ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ : ಎಸ್.ಐ.ಟಿ ತನಿಖೆ ಹೆಸರಿನಲ್ಲಿ ಶ್ರೀ ಕ್ಷೇತ್ರದ ವಿರುದ್ಧ ವ್ಯವಸ್ಥಿತ ಪಿತೂರಿ: ವಿಜಯೇಂದ್ರ

Picture of Savistara

Savistara

Bureau Report

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಎಸ್‌ಐಟಿ ನಡೆಸುತ್ತಿರುವ ತನಿಖೆಯನ್ನು ಶೀಘ್ರ ಮುಗಿಸಬೇಕು. ಸತ್ಯಾಸತ್ಯತೆ ಬಹಿರಂಗ ಪಡಿಸಿ. ಗೊಂದಲಗಳಿಗೆ ಅತಿ ಶೀಘ್ರವೇ ತೆರೆ ಬೀಳಬೇಕು ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.

ಅವರು ಆ.17ರಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ, ಶ್ರೀ ಮಂಜುನಾಥ ಸ್ವಾಮಿ ದರ್ಶನ ಪಡೆದು ವಿಶೇಷ ಪ್ರಾರ್ಥನೆ ಸಲ್ಲಿಸಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಎಸ್ ಐಟಿ ತನಿಖೆಗೆ ನಮ್ಮ ಸ್ವಾಗತವಿದೆ ಆದರೆ ತನಿಖೆ ಹೆಸರಿನಲ್ಲಿ ಧರ್ಮಸ್ಥಳ ಕ್ಷೇತ್ರದ ಬಗ್ಗೆ ಬಹಳಷ್ಟು ಅಪಪ್ರಚಾರ ಮಾಡುತ್ತಿದ್ದಾರೆ. ಕ್ಷೇತ್ರದ ವಿರುದ್ಧ ವ್ಯವಸ್ಥಿತ ಪಿತೂರಿ ನಡೆಸಲಾಗಿದೆ. ಇವುಗಳನ್ನು ತಡೆಗಟ್ಟ ಬೇಕು ಎಲ್ಲ ಗೊಂದಲಗಳಿಗೆ ಶೀಘ್ರ ತೆರೆ ಎಳೆಯಬೇಕು, ಸರ್ಕಾರ ತಕ್ಷಣ ಇದಕ್ಕೆ ಸ್ಪಂದಿಸಬೇಕು ಎಂದರು.

ಬಳಿಕ ಅವರು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

ಈ ಸಂದರ್ಭದಲ್ಲಿ ರಾಜ್ಯ ಮಟ್ಟದ ನಾಯಕರು, ಸಂಸದರು ಹಾಗೂ ಶಾಸಕರಗಳು ಇದ್ದರು. ಪ್ರಮುಖರಾದ ಛಲವಾದಿ ನಾರಾಯಣ ಸ್ವಾಮಿ ಸಿ . ಟಿ ರವಿ, ಕ್ಯಾ.ಬೃಜೇಶ್ ಚೌಟ, ಹರೀಶ್ ಪೂಂಜಾ, ಭಾಗೀರಥಿ ಮುರುಳ್ಯ, ಭರತ್‌ ಶೆಟ್ಟಿ, ವೇದವ್ಯಾಸ ಕಾಮತ್‌, ರಾಜೇಶ್ ನಾಯ್ಕ, ಯತ್ಪಾಲ್ ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ಗುರುರಾಜ್ ಗಂಟಿಹೊಳಿ, ಎಸ್.ಆ‌ರ್ ವಿಶ್ವನಾಥ್‌, ಧನಂಜಯ ಸರ್ಜಿ, ಕಿಶೋರ್ ಕುಮಾ‌ರ್ ಬೊಟ್ಯಾಡಿ,ಕಿರಣ್ ಕೊಡ್ಲಿ,ಪ್ರತಾಪ್ ಸಿಂಹ ನಾಯಕ್, ಉಮಾನಾಥ್ ಕೋಟ್ಯಾನವಿಕುಮಾ‌ರ್, ಮೈಸೂರು ಎಂ.ಎಲ್.ಎ ಶ್ರೀ ವಾತ್ಸವ ಅಪಾರ ಸಂಖ್ಯೆಯಲ್ಲಿ ಪಕ್ಷದ ನಾಯಕರು ಉಪಸ್ಥಿತರಿದ್ದರು.ಬೆಂಗಳೂರಿಂದ ಧರ್ಮಸ್ಥಳ ಚಲೋ’ ಅಭಿಯಾನ; ಧರ್ಮಸ್ಥಳ ಕುರಿತು ನಡೆಯುತ್ತಿರುವ ಅಪಪ್ರಚಾರ ಖಂಡಿಸಿ ಯಲಹಂಕ ಕ್ಷೇತ್ರದ ಬಿಜೆಪಿ ಶಾಸಕ ಎಸ್.ಆರ್.ವಿಶ್ವನಾಥ್ ನೇತೃತ್ವದಲ್ಲಿ ಶನಿವಾರ ‘ಧರ್ಮಸ್ಥಳ ಚಲೋ’ ಅಭಿಯಾನ ನಡೆದಿದ್ದು, ಬೆಂಗಳೂರಿನಿಂದ ಸುಮಾರು 400ಕ್ಕೂ ಹೆಚ್ಚು ವಾಹನಗಳಲ್ಲಿ ಸುಮಾರು ಎರಡು ಸಾವಿರ ಭಕ್ತರು ಯಲಹಂಕ ಕ್ಷೇತ್ರದ ಭಕ್ತರೊಂದಿಗೆ ಆಗಮಿಸಿದ್ದರು.ಧರ್ಮಸ್ಥಳ ಮಂಜುನಾಥೇಶ್ವರ ದೇವಸ್ಥಾನ ಮತ್ತು ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ವಿರುದ್ದ ಕೆಲವು ಯೂಟ್ಯೂಬರ್‌ಗಳು ಮತ್ತು ಸಾಮಾಜಿಕ ಮಾಧ್ಯಮ ಪ್ರಭಾವಿಗಳು ನಡೆಸುತ್ತಿರುವ ಪಿತೂರಿ ಖಂಡಿಸಿ ಈ ಬೃಹತ್ ಯಾತ್ರೆ ಕೈಗೊಂಡಿದ್ದರು.

[t4b-ticker]
error: Content is protected !!