ಬೆಳ್ಳಂಬೆಳಗ್ಗೆ ದೆಹಲಿಯ ಮೂರು ಶಾಲೆಗಳಿಗೆ ಬಾಂಬ್ ಬೆದರಿಕೆ… ಪೊಲೀಸರಿಂದ ಶೋಧ ಕಾರ್ಯ

Picture of Savistara

Savistara

Bureau Report

ನವದೆಹಲಿ: ಇಂದು (ಆ.18) ಮುಂಜಾನೆ ದೆಹಲಿ ಪಬ್ಲಿಕ್ ಸ್ಕೂಲ್ ಸೇರಿದಂತೆ ಹಲವು ಶಾಲೆಗಳಿಗೆ ಬಾಂಬ್ ಬೆದರಿಕೆ ಬಂದಿರುವುದಾಗಿ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.ಈ ಕುರಿತು ಮಾಹಿತಿ ನೀಡಿದ ದೆಹಲಿ ಪೊಲೀಸರು, ದ್ವಾರಕಾದಲ್ಲಿರುವ ದೆಹಲಿ ಪಬ್ಲಿಕ್ ಸ್ಕೂಲ್ (DPS), ಮಾಡ್ರನ್ ಕಾನ್ವೆಂಟ್ ಸ್ಕೂಲ್ ಮತ್ತು ದ್ವಾರಕಾದ ಸೆಕ್ಟರ್ 10 ರಲ್ಲಿರುವ ಶ್ರೀರಾಮ್ ವರ್ಲ್ಡ್ ಸ್ಕೂಲ್ ಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಕರೆ ಬಂದಿರುವ ಕುರಿತು ದೂರು ಬಂದಿದ್ದು ಕೂಡಲೇ ಕಾರ್ಯಪ್ರವೃತ್ತರಾದ ತಂಡ ಶಾಲೆಗಳಿಗೆ ವಿದ್ಯಾರ್ಥಿಗಳನ್ನು ಬರದಂತೆ ಸೂಚನೆ ನೀಡಿದ್ದು ಜೊತೆಗೆ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ, ಬಾಂಬ್ ನಿಷ್ಕ್ರಿಯ ತಂಡ ಸ್ಥಳಕ್ಕೆ ಧಾವಿಸಿ ಶೋಧ ಕಾರ್ಯಾಚರಣೆ ನಡೆಸುತ್ತಿದೆ ಎಂದು ಹೇಳಿದ್ದಾರೆ.ಈ ಹಿಂದೆಯೂ ಹಲವಾರು ಬೆದರಿಕೆಗಳು ಬಂದಿದ್ದು ಯಾವುದೇ ಸ್ಫೋಟಕ ವಸ್ತುಗಳು ಪತ್ತೆಯಾಗಿರಲಿಲ್ಲ ಆದರೂ ಸುರಕ್ಷತೆಯ ದೃಷ್ಟಿಯಿಂದ ಶಾಲಾ ಆವರಣವನ್ನು ಕೂಲಂಕುಷವಾಗಿ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

[t4b-ticker]
error: Content is protected !!