ಈ ದೀಪಾವಳಿಗೆ ದೇಶದ ಜನತೆಗೆ ದೊಡ್ಡ ಗಿಫ್ಟ್ – ಪ್ರಧಾನಿ ಮೋದಿ

Picture of Savistara

Savistara

Bureau Report

ಈ ದೀಪಾವಳಿಗೆ ದೇಶದ ಜನತೆಗೆ ದೊಡ್ಡ ಉಡುಗೊರೆ ನೀಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಘೋಷಣೆ ಮಾಡಿದ್ದಾರೆ.

79ನೇ ಸ್ವಾತಂತ್ರ್ಯ ದಿನದ ಅಂಗವಾಗಿ ಕೆಂಪುಕೋಟೆಯಲ್ಲಿ ದೇಶವನ್ನುದ್ದೇಶಿಸಿ ಮಾತನಾಡಿದ ಅವರು, ಈ ವರ್ಷ ಜಿಎಸ್‌ಟಿ ಸುಧಾರಣೆಗಳನ್ನು ಜಾರಿಗೆ ತರುವುದಾಗಿ ತಿಳಿಸಿದರು.ಈ ದೀಪಾವಳಿಯ ವೇಳೆಗೆ ಸಾಮಾನ್ಯ ಜನರಿಗೆ ಜೀವನವನ್ನು ಸುಲಭಗೊಳಿಸುವ ಹಾಗೂ ನಮ್ಮ ಆರ್ಥಿಕತೆಯನ್ನು ಬಲಪಡಿಸುವ ಹೊಸ ಸರಳೀಕೃತ ಜಿಎಸ್‌ಟಿ ರಚನೆಯನ್ನು ನೀವು ಕಾಣುತ್ತೀರಿ. ಈ ಬದಲಾವಣೆಗಳು ಪಾರದರ್ಶಕತೆಯನ್ನು ಹೆಚ್ಚಿಸುತ್ತದೆ ಎಂದು ತಿಳಿಸಿದ್ದಾರೆ. ಕಳೆದ 8 ವರ್ಷಗಳಲ್ಲಿ ನಾವು ಜಿಎಸ್‌ಟಿ ಮೂಲಕ ತೆರಿಗೆ ವ್ಯವಸ್ಥೆಯನ್ನು ಸರಳಗೊಳಿಸಿದ್ದೇವೆ. ಎಂಟು ವರ್ಷಗಳ ಬಳಿಕ, ನಾವು ಅದನ್ನು ಪರಿಶೀಲಿಸುವುದು ಅಗತ್ಯವಾಗಿದೆ. ಅದನ್ನು ನಾವು ಪರಿಶೀಲಿಸಿದ್ದೇವೆ. ರಾಜ್ಯಗಳೊಂದಿಗೆ ಮಾತನಾಡಿದ್ದೇವೆ ಎಂದು ಹೇಳಿದ್ದಾರೆ.

News Updates

ಸುಳ್ಯ : ಮುರುಳ್ಯ ರಕ್ತೇಶ್ವರಿ ದೇಗುಲ ವಿವಾದಕ್ಕೆ ಬಿಗ್ ಟ್ವಿಸ್ಟ್ – ವಕ್ಫ್ ಆದೇಶ ವಿರುದ್ಧ ಸಿಡಿದೆದ್ದ ಹಿಂದೂ ಸಮಾಜ | ಮುರುಳ್ಯದಲ್ಲಿ ಹಿಂದೂ ಹಿತರಕ್ಷಣಾ ವೇದಿಕೆಯಿಂದ ಬೃಹತ್ ಪ್ರತಿಭಟನೆ | ದ.ಕ. ಸಂಸದ ಕ್ಯಾ. ಚೌಟ, ಶಾಸಕಿ ಭಾಗೀರಥಿ ಮುರುಳ್ಯ ಸೇರಿದಂತೆ ಸಾವಿರಾರು ಮಂದಿ ಭಾಗಿ

[t4b-ticker]
error: Content is protected !!