ಇಂದಿನಿಂದ ಆ.13ರವರೆಗೆ ಸುರತ್ಕಲ್ – ನಂತೂರು ನಡುವಿನ ಹೆದ್ದಾರಿ ದುರಸ್ತಿ ಕಾಮಗಾರಿ | ವಾಹನ ಸವಾರರು, ಸಾರ್ವಜನಿಕರ ಸಹಕಾರ ಕೋರಿದ ಹೆದ್ದಾರಿ ಪ್ರಾಧಿಕಾರ

Picture of Savistara

Savistara

Bureau Report

ಮಂಗಳೂರು: ರಾ.ಹೆ 66 ರಲ್ಲಿ ಸುರತ್ಕಲ್ – ನಂತೂರು ನಡುವಿನ ಹೆದ್ದಾರಿ ದುರಸ್ತಿ ಕಾಮಗಾರಿ ಇಂದಿನಿಂದ(ಆ.7)ಆಗಸ್ಟ್ 13ರವರೆಗೆ ಕೈಗೆತ್ತಿಕೊಳ್ಳುವುದರಿಂದ ವಾಹನ ಸವಾರರು ಹಾಗೂ ಸಾರ್ವಜನಿಕರು ಸಹಕರಿಸಬೇಕು ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಪ್ರಕಟಣೆಯಲ್ಲಿ ತಿಳಿಸಿದೆ. ಹೆದ್ದಾರಿ ರಿಪೇರಿ ಸಂಬಂಧ ಗುಂಡಿಗಳನ್ನು ಮುಚ್ಚುವುದು, ತೇಪೆ ಕಾರ್ಯ ಚರಂಡಿ ಸ್ವಚ್ಛಗೊಳಿಸುವುದು ಮುಂತಾದ ಕೆಲಸ ನಡೆಯಲಿದೆ. ಈ ರಿಪೇರಿ ಕೆಲಸವು ವಾಹನಗಳ ದಟ್ಟಣೆ ಇಲ್ಲದ ಸಮಯ( ಪೀಕ್ ಅವರ್ಸ್ ಹೊರತುಪಡಿಸಿ) ಪ್ರತಿದಿನ ಬೆಳಗ್ಗೆ 11ರಿಂದ ಮಧ್ಯಾಹ್ನ 3:00 ರವರೆಗೆ ಹಾಗೂ ರಾತ್ರಿ ವೇಳೆ ನಡೆಸಲಾಗುತ್ತದೆ. ಈ ಅವಧಿಯಲ್ಲಿ ಸಂಚಾರ ದಟ್ಟಣೆ ಸಮಸ್ಯೆ ಮತ್ತು ತಾತ್ಕಾಲಿಕ ಮಾರ್ಗ ಬದಲಿಸುವ ಸಾಧ್ಯತೆ ಇದೆ. ಸಂಚಾರ ಸುಗಮ ನಿರ್ವಹಣೆಗೆ ಸಹಾಯವಾಗುವಂತೆ ಸ್ಥಳದಲ್ಲಿ ಸಂಚಾರ ಸಿಬ್ಬಂದಿಯನ್ನು ನಿಯೋಜಿಸಲಾಗುವುದು. ಈ ವೇಳೆ ವಾಹನಗಳ ಸುಗಮ ಸಂಚಾರಕ್ಕೆ ಅಡ್ಡಿ ಎದುರಾಗುವ ಸಾಧ್ಯತೆ ಇದ್ದು ವಾಹನ ಸವಾರರು ಹಾಗೂ ಸಾರ್ವಜನಿಕರು ಸಹಕರಿಸಬೇಕು.ಅಲ್ಲದೇ ಕಾಮಗಾರಿ ಸ್ಥಳದಲ್ಲಿ ಸುರಕ್ಷತಾ ಸೂಚನೆಗಳನ್ನು ಅನುಸರಿಸಿ ಎಚ್ಚರಿಕೆಯಿಂದ ವಾಹನ ಚಲಾಯಿಸಬೇಕು ಎಂದು ಎನ್ ಎಚ್ ಐ ಎ ಯೋಜನಾ ನಿರ್ದೇಶಕ ಅಬ್ದುಲ್ ಜಾವೇದ್ ಅಜ್ಮಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!