ಸತತ 12ನೇ ಸ್ವಾತಂತ್ರೋತ್ಸವದ ಭಾಷಣ:ಇಂದಿರಾ ದಾಖಲೆ ಮುರಿದ ಮೋದಿ

Picture of Savistara

Savistara

Bureau Report

ರಾಷ್ಟ್ರ ರಾಜಧಾನಿಯಲ್ಲಿರುವ ಕೆಂಪುಕೋಟೆ ಬಳಿ ಸತತ 12ನೇ ಸಲ ಸ್ವಾತಂತ್ರೋತ್ಸವದಂದು ಧ್ವಜಾರೋಹಣ ನೆರವೇರಿಸಿ, ದೇಶವನ್ನುದ್ದೇಶಿಸಿ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ, ಮಾಜಿ ಪಿಎಂ, ದಿವಂಗತ ಇಂದಿರಾ ಗಾಂಧಿ ಅವರ ದಾಖಲೆಯನ್ನು ಮುರಿದಿದ್ದಾರೆ.ಇದರೊಂದಿಗೆ, ಸತತವಾಗಿ ಹೆಚ್ಚು ಸಲ ಸ್ವಾತಂತ್ರೋತ್ಸವದಂದು ದೇಶವನ್ನುದ್ದೇಶಿಸಿ ಭಾಷಣ ಮಾಡಿದ ಪ್ರಧಾನಿಗಳ ಸಾಲಿನಲ್ಲಿ ಜವಾಹರಲಾಲ್ ನೆಹರೂ ನಂತರದ ಸ್ಥಾನಕ್ಕೆ ಏರಿದ್ದಾರೆ.ಇಂದಿರಾ ಅವರು, 1966ರ ಜನವರಿಯಿಂದ 1977ರ ಮಾರ್ಚ್‌ ವರೆಗೆ ಹಾಗೂ 1980ರ ಜನವರಿಯಿಂದ 1984ರ ಅಕ್ಟೋಬರ್‌ವರೆಗೆ ಅಧಿಕಾರದಲ್ಲಿದ್ದರು. ಅವರು ಪ್ರಧಾನಿಯಾಗಿ ಒಟ್ಟು 16 ಬಾರಿ ಹಾಗೂ ಸತತವಾಗಿ 11 ಸಲ ಆಗಸ್ಟ್ 15ರಂದು ಧ್ವಜಾರೋಹಣ ಭಾಷಣ ಮಾಡಿದ್ದರು.

[t4b-ticker]
error: Content is protected !!