ಧರ್ಮಸ್ಥಳ ಪ್ರಕರಣ: ಮಾಧ್ಯಮ ನಿಷೇಧ ರದ್ದು: ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ ಹರ್ಷೇಂದ್ರ ಕುಮಾರ್ ಡಿ.

Picture of Savistara

Savistara

Bureau Report

ಬೆಂಗಳೂರಿನ ಸಿವಿಲ್ ನ್ಯಾಯಾಲಯವು ಧರ್ಮಸ್ಥಳದಲ್ಲಿ ಕೊಲೆಯಾದ ಶವಗಳನ್ನು ಹೂತಿರುವ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳಿಗೆ ವಿಧಿಸಿದ್ದ ಏಕಪಕ್ಷೀಯ ಪ್ರತಿಬಂಧಕಾದೇಶವನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದ್ದನ್ನು ಪ್ರಶ್ನಿಸಿ, ಶ್ರೀ ಮಂಜುನಾಥೇಶ್ವರ ದೇವಸ್ಥಾನದ ಕಾರ್ಯದರ್ಶಿ ಹಾಗೂ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಅವರ ಸಹೋದರ ಹರ್ಷೇಂದ್ರ ಕುಮಾರ್ ಡಿ. ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಧರ್ಮಸ್ಥಳ: ಬೆಂಗಳೂರಿನ ಸಿವಿಲ್ ನ್ಯಾಯಾಲಯವು ಧರ್ಮಸ್ಥಳದಲ್ಲಿ ಕೊಲೆಯಾದ ಶವಗಳನ್ನು ಹೂತಿರುವ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳಿಗೆ ವಿಧಿಸಿದ್ದ ಏಕಪಕ್ಷೀಯ ಪ್ರತಿಬಂಧಕಾದೇಶವನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದ್ದನ್ನು ಪ್ರಶ್ನಿಸಿ, ಶ್ರೀ ಮಂಜುನಾಥೇಶ್ವರ ದೇವಸ್ಥಾನದ ಕಾರ್ಯದರ್ಶಿ ಹಾಗೂ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅವರ ಸಹೋದರ ಹರ್ಷೇಂದ್ರ ಕುಮಾರ್ ಡಿ. ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಗುರುವಾರ ಬೆಳಿಗ್ಗೆ ಸಿಜೆಐ ಬಿ.ಆರ್. ಗವಾಯಿ, ನ್ಯಾಯಮೂರ್ತಿಗಳಾದ ಸತೀಶ್ ಚಂದ್ರ ಶರ್ಮ ಮತ್ತು ವಿನೋದ್ ಚಂದ್ರನ್ ಅವರನ್ನೊಳಗೊಂಡ ಪೀಠದೆದುರು ಈ ಪ್ರಕರಣವನ್ನು ಪ್ರಸ್ತಾಪಿಸಲಾಯಿತು. “ಧರ್ಮಸ್ಥಳ ದೇವಸ್ಥಾನದ ವಿರುದ್ಧ ಸುಮಾರು 8,000 ಯೂಟ್ಯೂಬ್ ಚಾನೆಲ್‌ಗಳು ಅವಹೇಳನಕಾರಿ ವಿಷಯವನ್ನು ಪ್ರಸಾರ ಮಾಡುತ್ತಿವೆ” ಎಂದು ಹರ್ಷೇಂದ್ರ ಅವರ ಪರ ವಕೀಲರು ವಾದಿಸಿದರು. ಈ ಪ್ರಕರಣವನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಿಚಾರಣೆಗೆ ತೆಗೆದುಕೊಳ್ಳುವ ಸಾಧ್ಯತೆಯಿದೆ. ಧರ್ಮಸ್ಥಳದಲ್ಲಿ 1995ರಿಂದ 2014ರವರೆಗೆ ಕೊಲೆ ಮತ್ತು ಅತ್ಯಾಚಾರಕ್ಕೆ ಒಳಗಾದ ಅನೇಕ ಶವಗಳನ್ನು ಹೂತಿರುವುದಾಗಿ ಮಾಜಿ ಸ್ವಚ್ಛತಾ ಕಾರ್ಮಿಕನೊಬ್ಬ ಹೇಳಿಕೆ ನೀಡಿದ ಬಳಿಕ, ಮಾಧ್ಯಮಗಳು ಈ ಬಗ್ಗೆ ವ್ಯಾಪಕ ವರದಿಗಳನ್ನು ಪ್ರಕಟಿಸಿದ್ದವು. ಇದರ ಪರಿಣಾಮವಾಗಿ, ಹರ್ಷೇಂದ್ರ ಕುಮಾರ್ ಅವರು 8,842 ಲಿಂಕ್‌ಗಳನ್ನು (4,140 ಯೂಟ್ಯೂಬ್ ವಿಡಿಯೋಗಳು, 932 ಫೇಸ್‌ಬುಕ್ ಪೋಸ್ಟ್‌ಗಳು, 3,584 ಇನ್‌ಸ್ಟಾಗ್ರಾಮ್ ಪೋಸ್ಟ್‌ಗಳು, 108 ಸುದ್ದಿ ಲೇಖನಗಳು, 37 ರೆಡ್ಡಿಟ್ ಪೋಸ್ಟ್‌ಗಳು, 41 ಟ್ವಿಟ್‌ಗಳು) ನಿರ್ಬಂಧಿಸಲು ಕೋರಿ ಬೆಂಗಳೂರಿನ ಹೆಚ್ಚುವರಿ ನಗರ ಸಿವಿಲ್ ಮತ್ತು ಸತ್ರ ನ್ಯಾಯಾಲಯದಲ್ಲಿ ದಾವೆ ಹೂಡಿದ್ದರು.

ನ್ಯಾಯಾಧೀಶ ವಿಜಯ ಕುಮಾರ್ ರೈ ಅವರು ಜುಲೈ 18, 2025ರಂದು ಏಕಪಕ್ಷೀಯ ತಡೆಯಾಜ್ಞೆ ನೀಡಿ, ಆಗಸ್ಟ್ 5ರವರೆಗೆ ಈ ಪ್ರಕರಣಕ್ಕೆ ಸಂಬಂಧಿಸಿದ ಯಾವುದೇ ವರದಿಯನ್ನು ಪ್ರಕಟಿಸದಂತೆ ಮಾಧ್ಯಮಗಳಿಗೆ ಸಂಪೂರ್ಣ ನಿಷೇಧ ವಿಧಿಸಿದ್ದರು. ಇದನ್ನು ಪ್ರಶ್ನಿಸಿ, ಯೂಟ್ಯೂಬ್ ಚಾನೆಲ್ ‘ಕುಡ್ಲ ರ್ಯಾಂಪೇಜ್’ ಕರ್ನಾಟಕ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿತ್ತು. ಆಗಸ್ಟ್ 1ರಂದು ಹೈ ಕೋರ್ಟ್, ಕುಡ್ಲ ಯಾಂಪೇಜ್ ಮೇಲಿನ ತಡೆಯಾಜ್ಞೆಯನ್ನು ತೆಗೆದುಹಾಕಿತು. ಆದರೆ ಇತರ ಮಾಧ್ಯಮಗಳಿಗೆ ವಿಧಿಸಲಾದ ನಿಷೇಧ ಜಾರಿಯಲ್ಲಿತ್ತು.

ಈ ಸಂದರ್ಭದಲ್ಲಿ, ಪತ್ರಕರ್ತ ನವೀನ್ ಸೂರಿಂಜೆ, ಸಾಮಾಜಿಕ ಹೋರಾಟಗಾರರಾದ ಮುನೀರ್ ಕಾಟಿಪಳ್ಳ ಮತ್ತು ಬೈರಪ್ಪ ಹರೀಶ್ ಕುಮಾರ್ ಅವರು ಜುಲೈ 24ರಂದು ಈ ತಡೆಯಾಜ್ಞೆಯನ್ನು ಪ್ರಶ್ನಿಸಿದ್ದರು.ನ್ಯಾಯಾಧೀಶ ವಿಜಯ ಕುಮಾರ್ ರೈ ಅವರು 1995-1998ರ ಅವಧಿಯಲ್ಲಿ ಧರ್ಮಸ್ಥಳ ಮಂಜುನಾಥೇಶ್ವರ ಟ್ರಸ್ಟ್‌ನಿಂದ ನಿರ್ವಹಿಸಲ್ಪಡುವ ಮಂಗಳೂರಿನ ಎಸ್‌ಡಿಎಂ ಕಾನೂನು ಕಾಲೇಜಿನಲ್ಲಿ ವಿದ್ಯಾರ್ಥಿಯಾಗಿದ್ದರಿಂದ, ತಾವು ಈ ಪ್ರಕರಣವನ್ನು ವಿಚಾರಣೆಗೆ ತೆಗೆದುಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿ, ಪ್ರಕರಣವನ್ನು ಬೇರೆ ನ್ಯಾಯಾಲಯಕ್ಕೆ ವರ್ಗಾಯಿಸುವಂತೆ ಕೋರಿದ್ದರು.ಬುಧವಾರ (ಆಗಸ್ಟ್ 6), ಬೆಂಗಳೂರಿನ 16ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶೆ ಅನಿತಾ ಎಂ. ಅವರು, ಧರ್ಮಸ್ಥಳ ದೇವಸ್ಥಾನದ ಆಡಳಿತ ಮಂಡಳಿಯು ಸಲ್ಲಿಸಿದ್ದ ಏಕಪಕ್ಷೀಯ ತಡೆಯಾಜ್ಞೆಯ ವಿಸ್ತರಣೆಯ ಅರ್ಜಿಯನ್ನು ವಜಾಗೊಳಿಸಿದರು. ಈ ಹಿನ್ನೆಲೆಯಲ್ಲಿ, ಹರ್ಷೇಂದ್ರ ಕುಮಾರ್ ಡಿ. ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ.

[t4b-ticker]
error: Content is protected !!