಗ್ಗೆ ಯುರೋಪ್‌ನಲ್ಲಿರುವ ಅಮೆರಿಕದ ಮಿತ್ರರಾಷ್ಟ್ರಗಳಿಗೆ ಮಾಹಿತಿ ನೀಡಿದ್ದೇನೆ. ರಷ್ಯಾ-ಉಕ್ರೇನ್ ಯುದ್ಧವನ್ನು ಮುಂದಿನ ದಿನಗಳಲ್ಲಿ ಅಥವಾ ವಾರಗಳಲ್ಲಿ ಕೊನೆಗೊಳಿಸಲು ಅವರು ಕೆಲಸ ಮಾಡುತ್ತಾರೆ’ ಎಂದು ತಿಳಿಸಿದ್ದಾರೆ.’ಟ್ರಂಪ್‌ ಅವರನ್ನು ಭೇಟಿಯಾಗುವ ಬಯಕೆಯನ್ನು ರಷ್ಯಾ ಅಧ್ಯಕ್ಷರು ವ್ಯಕ್ತಪಡಿಸಿದ್ದಾರೆ. ಉಕ್ರೇನ್‌ ಅಧ್ಯಕ್ಷ ಝುಲೆನ್‌ಸ್ಕಿ ಮತ್ತು ರಷ್ಯಾ ಅಧ್ಯಕ್ಷ ಪುಟಿನ್‌ ಅವರ ಜೊತೆ ಮಾತುಕತೆ ನಡೆಸಲು ಟ್ರಂಪ್‌ ಅವರು ಮುಕ್ತರಾಗಿದ್ದಾರೆ’ ಎಂದು ಶ್ವೇತಭವನದ ಪತ್ರಿಕಾ ಕಾರ್ಯದರ್ಶಿ ಕ್ಯಾರೋಲಿನ್ ಲೀವಿಟ್ ಹೇಳಿದ್ದಾರೆ.ಉಕ್ರೇನ್ ಜತೆಗೆ ಕದನ ವಿರಾಮ ಘೋಷಿಸುವಂತೆ ರಷ್ಯಾಕ್ಕೆ ಟ್ರಂಪ್‌ ನೀಡಿದ 50 ದಿನಗಳ ಗಡುವು ಶುಕ್ರವಾರ ಕೊನೆಗೊಳ್ಳಲಿದೆ.ಏತನ್ಮಧ್ಯೆ, ಯುದ್ಧ ನಿಲ್ಲಿಸದಿದ್ದರೆ ಇನ್ನಷ್ಟು ಆರ್ಥಿಕ ನಿರ್ಬಂಧಗಳನ್ನು ಹೇರಲಾಗುವುದು, ರಷ್ಯಾದಿಂದ ತೈಲ ಖರೀದಿಸುತ್ತಿರುವ ದೇಶಗಳ ಮೇಲೆ ಹೆಚ್ಚುವರಿ ಸುಂಕ ವಿಧಿಸಲಾಗುವುದು ಎಂದು ಟ್ರಂಪ್ ಎಚ್ಚರಿಸಿದ್ದರು. ಈ ಎಲ್ಲಾ ಕಾರಣಗಳಿಂದ ಉಭಯ ನಾಯಕರ ಭೇಟಿ ಮಹತ್ವ ಪಡೆದುಕೊಂಡಿದೆ.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!