ಶರಣ್ ಪಂಪವೆಲ್‌, ಪುನೀತ್ ಕೆರೆಹಳ್ಳಿಗೆ ಹಾಸನ ಜಿಲ್ಲಾ ಪ್ರವೇಶಕ್ಕೆ ನಿಷೇಧ: ಜಿಲ್ಲಾಧಿಕಾರಿ ಆದೇಶ

Picture of Savistara

Savistara

Bureau Report

ಹಾಸನ: ಸಕಲೇಶಪುರ ಪಟ್ಟಣದಲ್ಲಿ ಸಂಘ ಪರಿವಾರಇಂದು(ಆ.14) ಸಂಜೆ ಆಯೋಜಿಸಿರುವ ಪಂಜಿನ ಮೆರವಣಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಬೇಕಿದ್ದ ಹಿಂದುತ್ವ ಸಂಘಟನೆಯ ಮುಖಂಡರಾದ ಶರಣ್ ಪಂಪವೆಲ್ ಹಾಗೂ ಪುನೀತ್ ಕೆರೆಹಳ್ಳಿಗೆ ಹಾಸನ ಜಿಲ್ಲಾ ಪ್ರವೇಶಕ್ಕೆ ನಿರ್ಬಂಧ ವಿಧಿಸಿ ಜಿಲ್ಲಾಧಿಕಾರಿ ಕೆ.ಎಸ್‌.ಲತಾಕುಮಾರಿ ಆದೇಶ ಹೊರಡಿಸಿದ್ದಾರೆ.ಆ.15ರ ಬೆಳಗ್ಗೆ 8ರವರೆಗೆ ಈ ಇಬ್ಬರಿಗೆ ಹಾಸನ ಜಿಲ್ಲಾ ಪ್ರವೇಶವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗ ದಳ ವತಿಯಿಂದ ಇಂದು ಸಂಜೆ ಸಕಲೇಶಪುರ ಪಟ್ಟಣದಲ್ಲಿ ಪಂಜಿನ ಮೆರವಣಿಗೆ ಆಯೋಜಿಸಲಾಗಿದೆ.ಶರಣ್ ಪಂಪವೆಲ್ ಹಾಗೂ ಪುನೀತ್ ಕೆರೆಹಳ್ಳಿ ಪ್ರಚೋದನಕಾರಿ ಭಾಷಣ ಮಾಡುವ ಸಾಧ್ಯತೆಯ ಹಿನ್ನಲೆಯಲ್ಲಿ ಕಾನೂನು-ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಇವರಿಬ್ಬರ ಜಿಲ್ಲಾ ಪ್ರವೇಶಕ್ಕೆ ನಿಷೇಧ ಹೇರುವಂತೆ ಹಾಸನ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಮುಹಮ್ಮದ್ ಸುಜೀತಾ ಜಿಲ್ಲಾಧಿಕಾರಿಗೆ ಶಿಫಾರಸು ಮಾಡಿದ್ದರು.

[t4b-ticker]
error: Content is protected !!