ಶಾಸಕ ಸತೀಶ ಸೈಲ್‌ ಮನೆಯಲ್ಲಿ ಸಿಕ್ಕಿದ್ದು ಕೋಟಿ ನಗದು, ಕೆಜಿಗಟ್ಟಲೆ ಚಿನ್ನ: ಇ.ಡಿ

Picture of Savistara

Savistara

Bureau Report

ಕಾರವಾರ: ಶಾಸಕ ಸತೀಶ ಸೈಲ್ ಮನೆ ಮೇಲೆ ಎರಡು ದಿನಗಳ ಹಿಂದೆ ದಾಳಿ ನಡೆಸಿದ್ದ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಕೋಟ್ಯಂತರ ನಗದು, ಕೆಜಿಗಟ್ಟಲೆ ಬಂಗಾರ ವಶಕ್ಕೆ ಪಡೆದಿದ್ದಾರೆ.

‘ಬೇಲೆಕೇರಿ ಬಂದರಿನಿಂದ ಕಬ್ಬಿಣದ ಅದಿರು ಕಳ್ಳ ಸಾಗಾಣಿಕೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆದ ಹಣಕಾಸು ವಹಿವಾಟು ಮಾಹಿತಿ ಆಧರಿಸಿ ಕಾರವಾರ ಶಾಸಕ ಸತೀಶ ಸೈಲ್ ಅವರ ನಿವಾಸ, ಈ ಪ್ರಕರಣದಲ್ಲಿ ಭಾಗಿಯಾದ ಇನ್ನಿತರರ ಕಚೇರಿ ನಿವಾಸಗಳಲ್ಲಿ ಪರಿಶೀಲನೆ ನಡೆಸಲಾಗಿತ್ತು.

ಕಾರವಾರ, ದೆಹಲಿ, ಗೋವಾ, ಮುಂಬೈನ ವಿವಿಧೆಡೆ ಪರಿಶೀಲನೆಯನ್ನು ಇ.ಡಿಯ ಬೆಂಗಳೂರು ವಿಭಾಗದ ತಂಡ ಕೈಗೊಂಡಿತ್ತು’ ಎಂದು ಜಾರಿ ನಿರ್ದೇಶನಾಲಯ ತನ್ನ ‘ಎಕ್ಸ್’ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದೆ.’ಪರಿಶೀಲನೆ ನಡೆಸಿದ ವೇಳೆ ₹1.68 ಕೋಟಿ ನಗದು, 6.75 ಕೆ.ಜಿ ತೂಕದಷ್ಟು ಬಂಗಾರದ ಆಭರಣ ಹಾಗೂ ಚಿನ್ನದ ಬಿಸ್ಕತ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಪ್ರಕರಣದಲ್ಲಿ ಭಾಗಿಯಾದವರ ಬ್ಯಾಂಕ್ ಖಾತೆಯಲ್ಲಿ ಅಂದಾಜು ₹14.13 ಕೋಟಿ ಮೊತ್ತವನ್ನು ತಡೆಹಿಡಿಯಲಾಗಿದೆ’ ಎಂದು ತಿಳಿಸಿದೆ.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!