ಜಾಲತಾಣದಲ್ಲಿ ಅತಿರೇಕದ ಹೇಳಿಕೆ : ಗಿರೀಶ್ ಮಟ್ಟೆಣ್ಣನವ‌ರ್, ಮಹೇಶ್ ತಿಮರೋಡಿ, ಪುನೀತ್ ಕೆರೆಹಳ್ಳಿ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಕೇಸು ದಾಖಲು

Picture of Savistara

Savistara

Bureau Report

ಸೌಜನ್ಯಾ ಪರ ಹೋರಾಟಗಾರರಾದ ಗಿರೀಶ್ ಮಟ್ಟೆಣ್ಣನವರ್‌ ಮತ್ತು ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಫೇಸ್ಟುಕ್ ಇನ್ನಿತರ ಜಾಲತಾಣದಲ್ಲಿ ಜನರನ್ನು ಧರ್ಮಸ್ಥಳ ವಿರುದ್ಧ ಎತ್ತಿಕಟ್ಟುತ್ತಿರುವ ಬಗ್ಗೆ ದೂರು ದಾಖಲಾಗಿದೆ.

ಬೆಳ್ತಂಗಡಿ, ಆ.7 : ಸೌಜನ್ಯಾ ಪರ ಹೋರಾಟಗಾರರಾದ ಗಿರೀಶ್ಮಟ್ಟೆಣ್ಣನವ‌ರ್ ಮತ್ತು ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಫೇಸ್ಟುಕ್ ಇನ್ನಿತರ ಜಾಲತಾಣದಲ್ಲಿ ಜನರನ್ನು ಧರ್ಮಸ್ಥಳ ವಿರುದ್ಧ ಎತ್ತಿಕಟ್ಟುತ್ತಿರುವ ಬಗ್ಗೆ ದೂರು ದಾಖಲಾಗಿದೆ.ಬೆಳ್ತಂಗಡಿ ನಿವಾಸಿ ಚರಣ್ ಶೆಟ್ಟಿ (32) ಎಂಬವರ ದೂರಿನಂತೆ. ಆರೋಪಿತ ಗಿರೀಶ್ ಮಟ್ಟಣ್ಣವ‌ರ್ ಅವರು ಅಪರಾಧಿಕ ಕೃತ್ಯಗಳನ್ನು ನಡೆಸಲು ದುಪ್ರೇರಣೆ ಆಗುವಂತೆ, ಅಶ್ಲೀಲವಾಗಿ ಹಾಗೂ ಸಾರ್ವಜನಿಕರಿಗೆ ಕಿರಿ ಕಿರಿಯುಂಟಾಗುವ ರೀತಿಯಲ್ಲಿ ಮಾತನಾಡಿರುವ ವೀಡಿಯೋವನ್ನು ಪೇಸ್ಟುಕ್ ನಲ್ಲಿ ಪ್ರಸಾರ ಮಾಡಿರುವುದು ಕಂಡುಬಂದಿರುತ್ತದೆ ಎಂಬುದಾಗಿ ನೀಡಿದ ದೂರಿನ ಮೇರೆಗೆ, ಬೆಳ್ತಂಗಡಿ ಠಾಣಾ ಅಕ್ರ: 78/2025 ಕಲಂ:57. 296 ಜೊತೆಗೆ 190 ಬಿಎನ್‌ಎಸ್ -2023 ರಂತೆ ಪ್ರಕರಣ ದಾಖಲಾಗಿದೆ.ಮತ್ತೊಂದು ಪ್ರಕರಣದಲ್ಲಿ ದೂರುದಾರ ಚರಣ್ ಶೆಟ್ಟಿ ಅವರು ತನ್ನ ಮೊಬೈಲ್ ನಲ್ಲಿ ಸಾಮಾಜಿಕ ಜಾಲತಾಣದಲ್ಲಿ ಸಂದೇಶಗಳನ್ನು ನೋಡುತ್ತಿದ್ದಾಗ, ಆರೋಪಿತ ಮಹೇಶ್ ತಿಮರೋಡಿ ಅವರು ಸಾಮಾಜಿಕ ಜಾಲತಾಣವಾದ ಯೂಟ್ಯೂಬ್ ನಲ್ಲಿ ಪ್ರಾದೇಶಿಕವಾಗಿ ಜನರ ನಡುವೆ ವೈಮನಸ್ಸು ಉಂಟಾಗುವಂತಹ ಹಾಗು ಸಾರ್ವಜನಿಕರಲ್ಲಿ ಅಪಾಯದ ಭೀತಿಯನ್ನುಂಟಾಗುವಂತೆ ಹೇಳಿಕೆಗಳನ್ನು ಪ್ರಚಾರ ಮಾಡಿರುವುದು ಕಂಡುಬಂದಿರುತ್ತದೆ ಎಂಬುದಾಗಿ ನೀಡಿದ ದೂರಿನ ಮೇರೆಗೆ ಬೆಳ್ತಂಗಡಿ ಠಾಣೆಯ 79/2025 ಕಲಂ: 353(2) ಬಿಎನ್‌ಎಸ್ -2023ರಂತೆ ಪ್ರಕರಣ ದಾಖಲಾಗಿರುತ್ತದೆ.

ಇನ್ನೊಂದು ಪ್ರಕರಣದಲ್ಲಿ ಬೆಳ್ತಂಗಡಿ ಕಸಬಾ ಗ್ರಾಮದ ನಿವಾಸಿ ಜೆರೋಮ್ ಬರ್ಬೋಝಾ (37) ಎಂಬವರ ದೂರಿನಂತೆ, ತನ್ನ ಮೊಬೈಲ್ ನಲ್ಲಿ ಸಾಮಾಜಿಕ ಜಾಲತಾಣವಾದ ಫೇಸ್ ಬುಕ್ ನಲ್ಲಿ ಸಂದೇಶಗಳನ್ನು ಪರಿಶೀಲಿಸುತ್ತಿರುವಾಗ, ಆರೋಪಿತ ಪುನೀತ್ ಕೆರೆಹಳ್ಳಿ ಎಂಬವರು ಯೂಟ್ಯೂಬ್ ನಲ್ಲಿ ಅಶ್ಲೀಲವಾಗಿ ಮಾತನಾಡಿರುವ ವೀಡಿಯೋವನ್ನು ಪ್ರಸಾರ ಮಾಡಿರುವುದು ಕಂಡುಬಂದಿರುತ್ತದೆ ಎಂಬುದಾಗಿ ನೀಡಿದ ದೂರಿನ ಮೇರೆಗೆ ಬೆಳ್ತಂಗಡಿ ಠಾಣಾ ಅ. ಕ್ರ :80/2025, 00: 296 BNS 2023 ರಂತೆ ಪ್ರಕರಣ ದಾಖಲಾಗಿದೆ.

[t4b-ticker]
error: Content is protected !!