ಉತ್ತರಾಖಂಡ: ಮಾಜಿ ಅಗ್ನಿವೀರರಿಗೆ ಸರ್ಕಾರಿ ಹುದ್ದೆಗಳಲ್ಲಿ ಶೇ 10ರಷ್ಟು ಮೀಸಲಾತಿ

Picture of Savistara

Savistara

Bureau Report

ಡೆಹ್ರಾಡೂನ್: ಸಶಸ್ತ್ರ ಪಡೆಗಳಲ್ಲಿ ನಾಲ್ಕು ವರ್ಷಗಳ ಕಾಲ ಸೇವೆ ಸಲ್ಲಿಸಿದ ಮಾಜಿ ‘ಅಗ್ನಿವೀರ’ರಿಗೆ ಸರ್ಕಾರಿ ಹುದ್ದೆಗಳಲ್ಲಿ ಶೇ 10ರಷ್ಟು ಮೀಸಲಾತಿ ಕಲ್ಪಿಸಲು ಉತ್ತರಾಖಂಡ ಸಚಿವ ಸಂಪುಟ ಅನುಮೋದನೆ ನೀಡಿದೆ.

ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ.ಈ ಮೀಸಲಾತಿ ಸೌಲಭ್ಯವು ರಾಜ್ಯ ಸರ್ಕಾರದ ಗ್ರೂಪ್ ‘ಸಿ’ ಅಡಿಯಲ್ಲಿ ಬರುವ ಹುದ್ದೆಗಳಿಗೆ ಸಂಬಂಧಿಸಿದ್ದಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.’ಅಗ್ನಿವೀರರ ನೇಮಕಕ್ಕೆ ಅನುವು ಮಾಡಿಕೊಡುವುದಕ್ಕಾಗಿ ನೇಮಕಾತಿ ನಿಯಮಗಳಿಗೆ ತಿದ್ದುಪಡಿ ತರಲಾಗಿದೆ. ನೇಮಕಾತಿ ವೇಳೆ, ವಯೋಮಿತಿ ಸಡಿಲಿಕೆ ಹಾಗೂ ದೈಹಿಕ ಸಾಮರ್ಥ್ಯ ಪರೀಕ್ಷೆಯಿಂದ ವಿನಾಯಿತಿಯಂತಹ ಪ್ರಯೋಜನಗಳನ್ನು ಸಹ ಅಗ್ನಿವೀರರಿಗೆ ನೀಡಲಾಗುತ್ತದೆ’ ಎಂದೂ ಮೂಲಗಳು ಹೇಳಿವೆ.

ಸಶಸ್ತ್ರ ಪಡೆಗಳಲ್ಲಿ ನಾಲ್ಕು ವರ್ಷಗಳ ಕಾಲ ಸೇವೆ ಪೂರೈಸುವ ‘ಅಗ್ನಿವೀರ’ರಿಗೆ ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆಗಳು (ಸಿಎಪಿಎಫ್) ಹಾಗೂ ಅಸ್ಸಾಂ ರೈಫಲ್ಸ್‌ನಲ್ಲಿ ಶೇ 10ರಷ್ಟು ಮೀಸಲಾತಿಯನ್ನು ಕಲ್ಪಿಸಲಾಗುವುದು ಎಂದು ಕೇಂದ್ರ ಸರ್ಕಾರ 2024ರ ಜುಲೈಯಲ್ಲಿ ಘೋಷಿಸಿತ್ತು.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!