ರಾಜ್ಯದ 36 ಸಾವಿರ ದೇಗುಲಗಳ ಇನ್ಮುಂದೆ ಪ್ಲಾಸ್ಟಿಕ್ ಮುಕ್ತ: ರಾಜ್ಯ ಸರಕಾರ ಘೋಷಣೆ

Picture of Savistara

Savistara

Bureau Report

ರಾಜ್ಯದ ಒಟ್ಟು 36 ಸಾವಿರ ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ದೇವಾಲಯಗಳನ್ನು ಪ್ಲಾಸ್ಟಿಕ್ ಮುಕ್ತವನ್ನಾಗಿ ಮಾಡಲು ಅಭಿಯಾನವನ್ನು ರಾಜ್ಯ ಸರಕಾರ ಪ್ರಾರಂಭಿಸಿದೆ .ರಾಜ್ಯದ ಎಲ್ಲ ದೇಗುಲಗಳಲ್ಲಿ ಇನ್ಮುಂದೆ ಪ್ರಸಾದ ವಿತರಣೆಗೆ ಅಥವಾ ಯಾವುದೇ ಉದ್ದೇಶಕ್ಕಾಗಿ ಪ್ಲಾಸ್ಟಿಕ್ ವಸ್ತುಗಳನ್ನು ಬಳಸುವಂತಿಲ್ಲ. ಆಗಸ್ಟ್ 15 ರಿಂದಲೇ ಪ್ಲಾಸ್ಟಿಕ್ ನಿಷೇಧವನ್ನು ಜಾರಿಗೆ ತರಲಾಗಿದ್ದು, ಇಂದು (ಆ. 17) ಅಧಿಕೃತವಾಗಿ ಈ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ.ಧಾರ್ಮಿಕ ದತ್ತಿ ಇಲಾಖೆಯ ನೇತೃತ್ವದಲ್ಲಿ, ಬಸವನಗುಡಿಯ ದೊಡ್ಡಗಣಪತಿ ದೇವಾಲಯದಲ್ಲಿ ನಡೆದ ಜಾಗೃತಿ ಕಾರ್ಯಕ್ರಮದಲ್ಲಿ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಶಾಸಕ ರವಿಸುಬ್ರಮಣ್ಯ ಅವರು ಉಪಸ್ಥಿತರಿದ್ದರು.

ಪ್ಲಾಸ್ಟಿಕ್ ಮುಕ್ತ ದೇವಾಲಯಗಳು:

ರಾಜ್ಯದ 36,000 ಮುಜರಾಯಿ ದೇವಾಲಯಗಳಲ್ಲಿ ಪ್ಲಾಸ್ಟಿಕ್ ಲೋಟ, ಪ್ಲಾಸ್ಟಿಕ್ ಬೌಲ್, ಪ್ಲಾಸ್ಟಿಕ್ ತಟ್ಟೆ ಮತ್ತು ಪ್ಲಾಸ್ಟಿಕ್ ಬ್ಯಾಗ್‌ಗಳಂತಹ ವಸ್ತುಗಳ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಪ್ರಸಾದ ವಿತರಣೆಯಲ್ಲಿ ಬದಲಾವಣೆ:

ಇನ್ಮುಂದೆಪ್ರಸಾದವನ್ನು ಪ್ಲಾಸ್ಟಿಕ್ ತಟ್ಟೆ ಅಥವಾ ಲೋಟದಲ್ಲಿ ನೀಡುವಂತಿಲ್ಲ. ದೇವಾಲಯಗಳು ಪರ್ಯಾಯ ಪರಿಸರ ಸ್ನೇಹಿ ವಸ್ತುಗಳನ್ನು ಬಳಸಬೇಕಿದೆ.

ಪರಿಸರ ಜಾಗೃತಿ:

‘ಪರಿಸರ ಉಳಿಸಿ, ಪರಿಸರ ಬೆಳೆಸಿ’ ಎಂಬ ಧೈಯವಾಕ್ಯದೊಂದಿಗೆ ಈ ಅಭಿಯಾನವನ್ನು ಪ್ರಾರಂಭಿಸಲಾಗಿದೆ. ದೇವಾಲಯಕ್ಕೆ ಭೇಟಿ ನೀಡುವ ಭಕ್ತಾದಿಗಳಲ್ಲಿ ಪ್ಲಾಸ್ಟಿಕ್ ಬಳಕೆಯ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಲು ಪ್ರಯತ್ನಿಸಲಾಗುವುದು.

ಕಟ್ಟುನಿಟ್ಟಿನ ಕ್ರಮ:

ಒಂದು ವೇಳೆ, ಯಾವುದೇ ದೇವಾಲಯದಲ್ಲಿ ಈ ನಿಯಮವನ್ನು ಉಲ್ಲಂಘಿಸಿ ಪ್ಲಾಸ್ಟಿಕ್ ವಸ್ತುಗಳು ಕಂಡುಬಂದರೆ, ಆಯಾ ದೇವಾಲಯದ ಆಡಳಿತ ಮಂಡಳಿ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ.

[t4b-ticker]
error: Content is protected !!